ಪೋಸ್ಟ್‌ಗಳು

ಐತಿಹಾಸಿಕ ಸ್ಮಾರಕಗಳ ರಕ್ಷಣೆ-ಹಸರೀಕರಣ-ಸ್ವಚ್ಛತೆಗಾಗಿ ಡಿ.7ರಂದು ವೃಕ್ಷೋತ್ಥಾನ ಹೆರಿಟೇಜ್ ರನ್- ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಯಶಸ್ವಿಗೆ -ಸಚಿವ ಎಂ.ಬಿ.ಪಾಟೀಲ ಕರೆ

ಇಮೇಜ್
 ಐತಿಹಾಸಿಕ ಸ್ಮಾರಕಗಳ ರಕ್ಷಣೆ-ಹಸರೀಕರಣ-ಸ್ವಚ್ಛತೆಗಾಗಿ ಡಿ.7ರಂದು ವೃಕ್ಷೋತ್ಥಾನ ಹೆರಿಟೇಜ್ ರನ್- ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಯಶಸ್ವಿಗೆ  -ಸಚಿವ ಎಂ.ಬಿ.ಪಾಟೀಲ ಕರೆ ವಿಜಯಪುರ, ಸೆಪ್ಟೆಂಬರ್ 20 (ಕರ್ನಾಟಕ ವಾರ್ತೆ): ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಹಸರೀಕರಣಕ್ಕಾಗಿ, ಸ್ವಚ್ಛತೆಗಾಗಿ 2025ನೇ ಸಾಲಿನ ಡಿಸೆಂಬರ್ 7 ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ   ವೃಕ್ಷೋತ್ಥಾನ ಹೆರಿಟೇಜ್ ರನ್‍ನಲ್ಲಿ ಜಿಲ್ಲಾಡಳಿತ, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸಕ್ರೀಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ ಕರೆ ನೀಡಿದರು.  ಶನಿವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ವೃಕ್ಷೋತ್ಥಾನ ಹೆರಿಟೇಜ್ ರನ್ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಜಿಲ್ಲೆಯಲ್ಲಿ ಕಳೆದ 2016 ರಿಂದ ಕೋಟಿ ವೃಕ್ಷ ಅಭಿಯಾನ ಆರಂಭಿಸಲಾಗಿದ್ದು, ವೃಕ್ಷೋತ್ಥಾನ ಆರಂಭದಿಂದ ಇಲ್ಲಿಯವರೆಗೆ ಕೋಟಿ ವೃಕ್ಷ ಅಭಿಯಾನದಡಿ ಜಿಲ್ಲೆಯಲ್ಲಿ 1.50 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಆ ಮೂಲಕ ಅತ್ಯಂತ ಕಡಿಮೆ ಇದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ರಾಜ್ಯದ ಅರಣ್ಯ ಪ್ರದೇಶ ಸರಾಸರಿ  ಸಮತೋಲಕ್ಕೆ ತರುವ ನಿಟ್ಟಿನಲ್ಲಿ ...

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ

ಇಮೇಜ್
 ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ ವಿಜಯಪುರ: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು. ಕರ್ನಾಟಕ ರಾಜ್ಯ ಸೌಹಾರ್ದ್ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿ. ನಿರ್ದೇಶಕರಾದ ರಾಮನಗೌಡ ಪಾಟೀಲ ಯತ್ನಾಳ ರವರು, ವಿಜಯಪುರ ನಗರವು ಬೃಹತ್ತಾಗಿ ಬೆಳೆದಿದೆ ಮತ್ತು ವರ್ಷದಿಂದ ವರ್ಷಕ್ಕೆ ಎಲ್ಲ ದಿಕ್ಕಿನಲ್ಲಿಯೂ ಬೆಳೆಯುತ್ತಿದೆ. ಅದಕ್ಕೆ ಅನುಗುಣವಾಗಿ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಾರ್ವಜನಿಕರ ಸುರಕ್ಷತೆಯಿಂದ ಈ ಸಂಚಾರ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು, ಅಪಘಾತಗಳನ್ನು ತಡೆಯಲು, ಸುಧಾರಿತ ಸಂಚಾರ ಕಣ್ಗಾವಲು ವ್ಯವಸ್ಥೆಗಳು, ಪ್ರಮುಖ ವೃತ್ತಗಳ ಮೇಲ್ವಿಚಾರಣೆ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ಮತ್ತು ಸಂಯೋಜಿತ ಸಂವಹನ ಸೌಲಭ್ಯ ಒಳಗೊಂಡ ಸಂಚಾರ ಕಮಾಂಡ್ ಕೇಂದ್ರವನ್ನು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲು ಆರ್ಥಿಕ ನೆರವು ಕೋರಿ ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಮಾಡಿದಕ್ಕೆ ಸ...

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಆಗ್ರಹ ಮಾಡಿ ಮನವಿ ಸಲ್ಲಿಸಲಾಯಿತು.

ಇಮೇಜ್
 ವಿಜಯಪುರ : ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಗಾರರು ನೂರಾರುನಮಸ್ಯೆಗಳ ಮಧ್ಯ ಸಾವು ನೋವಿನ ಮಧ್ಯ ಹೋರಾಟ ಮಾಡುತ್ತಾ ಜೀವನ ಸಾಗಿಸುವಂತಾಗಿದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಆಗ್ರಹ ಮಾಡಿ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮಾತನಾಡುತ್ತಾ ಇಡೀ ಕರ್ನಾಟಕದಲ್ಲಿ ಅಂದಾಜು ೧ ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ, ವಿಜಯಪುರದಲ್ಲಿ ೭೦% ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ ೧೫-೨೦ ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ, ಆದರೆ ದಲ್ಲಾಳಿಗಳ ಹಾವಳಿ, ಮಾರುಕಟ್ಟೆಯ ಕೊರತೆ, ಕೋಲ್ಡ್ ಸ್ಟೋರೆಜ್ ಕೊರತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಖರ್ಚು, ಕೂಲಿಯವರ ಪಗಾರ, ಔಷಧ, ಗೊಬ್ಬರ ಇನ್ನಿತರ ಖರ್ಚು ಹತ್ತು ಪಟ್ಟು ಹೆಚ್ಚಾಗಿದೆ, ಇವುಗಳಿಂದ ಗೆದ್ದು ಬಂದ್ದರೆ, ರೋಗ ಹಾಗೂ  ಸರಿಯಾದ ಬೆಲೆ ಸಿಗದೇ ಬೀದಿಗೆ ಬಿದ್ದು ಅನೇಕ ರೈತರು ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ಇದೆ. ಕಳೆದ ತಿಂಗಳು ಸುರಿದಿರುವ ಅತೀ ಹೆಚ್ಚಿನ ಮಳೆಯಿಂದಾಗಿ ಅನೇಕ ರೈತರ ಜಮೀನಿನಲ್ಲಿ ನೀರು ನಿಂತು ನಷ್ಟ ಅನುಭವಿಸುವಂತಾಗಿದೆ ಇದನ್ನು ಮನಗಂಡು ವಿಮೆ ಹಾಗೂ ಸರಕಾರದಿಂದ ಪರಿಹಾರ ಕೊಡಬೇಕೆಂದು ಈ ಮೂಲಕ ಆಗ್ರಹಿಸುತ್ತೆವೆ ಎಂದರು. ಈ ಕೆಳಗಿನ ದ್ರಾಕ್ಷಿ ಬೆಳೆಗಾರರ ಪ್ರಮುಖ ಬೇಡ...

ಕೃಷ್ಣೆಯ ಜಲಧಿಗೆ, ಮುಖ್ಯಮಂತ್ರಿಗಳಿಂದ ಗಂಗಾಪೂಜೆ ಮತ್ತು ಬಾಗಿನ ಅರ್ಪಣೆ

ಇಮೇಜ್
 ಕೃಷ್ಣೆಯ ಜಲಧಿಗೆ, ಮುಖ್ಯಮಂತ್ರಿಗಳಿಂದ ಗಂಗಾಪೂಜೆ ಮತ್ತು ಬಾಗಿನ ಅರ್ಪಣೆ ವಿಜಯಪುರ: ಸೆ.06:   ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಕೃಷ್ಣೆಯ ಜಲಧಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಬುಧವಾರ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿಗಳಾದ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ,ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ,ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಉಗ್ರವಾಗಿ ಪ್ರತಿಭಟನೆ ಒಳ ಮೀಸಲಾತಿ ಜಾರಿ: ವಿರೋಧದ ಕೂಗು ಜೋರು

ಇಮೇಜ್
 ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಉಗ್ರವಾಗಿ ಪ್ರತಿಭಟನೆ ಒಳ ಮೀಸಲಾತಿ ಜಾರಿ: ವಿರೋಧದ ಕೂಗು ಜೋರು ವಿಜಯಪುರ :  ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ಚೌಕ ಮಾರ್ಗವಾಗಿ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿಗಳಿಗೆ ತೆರಳಿ ಬಂಜಾರಾ ಭೋವಿ ಕೋರಚ ಕೋರಮ ಭಜಂತ್ರಿ ಸಮುದಾಯ ಸೇರಿಕೊಂಡು ತಮ್ಮ ಕುಲ ಕಸಬು ಪ್ರದರ್ಶನ ಮಾಡಿ ಉಗ್ರವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಿ ಬಂಜಾರ ಸಮುದಾಯದ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾ ಎಚ್.ಎನ್.ನಾಗಮೋಹನ್ ದಾಸ್‌ ಆಯೋಗದ ವರದಿ ಸಂಪೂರ್ಣ ಸುಳ್ಳು ವರದಿಯಾಗಿದ್ದು ಇದನ್ನು ಸಮುದಾಯ ತೀವ್ರವಾಗಿ ಕಂಡಿಸುತ್ತೇವೆ. ಸಮಾಜದಲ್ಲಿ ಎಲ್ಲಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ನಮ್ಮ ಕರ್ನಾಟಕ ರಾಜ್ಯದಲ್ಲಿ ೧೦೧ ಪರಿಶಿಷ್ಟ ಜಾತಿಗಳ ಹೋಮೋಜಿನಿಯಸ್ ಎಂಬ ಪದಕ್ಕೆ ಒಳಪಡಿಸಿ ಮತ್ತು ಜಾತಿಗಳ ದತ್ತಾಂಶಗಳನ್ನು  ಕ್ರೋಢೀಕರಿಸಿ,ನೀಡಿರುವ ವರದಿ ಸಂವಿಧಾನದ ಆರ್ಟಿಕಲ ೩೪೧(೨) ರಂತ ಆಯೋಗಕ್ಕಾಗಲೀ ಅಥವಾ ರಾಜ್ಯ ಸರಕಾರಕ್ಕೆ ಮೀಸಲಾತಿ ಸೌಲಭ್ಯ ನೀಡಲು ಯಾವುದೇ ಅಧಿಕಾರವನ್ನು ಹೊಂದಿರುವುದಿಲ್ಲ. ವರದಿಯನ್ನು ಯಾವುದೇ ರೀತಿಯಿಂದ ತಾವು ಒಪ್ಪಿಕೊಳ್ಳದೆ ಹಾಗೂ ಮನ್ನಣೆ ಮಾಡದೇ ತಿರಸ್ಕಾರ ಮಾಡಬೇಕೆಂದು ತೀವ್ರವಾಗಿ ಆಗ್ರಹಿಸುತ್ತೇವೆ.  ಅದಾಗಿ ಏಕಸದಸ್ಯ ಆಯ...

ಶಿಕ್ಷಕರ ದಿನಾಚರಣೆ: ಜಿಲ್ಲಾ ಆತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ -ರಮೇಶ ಜಿಗಜಿಣಗಿ

ಇಮೇಜ್
 ಶಿಕ್ಷಕರ ದಿನಾಚರಣೆ: ಜಿಲ್ಲಾ ಆತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ -ರಮೇಶ ಜಿಗಜಿಣಗಿ ವಿಜಯಪುರ, ಸೆಪ್ಟಂಬರ್ 5:  ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು  ಸಂಸದ ರಮೇಶ ಜಿಗಜಿಣಗಿ ಹೇಳಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿ ಪಾಠ ಬೊಧನೆ ಮಾಡುವ ಮೂಲಕ ಮುಂದಿನ ಉತ್ತಮ ನಾಗರಿಕರನ್ನಾಗಿ ರೂಪಿಸುವ ಬಹು ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ. ಕಲ್ಲಿನ ಮೂರ್ತಿಯನ್ನು ಶಿಲೆಯನ್ನಾಗಿಸುವಂತೆ ಅಮೂರ್ತ ರೂಪದ ಮಕ್ಕಳನ್ನು ಮೂರ್ತರೂಪ ಕೊಡುವ ಮಕ್ಕಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಮಕ್ಕಳ ಅಂತರಾಳವನ್ನು ಅರಿತು, ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ ಮಕ್ಕಳು ಸುಂದರ ವ್ಯಕ್ತಿತ್...

ಆಧುನಿಕ‌ ಭಗೀರಥ ಎಂ. ಬಿ. ಪಾಟೀಲ‌ ಅವರ ಕನಸಿನ ಕೂಸಾದ ಕೋಟಿ ವೃಕ್ಷ ಅಭಿಯಾನ ಇಂದು ಯಶಸ್ವಿಯಾಗಿ ಇಡೀ ಪ್ರಪಂಚವನ್ನು ತಲುಪಿದೆ

ಇಮೇಜ್
 ವಿಜಯಪುರ:  ಪ್ರಾರಂಭವಾದ ಕೋಟಿ ವೃಕ್ಷ ಅಭಿಯಾನದ ಯಶೋಗಾಥೆ ವಿಶ್ವಾದ್ಯಂತ ಸದ್ದು ಮಾಡಿದ್ದು, ಅಮೇರಿಕದ ಪ್ರತಿಷ್ಠಿತ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಈ ಕುರಿತು ವಿಶೇಷ ವರದಿ ಪ್ರಕಟಿಸಿದೆ.  ಈ ಸಂತಸವನ್ನು ವೃಕ್ಷಥಾನ್ ಹೆರಿಟೇಜ್ ರನ್- 2025 ಕೋರ್ ಕಮಿಟಿ ಸದಸ್ಯರು ಸಸಿ ನೆಡುವ ಮೂಲಕ ಸಂಭ್ರಮಿಸಿದರು.ಇಂದು ಶುಕ್ರವಾರ ಬಿ.ಎಲ್.ಡಿ.ಇ‌ ಸಂಸ್ಥೆಯ ಆವರಣದಲ್ಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಚೇರಿಯ ಬಳಿ ನಡೆದ ಕಾರ್ಯಕ್ರಮದಲ್ಲಿ ಇಂಗ್ಲೆಂಡ್ ನಲ್ಲಿ ನೆಲೆಸಿರುವ ವಿಜಯಪುರ ಮೂಲದ ಸಾಫ್ಟವೇರ್ ಎಂಜಿನಿಯರ್ ಸದಾನಂದ ಬಿರಾದಾರ ಅವರು ಸಸಿ ನೆಟ್ಟರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ‌ ಭಗೀರಥ ಎಂ. ಬಿ. ಪಾಟೀಲ‌ ಅವರ ಕನಸಿನ ಕೂಸಾದ ಕೋಟಿ ವೃಕ್ಷ ಅಭಿಯಾನ ಇಂದು ಯಶಸ್ವಿಯಾಗಿ ಇಡೀ ಪ್ರಪಂಚವನ್ನು ತಲುಪಿದೆ.  ಅದೇ ರೀತಿ ಜಲ, ನೀರು, ಶಿಕ್ಷಣ ಹಾಗೂ ಆರೋಗ್ಯ ಧ್ಯೇಯವನ್ನೊಳಗೊಂಡಿರುವ ವೃಕ್ಷಥಾನ್ ಹೆರಿಟೇಜ್ ರನ್ ಕೂಡ ಶೀಘ್ರದಲ್ಲಿ ಜಗತ್ತಿನಾದ್ಯಂತ ಖ್ಯಾತಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ಯಪಡಿಸಿದರು. ಬಳಿಕ ನಡೆದ ಕೋರ್ ಕಮಿಟಿ ಸಭೆಯಲ್ಲಿ ಡಾ. ಮಹಾಂತೇಶ ಬಿರಾದಾರ ಅವರು ಡಿಸೆಂಬರ್ 7ರಂದು ನಡೆಯಲಿರುವ ಹೆರಿಟೇಜ್ ರನ್- 2025ರ ಪೂರ್ವ ಸಿದ್ಧತೆಗಳ ಸಭೆ ನಡೆಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯ, ದೇಶ ಮತ್ತು ವಿದೇಶಗಳಿಂದ ಸುಮಾರು‌15 ಸಾವಿರ ಓಟಗಾರರು ಪಾಲ್ಗೊಳ್ಳುವ ನಿರೀಕ್ಷೆಯಿದೆ.  ...

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಸ್ವಾಗತಾರ್ಹ – ಆಪ್ ಜಿಲ್ಲಾಧ್ಯಕ್ಷಭೋಗೇಶ್ ಸೋಲಾಪುರ

ಇಮೇಜ್
 ವಿಜಯಪುರ.  : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಸ್ವಾಗತಾರ್ಹ – ಆಪ್ ಜಿಲ್ಲಾಧ್ಯಕ್ಷಭೋಗೇಶ್ ಸೋಲಾಪುರ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ವಿ ಪಕ್ಷ ಸ್ವಾಗತಿಸಿದೆ. ಇತ್ತೀಚೆಗೆ ಅನೇಕ ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತ ಕಳ್ಳತನ ಆಗಿದೆ ಎಂಬ ಸಾಕ್ಷ್ಯಸಮೇತದ ಇಂಡಿಯಾ ಒಕ್ಕೂಟದ ನಾಯಕರುಗಳ ಗುರುತರ  ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡದ ಪ್ರಧಾನಿಗಳ ಉದ್ಧಟತನ ಒಂದು ಕಡೆ.  ಮತ್ತೊಂದು ಕಡೆ ಆರೋಪಿತ ಸ್ಥಾನದ ಕೇಂದ್ರ ಚುನಾವಣಾ ಆಯೋಗವು ಸೂಕ್ತ ಸ್ಪಷ್ಟೀಕರಣಗಳನ್ನು ಹಾಗೂ ಸಮಜಾಯಿಶಿ ಗಳನ್ನು ನೀಡದೆ, ಆರೋಪ ಮಾಡಿದ್ದ ನಾಯಕರುಗಳ ವಿರುದ್ಧವೇ  ರಾಜಕೀಯ ಪ್ರತಿಕ್ರಿಯೆಗಳನ್ನು ನೀಡಿ ಮುಚ್ಚಿ ಹಾಕುವ ಯಂತ್ರಗಾರಿಕೆಯಲ್ಲಿ ತೊಡಗಿತ್ತು.  ಇವರ ನಡೆಯಿಂದಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ  ಆಮೂಲಾಗ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಇಚ್ಛೆ ಇಲ್ಲದಿರುವುದು ದೇಶದ ಜನತೆಗೆ ಸ್ಪಷ್ಟವಾಗಿ ಗೊತ್ತಾಗುತ್ತಿದೆ.  ಈ ಸಂದರ್ಭದಲ್ಲಿ  ಕರ್ನಾಟಕ ರಾಜ್ಯ ಸರ್ಕಾರವು  ಇಂತಹ ಕಠಿಣ ಸಂದರ್ಭದಲ್ಲಿ ಬ್ಯಾಲೆಟ್ ಪೇಪರ್ ಬಳಕೆಯ ನಿರ್ಧಾರ ಕೈಗೊಂಡಿರುವುದು ಅತ್ಯಂತ ಸ್ವಾಗತರ್ಹ ಕ್ರಮ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷರಾದ ...

ದೇವರ ಸ್ವರೂಪದಲ್ಲಿ ಶಿಕ್ಷಕರನ್ನು ಪೂಜಿಸುವ ದೇಶ ನಮ್ಮ ಭಾರತ ದೇಶವಾಗಿದೆ ಎಂದು ಜಮಖಂಡಿಯ ಓಲೆಮಠದ ಆನಂದ ದೇವರು ಸ್ವಾಮೀಜಿ ಹೇಳಿದರು

ಇಮೇಜ್
 ವಿಜಯಪುರ: ದೇವರ ಸ್ವರೂಪದಲ್ಲಿ ಶಿಕ್ಷಕರನ್ನು ಪೂಜಿಸುವ ದೇಶ ನಮ್ಮ ಭಾರತ ದೇಶವಾಗಿದೆ ಎಂದು ಜಮಖಂಡಿಯ ಓಲೆಮಠದ ಆನಂದ ದೇವರು ಸ್ವಾಮೀಜಿ ಹೇಳಿದರು.ನಗರದ ತೊರವಿ ರಸ್ತೆಯಲ್ಲಿರುವ ಜಿ.ಕೆ‌.ಪಾಟೀಲ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯದ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಏರ್ಪಡಿಸಿದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಒಬ್ಬ ಆಶ್ಯಕ್ತನನ್ನು ಸಶಕ್ತನನ್ನಾಗಿ ಮಾಡುವ ಶಕ್ತಿ ಗುರುವಿಗಿದೆ. ಶಿಕ್ಷಕ, ರೈತ, ಸೈನಿಕ ಈ ಮೂವರು ದೇಶಕ್ಕೆ ಅಮೂಲ್ಯವಾದ ರತ್ನಗಳಾಗಿವೆ. ಯಾವ ಸ್ವಾರ್ಥವನ್ನು ಬಯಸದೇ ಅಕ್ಷರ ಕಲಿಸುವ ಮನೋಭಾವ ಉಳ್ಳವರಾಗಿದ್ದಾರೆ. ಗುರಿ ಮುಟ್ಟಬೇಕಾದರೆ ಗುರು ಬೇಕು. ಮಕ್ಕಳಲ್ಲಿ ಒಳ್ಳೆಯ ಶಿಕ್ಷಣ ಕೊಡಬೇಕು. ಶಿಕ್ಷಕ ಒಬ್ಬ ಇರದಿದ್ದರೆ ಏನು ಆಗಲ್ಲ. ಎಲ್ಲ ಸಾಧಕರಿಗೂ ಒಬ್ಬ ಗುರು ಇದ್ದೇ ಇರತಾನೆ. ಅಂತರಾಳದ ಜ್ಞಾನ ಪಡೆದುಕೊಳ್ಳಬೇಕು ಆ ಜ್ಞಾನ ಮಾತ್ರ ನಿನ್ನ ಸಂಪತ್ತು. ಜ್ಞಾನ ಇದ್ದರೆ ಜಗತ್ತೆ ಬಾಗುತ್ತದೆ ಎಂದರು. ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ ಶಿಕ್ಷಕರ ಸ್ಥಾನ ವಿಶೇಷವಾದುದು, ಜಗತ್ತಿಗೆ ದಿವ್ಯ ಜ್ಞಾನ ಕೊಡುವ ಕಾರ್ಯ ಶಿಕ್ಷಕರ ಮೇಲಿದೆ. ತಂದೆ ತಾಯಿ ನಂತರದ ಸ್ಥಾನ ಗುರುವಿಗಿದೆ. ದೇವರ ಸಮಾನರಾದ ಶಿಕ್ಷಕ ಎಲ್ಲರಿಗಿಂತ ಹೆಚ್ಚಿನ ಸ್ಥಾನ ಸಮಾಜದಲ್ಲಿ ಹ...

ಬಿಜಾಪುರದಲ್ಲಿ ಸರರ್ಕಾರಿ ಕಾಲೇಜನ್ನು ಸಂಪೂರ್ಣವಾಗಿ ಸರ್ಕಾರವೇ ಜವಾಬ್ದಾರಿ ತೆಗೆದುಕೊಂಡು ಮಾಡಬೇಕು ಆಗ್ರಹ.

ಇಮೇಜ್
 ವಿಜಯಪುರ  ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಚಲನಾ ಸಮಿತಿ ಸದಸ್ಯರಾದ ಅರವಿಂದ ಕುಲಕರ್ಣಿ ಯವರು ಮಾತನಾಡುತ್ತಾ ಪಿಪಿಪಿ ಮಾದರಿಯನ್ನು ಕೈಬಿಡಬೇಕು, ಸರ್ಕಾರ ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.ಇನ್ನೊರ್ವ ಸಮಿತಿ ಸದಸ್ಯರಾದ ಬಿ.ಭಗವನ್ ರೆಡ್ಡಿ ಯವರು ಮಾತನಾಡುತ್ತಾ ಇಂದು ಸರ್ಕಾರಿ ಕಾಲೇಜನ್ನು ಸಂಪೂರ್ಣವಾಗಿ ಸರ್ಕಾರವೇ ಜವಾಬ್ದಾರಿ ತೆಗೆದುಕೊಂಡು ಮಾಡಬೇಕು. ೯ ನೇ ತಾರೀಖಿನಂದು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಈ ರ‍್ಯಾಲಿಗೆ ಜಿಲ್ಲೆಯ ಎಲ್ಲಾ ಸಾಹಿತಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.ಅಣ್ಣರಾಯ ಈಳಗೇರ ರವರು ಮಾತನಾಡುತ್ತಾ ಯಾವುದೇ ಕಾರಣಕ್ಕೂ ವೈದ್ಯಕೀಯ ಕಾಲೇಜನ್ನು ಖಾಸಗೀಯವರಿಗೆ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಹೇಳಿದರು. ಶ್ರೀನಾಥ ಪೂಜಾರಿಯವರು ಮಾತನಾಡುತ್ತಾ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ೧೫೦ ಕ್ಕೂ ಅಧಿಕ ಜಾಗವಿರುವ ಏಕೈಕ ಜಿಲ್ಲೆ ಇದಾಗಿದ್ದು, ವಿದ್ಯಾರ್ಥಿ ಯುವಕರು ಇದರ ವಿರುದ್ದ ಗಟ್ಟಿ ದ್ವನಿಯಾಗಬೇಕು. ಒಂದು ವೇಳೆ ಖಾಸಗಿಯವರಿಗೆ ಅವಕಾಶ ಕೊಟ್ಟರೆ ಜಿಲ್ಲಾ ಬಂದ್ ಗೆ ಕರೆ ಕೊಡಬೇಕಾಗುತ್ತದೆ ಎಂದರು. ಕೆ ಎಫ್ ಅಂಕಲಗಿ ಯವರು ಮಾತನಾಡುತ್ತ...

ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಂಡಳದ ಗಣೇಶ ವಿಸರ್ಜನಾ ಮೆರವಣಿಗೆ ಸಮಾರಂಭ

ಇಮೇಜ್
 ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಂಡಳದ ಗಣೇಶ ವಿಸರ್ಜನಾ ಮೆರವಣಿಗೆ ಸಮಾರಂಭ ಸನಾತನ ಧರ್ಮ ಉಳಿದರೆ ಭಾರತ ಉಳಿಯಲು ಸಾಧ್ಯ; ಶಾಸಕ ಯತ್ನಾಳ ವಿಜಯಪುರ: ಸನಾತನ ಧರ್ಮ ಉಳಿದರೆ ಮಾತ್ರ ಭಾರತ ದೇಶ ಉಳಿಯಲು ಸಾಧ್ಯ. ಹೀಗಾಗಿ ಸನಾತನ ಹಿಂದೂ ಧರ್ಮದ ರಕ್ಷಣೆಗಾಗಿ, ದೇಶದ ಉಳಿವಿಗಾಗಿ ನಾವೇಲ್ಲರೂ ಒಂದಾಗುವುದು ಅನಿವಾರ್ಯವಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕರೆ ನೀಡಿದರು. ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಮುಂಭಾಗದ ಶತಮಾನ ಕಂಡ ಸಂತ, ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿಯವರ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಮಂಗಳವಾರ ರಾತ್ರಿ ಹಮ್ಮಿಕೊಂಡಿದ್ದ ಗಣೇಶ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬೇರೆಯವರಂತೆ, ದೇಶದ ಅನ್ನ ತಿಂದು, ನೀರು ಕುಡಿದು, ಗಾಳಿ ಸೇವಿಸುವ ಯಾವೊಬ್ಬ ಹಿಂದೂ ದೇಶದ್ರೋಹಿ ಕೆಲಸ ಮಾಡಲ್ಲ, ಅದೇ ಸನಾತನ ಧರ್ಮ. ರಾಮಾಯಣ ವಾಲ್ಮೀಕಿ ಬರೆದರು, ಮಹಾಭಾರತ ವೇದ ವ್ಯಾಸರು ಬರೆದರು, ದೇಶದ ಪವಿತ್ರ ಸಂವಿಧಾನ ನಾನು ಬರೆಯುತ್ತಿರುವೆ ಎಂದು ಸ್ವತ ಸಂವಿಧಾನ ಶಿಲ್ಪಿ ಅಂಬೇಡ್ಕರ ಅವರೇ ಹೇಳಿಕೊಂಡಿದ್ದಾರೆ. ಎಲ್ಲಿದೆ ಜಾತಿ? ಜಾತಿ ಜಾತಿಯಿಂದ ಹೊರ ಬಂದು ನಾವೇಲ್ಲ ಒಂದಾಗಬೇಕು. ದಲಿತ ಯುವಕರು ಅಂಬೇಡ್ಕರ್ ರವರು ಬರೆದಿರುವ ಪುಸ್ತಕಗಳನ್ನು ಓದಿ, ಹಿಂದೂ ಸಮಾಜದ ಯಾವ ಜಾತಿಯಿಂದಲೂ ದಲಿತ ಸಮುದಾಯದವರಿಗೆ ಅಪಾಯವಿಲ್ಲ. ನೀವು ನಾವು ಕೂಡಿದ್...

ಸೆಪ್ಟೆಂಬರ್ 6ರಂದು ಮುಖ್ಯಮಂತ್ರಿಗಳಿಂದ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ

ಇಮೇಜ್
 ಸೆಪ್ಟೆಂಬರ್ 6ರಂದು ಮುಖ್ಯಮಂತ್ರಿಗಳಿಂದ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ವಿಜಯಪುರ  ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 6ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಕನ್ನಡ ನಾಡಿನ ಪ್ರತಿಷ್ಠಿತ ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ ಘನ ಉಪಸ್ಥಿತಿ ವಹಿಸಲಿದ್ದಾರೆ. ಜವಳಿ,ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಘನ ಅಧ್ಯಕ್ಷತೆ ವಹಿಸಲಿದ್ದಾರೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಅಬಕಾರಿ ಖಾತೆ ಸಚಿವರಾದ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಆರ್.ಬಿ.ತಿಮ್ಮಾಪೂರ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಗಣೇಶ ವಿಸರ್ಜನೆ ಸಮಯದಲ್ಲಿ ಆದಂತಹ ಅವಗಢ ಹಾಗೂ ಹೆಸ್ಕಾಂ ಇಲಾಖೆಯ ನಿರ್ಲಕ್ಷö್ಯತನದಿಂದ ಆದ ಅನಾಹುತಕ್ಕೆ ಹಾಗೂ ಸಾವಿಗೀಡಾದ ಯುವಕನಾದ ಶುಭಂ ಸಂಕಪಾಳ ಇವರ ಕುಟುಂಬಕ್ಕೆ ಸರಕಾರಿ ನೌಕರಿ ನೀಡುವಂತೆ ಆಗ್ರಹಿಸಿ ಮನವಿ.

ಇಮೇಜ್
 ವಿಜಯಪುರ : ೭ನೇ ದಿನದ ಗಣೇಶೋತ್ಸವ ನಿಮಿತ್ಯವಾಗಿ ಗಣೇಶ ವಿಸರ್ಜನೆ ಸಮಯದಲ್ಲಿ ಆದಂತಹ ಅವಗಢ ಹಾಗೂ ಹೆಸ್ಕಾಂ ಇಲಾಖೆಯ ನಿರ್ಲಕ್ಷö್ಯತನದಿಂದ ಆದ ಅನಾಹುತಕ್ಕೆ ಹಾಗೂ ಸಾವಿಗೀಡಾದ ಯುವಕನಾದ ಶುಭಂ ಸಂಕಪಾಳ ಇವರ ಕುಟುಂಬಕ್ಕೆ ಸರಕಾರಿ ನೌಕರಿ ನೀಡುವಂತೆ ಆಗ್ರಹಿಸಿ ಜಾಗೃತ ಹಿಂದೂ ಮಂಜ್, ವಿಜಯಪುರ ವತಿಯಿಂದ ಮನವಿ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಜಾಗೃತ ಹಿಂದೂ ಮಂಜ್ ಅಧ್ಯಕ್ಷರಾದ ಶಿವಾನಂದ ಭುಯ್ಯಾರ ಮಾತನಾಡಿ,   ನೊಂದು ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ಶಿವಾನಂದ ತಿಳಿಸಿದರು ನಿನ್ನೆ ನಡೆದ ಗಣೇಶ್ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ವಿದ್ಯುತ್ಪರ್ಷದಿಂದ ೨೨ ವಯಸ್ಸಿನ ಹದಿ ಹರೆಯದ ಯುವಕ ಬಲಿಯಾಗಿದ್ದು ಹೆಸ್ಕಾಂ ನಿರ್ಲಕ್ಷತನದಿಂದ  ಮನೆಯ ಬೆಳಗುವ ಹೆಸ್ಕಾಂ ಅಧಿಕಾರಿಗಳು ಇಡೀ ಜಿಲ್ಲೆ ಇಡೀ ನಗರದಲ್ಲಿ ನಿನ್ನೆ ಕತ್ತಲೆ ಕತ್ತಲೆ ಆವರಿಸಿ ದಂತಾಯಿತು ಮಗನ್ನ ಕಳೆದುಕೊಂಡ ಕುಟುಂಬಕ್ಕೆ ಬದುಕೆ ಕತ್ತಲಾಯಿತು ಕಾರಣ ತಂದೆ ತಾಯಿಯ ಸಲಹುವೇ ಜವಾಬ್ದಾರಿ ಹೊತ್ತ ಮಗ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ಹೆಸ್ಕಾಂ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ಕುಟುಂಬದ ಸಹೋದರಿಗೆ ನೌಕರಿ ಕೊಡಿಸಬೇಕೆಂಬ ಆಗ್ರಹಪಡಿಸಿದರು. ಶರಣು ಸಬರದ ಜಾಗೃತ ಹಿಂದೂ ಮಂಜ್ ಕಾರ್ಯದರ್ಶಿಯಾದ ಶರಣು ಸಬರದ ರವರು ಮಾತನಾಡಿ  ಜನಸಂದಣಿಯಲ್ಲಿ ಹೆಸ್ಕಾಂ ಇಲಾಖೆಯು ಹ...

ಚಡಚಣ: ತಾಲೂಕಿನ ದೇವರ ನಿಂಬರಗಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ.

ಇಮೇಜ್
 ಚಡಚಣ: ತಾಲೂಕಿನ ದೇವರ ನಿಂಬರಗಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ.  ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಎಂಬುವರ ಮೇಲೆ ದುಷ್ಕರ್ಮಿಗಳು 4 ಬಾರಿ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಮಹಾದೇವ ಭೈರಗೊಂಡ ಪರಮಾಪ್ತ ಭೀಮನಗೌಡ ಬಿರಾದಾರ ಸಹಜವಾಗಿಯೇ  ಇಂದು ಮುಂಜಾನೆ ಪಂಚಾಯಿತಿ ಬಳಿಯ ತಲೆಗೂದಲು ಕಟಿಂಗ್ ಅಂಗಡಿಗೆ ಬಂದ ಘಳಿಗೆಯಲ್ಲಿ  ಅಂಗಡಿಗೆ ಧಾವಿಸಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಭೀಮನಗೌಡನ ತಲೆಗೆ ಫೈರಿಂಗ್ ಮಾಡಿ ಹತ್ಯೆಗೈದಿದ್ದಾರೆ. ಬಳಿಕ ಈ ಕೃತ್ಯ ಎಸಗಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ.  ಇದಕ್ಕೆ ಹಳೆಯ ವೈಷ್ಯಮ್ಯವೇ ಕಾರಣ ಎಂದು ತಿಳಿದುಬಂದಿದೆ. ಈ ಸುದ್ದಿ ತಿಳಿದ ಚಡಚಣ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಈ ಕುರಿತು ತನಿಖೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಮಾಜಕಲ್ಯಾಣ ಅಧಿಕಾರಿಗಳ ನಿಲ೯ಕ್ಷ್ಯದಿಂದ ಪ್ರತಿಷ್ಠಿತ ಶಾಲೆಗಳಲ್ಲಿ ಸೌಲಭ್ಯ ವಂಚಿತ sc/st ವಿದ್ಯಾರ್ಥಿಗಳು -ಶಿವಾನಂದ ಹರಿಜನ ಆರೋಪ.

ಇಮೇಜ್
 ಸಮಾಜಕಲ್ಯಾಣ ಅಧಿಕಾರಿಗಳ ನಿಲ೯ಕ್ಷ್ಯದಿಂದ ಪ್ರತಿಷ್ಠಿತ ಶಾಲೆಗಳಲ್ಲಿ ಸೌಲಭ್ಯ ವಂಚಿತ sc/st ವಿದ್ಯಾರ್ಥಿಗಳು -ಶಿವಾನಂದ ಹರಿಜನ ಆರೋಪ.                                   ವಿಜಯಪುರ -ಜಿಲ್ಲಾ ಸಮಾಜಕಲ್ಯಾಣ ಅಧಿನದಲ್ಲಿರುವ ಒಟ್ಟು 09 ಪ್ರತಿಷ್ಠಿತ ಶಾಲೆಗಳಿವೆ.ಈ ಶಾಲೆಗಳಿಗೆ ಇಲಾಖೆಯ ವತಿಯಿಂದ ಪ್ರತಿವಷ೯5ನೇ ತರಗತಿ ಓದುತ್ತಿರುವ  sc/st ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಇಲಾಖೆಯು ಅಜಿ೯ಆವ್ಹಾನಿಸಿ  ,ಅವರಿಗೆ ಜಿಲ್ಲಾವಾರು ಸಿ.ಇ.ಟಿ.ಪರೀಕ್ಷೆ  ನಡೆಸಿ,ಅಹ೯ವಿದ್ಯಾಥಿ೯ಗಳನ್ನುಮೇರಿಟ್ ಮೂಲಕ ಆಯ್ಕೆ ಸಮಿತಿಯು ಸಂಬಂಧಿಸಿದ ಪ್ರತಿಷ್ಠಿತ ಶಾಲೆಗಳಿಗೆ ಕೌನ್ಸಿಲಿಂಗ್ ಮೂಲಕ (6ರಿಂದ10ನೇ ಅಥವಾ12ನೇ) ಪ್ರವೇಶ ಪಡೆಯುವಂತೆ ವ್ಯವಸ್ಥೆ ಮಾಡುತ್ತಾರೆ. ಆದರೆ ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆಂದೇ ಸರಕಾರ ಸಾಕಷ್ಟು ಹಣ ಆಯಾ ವಿದ್ಯಾರ್ಥಿಗಳ ಪರವಾಗಿ ಆಯಾ ಶಾಲೆಗಳಿಗೆ ಸಂದಾಯ ಮಾಡುತ್ತದೆ.ಆದರೆ ವಿದ್ಯಾರ್ಥಿಗಳ ದುದೈ೯ವ ಆಯಾ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಒಂದು ವಷ೯,ಒಂದು ಬಾರಿ ಮಾತ್ರ ಸಮವಸ್ತ್ರ ಕೊಡುತ್ತಾರೆ.ಎರಡನೇ ವಷ೯ ಇಲ್ಲ.ಇದೊಂದೇ ‌ಸೌಲಭ್ಯ .ಇತರೆ ಯಾವುದೇ ಸೌಲಭ್ಯ ಕೊಡುವುದಿಲ್ಲ. ಸಮಾಜಕಲ್ಯಾಣ ಅಧಿಕಾರಿಗಳಿಗೆ ಪಾಲಕರು ಕೇಳಿದಾಗ ಅವರು ಹೇಳೋದು ಸಮವಸ್ತ್ರಗಳು , ನೋಟ್ ಪುಸ್ತಕ, ಕೊಬ್ಬರಿ ...

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು