ಕುರುಬ ಸಮಾಜಕ್ಕೆ ಎಸ್.ಟಿ ಮಿಸಲಾತಿಗೆ ಆಗ್ರಹ.

ಇಂಡಿ: ಕುರುಬ ಸಮಾಜಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ನೀಡಲು ಕಾಗಿನೆಲೆಯ ನಿರಂಜನಾನಂದ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡ ಬೆಂಗಳೂರು ಚಲೋ ಪಾದಯಾತ್ರೆಯಲ್ಲಿ ಇಂಡಿ ತಾಲ್ಲೂಕಿನ ಕುರುಬ ಸಮಾಜ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕುರುಬ ಸಮಾಜದ ಯುವ ಮುಖಂಡ, ಬಬಲಾದ ಗ್ರಾಮ ಪಂಚಾಯತ್ ಸದಸ್ಯ ಯಲಗೊಂಡ ಪೂಜಾರಿ ಮನವಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವೀರ ಸಂಗೊಳ್ಳಿ ರಾಯಣ್ಣ, ಕನಕದಾಸರರು, ಸೇರಿದಂತೆ ಅನೇಕ್ ಮಹಾಂತ ಶರಣರು ನಮ್ಮ ಸಮುದಾಯದಲ್ಲಿ ಆಗಿ ಹೋಗಿದ್ದಾರೆ. ನಮ್ಮ ಸಮುದಾಯ ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಅತೀ ಹಿಂದುಳಿದ ಸಮುದಾಯವಾಗಿದೆ. ಸಮುದಾಯದವರನ್ನು ಮೇಲೆತ್ತಲು ನಮಗೆ ಮೀಸಲಾತಿಯ ಅವಶ್ಯಕತೆ ಇದೆ. ಶ್ರೀಗಳು ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಮತ್ತು ಪ್ರತಿಭಟನೆಗೆ ರಾಜ್ಯದ ಕುರುಬ ಸಮುದಾಯ ಬೆಂಬಲ ಸೂಚಿಸಬೇಕು. ಇಂಡಿ ತಾಲ್ಲೂಕಿನಿಂದಲೂ ಸಾಕಷ್ಟು ಜನ ಈಗಾಗಲೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಇನ್ನೂ ಹೆಚ್ಚಿನ ಜನ ಸೇರಿ ಪಾದಯಾತ್ರೆ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಪಂಚಮಸಾಲಿ ಸಮಾಜ ಬಾಂಧವರು 2ಎ ಮೀಸಲಾತಿ ಕೇಳುತ್ತಿದ್ದು ಅವರಲ್ಲಿಯೂ ಸಾಕಷ್ಟು ಜನ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ.ಹೀಗಾಗಿ ಅವರಿಗೂ ಮೀಸಲಾತಿಯ ಅವಶ್ಯವಿದ್ದು ಅವರಿಗೂ ಮೀಸಲಾತಿ ನೀಡಬೇಕೆಂದು ಮನವಿ ಮಾಡಿದರು.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು