ಕರ್ನಾಟಕ ಎಂದ ಮೇಲೆ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳುವುದರೊಂದಿಗೆ ನೆಲ ಜಲ ಭಾಷೆ ರಕ್ಷಣೆ ಮಾಡಬೇಕು

 ಇಂಡಿ


ಕನ್ನಡ ನಾಡು ನುಡಿ ಮೇಲೆ ನಡೆಯುತ್ತಿದ್ದ ದಬ್ಟಾಳೆಕೆಗಳಿಗೆ ತಕ್ಕ ಉತ್ತರ ನೀಡುವುದರೊಂದಿಗೆ

ಕನ್ನಡವನ್ನು ರಕ್ಷಣೆ ಮಾಡಲು ಕರ್ನಾಟಕ ರಕ್ಷಣಾ  ವೇದಿಕೆ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ ಹೇಳಿದರು.


ಗುರುವಾರ ಪಟ್ಟಣದ ಶಂಕರ್ ಪಾರ್ವತಿ ಮಂಗಲ ಕಾರ್ಯಾಲಯದ ಸಭಾಭವನದಲ್ಲಿ ಏರ್ಪಡಿಸಿದ ಕಾರ್ಯಕರ್ತರ ಸಭೆ ಹಾಗೂ ಪದಾಧಿಕಾರಿಗಳು ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತಾನಾಡಿದರು.


ಕರ್ನಾಟಕ ಎಂದ ಮೇಲೆ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳುವುದರೊಂದಿಗೆ ನೆಲ ಜಲ ಭಾಷೆ ರಕ್ಷಣೆ

ಮಾಡಬೇಕು. ಕನ್ನಡವೇ ಧರ್ಮ, ಕನ್ನಡವೇ ಜಾತಿ, ಕನ್ನಡವೇ ದೇವರು ಎಂದು ಭಾವಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಗೌರವದೊಂದಿಗೆ ಮುನ್ನಡೆದಿದೆ ಎಂದರು.


ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವಹಿಸಿರುವ ಡಾ. ಸ್ವರೂಪಾನಂದ ಸ್ವಾಮಿಜಿ ಆಶೀರ್ವದಿಸಿ ಮಾತಾನಾಡಿದರು.


ಇಂದಿನ ದಿನಮಾನದಲ್ಲಿ ಕೆಲವೆಡೆ ಪ್ರಜ್ಞಾವಂತ ಪಾಲಕರೇ ಕನ್ನಡ ಭಾಷೆಯನ್ನು ಪರಕೀಯರ ಭಾಷೆಯಂಬಂತೆ

ಕಾಣುತ್ತಿರುವದು ವಿಷಾದಕರ ಸಂಗತಿಯಾಗಿದೆ. ಮಕ್ಕಳಲ್ಲಿ ತುಂಬುತ್ತಿರುವ ಇಂಗ್ಲಿಷ್‌ ವ್ಯಾಮೋಹ ಅತಿ

ಕೆಟ್ಟ ಸಂಸ್ಕೃತಿಯನ್ನು ಕಲಿಸುತ್ತಿದೆ. ಅನ್ಯಭಾಷೆ ಕಡೆಗಣಿಸಿ ದ್ವೇಷಿಸುವ ಅಗತ್ಯ ನಮಗಿಲ್ಲ. ಕನ್ನಡ ಭಾಷೆ ಮಾತನಾಡಲು ಬರೆಯಲು ಅನುಕೂಲವಾದಂತಹ ಭಾಷೆಯಾಗಿದೆ. ಕನ್ನಡ ಭಾಷೆ ಉಳಿವಿಗಾಗಿ ಬೆಳವಣಿಗೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಹಗಲಿರುಳು ದುಡಿಯುತ್ತಾ ಸಾಗಿದ್ದು ಶ್ಲಾಘನೀಯ ಎಂದರು.



ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ಇಂಡಿ ತಾಲೂಕು ಕರವೇ ಅಧ್ಯಕ್ಷ ಶಿವು ಮಲಕಗೊಂಡ ವಹಿಸಿದ್ದರು. ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ, ಜಿಲ್ಲಾ ಗೌರವ ಅಧ್ಯಕ್ಷ ಬಸವರಾಜ ಮಾರಲಭಾವಿ,  ಆಲಮೇಲ ತಾಲೂಕು ಅಧ್ಯಕ್ಷ ಅಶೋಕ ಭೂಸನೂರ, ಸಿಂದಗಿ ತಾಲೂಕು ಅಧ್ಯಕ್ಷ ಸದ್ದಾಂ ಆಲಗೊರೆ, ದೇವರಹಿಪ್ಪರಗಿ ತಾಲೂಕು ಅಧ್ಯಕ್ಷ ಸುನೀಲ‌ ಮಾಗಿ, ಚಡಚಣ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಬಿರಾದಾರ, ಗೌರವ ಅಧ್ಯಕ್ಷ ಮಹಾದೇವ ರಾಮಗೊಂಡ, ಇಂಡಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಫಯಾಜ್ ಅಹ್ಮದ ಬಾಗವಾನ, ಶಿವು ಬಗಲಿ, ಆನಂದ ಪವಾರ ಹಾಗೂ ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.  ಬಸವರಾಜ ಮಡಗೊಂಡ ಸ್ವಾಗತಿಸಿ‌ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು