ಯೋಗಾ ದಿನಾಚರಣೆ ಹೀರೆ ಮಸಳಿ ಶಾಲೆಯಲ್ಲಿ.



 ಇಂಡಿ .ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗʼ ಎನ್ನುವುದು ಈ ವರ್ಷ ಥೀಮ್‌ ಆಗಿದೆ. ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ, ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ. ಇದು ವೈಯಕ್ತಿಕ ಮತ್ತು ಸಾಮೂಹಿಕ ಆರೋಗ್ಯದ ಪರಸ್ಪರ ಸಂಬಂಧವನ್ನು ಒತ್ತಿಹೇಳುತ್ತದೆ. ಯೋಗವನ್ನು ವೈಯಕ್ತಿಕ ಬೆಳವಣಿಗೆ ಮತ್ತು ಸಾಮಾಜಿಕ ಸುಧಾರಣೆಗೆ ಸಾಧನವಾಗಿ ಉತ್ತೇಜಿಸುತ್ತದೆ ಎಂಬುದು ಈ ಥೀಮ್‌ನ ಅರ್ಥವಾಗಿದೆ. ಎಂದು ಮುಖ್ಯಗುರುಗಳಾದ ಅಬುತಾಲಿಬ ಹೂಸುರ ಹೇಳಿದರು.

ತಾಲೂಕಿನ ಹೀರೆ ಮಸಳಿ ಗ್ರಾಮದ ಸರಕಾರಿ ಉರ್ದುಹಿರಿಯ ಪ್ರಾಥಮಿಕ  ಶಾಲೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

 ಪ್ರತಿವರ್ಷ ಜೂನ್‌ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿ ಯೋಗ ದಿನಾಚರಣೆ ರೂಢಿಯಲ್ಲಿದೆ.  ಇಂದು ಪ್ರಪಂಚದಾದ್ಯಂತ ಜನರು ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗ ಪದ್ಧತಿಯು ಹುಟ್ಟುಕೊಂಡಿದ್ದು ಭಾರತದಲ್ಲಿ, ಸುಮಾರು 5000 ವರ್ಷಗಳ ಹಿಂದೆ ಭಾರತದಲ್ಲಿ ಯೋಗ ಪದ್ಧತಿ ರೂಢಿಯಲ್ಲಿತ್ತು ಎನ್ನಲಾಗುತ್ತದೆ. ಯೋಗವನ್ನು ಇಂದು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅಭ್ಯಾಸ ಮಾಡುತ್ತಿದ್ದಾರೆ. ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಪ್ರತಿವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. 

ಈ‌ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ‌ಬಶೀರ ಮುಲ್ಲಾ, ಸದಸ್ಯರಾದ‌ ಇಬ್ರಾಹಿಂ ಉಸ್ತಾದ,  ಶಿಕ್ಷಕರಾದ ಕೆ.ಕೆ.ಹಲಕಟ್ಟಿ, ಎಸ್.ಎಂ.ತುರ್ಕಿ, ಕೆ.ಎ.ಶೇಖ, ಎಂ.ಎಚ್.ಬಿಳಗಿ, ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು