ಯೋಗವು ಭಾರತೀಯ ಸಂಸ್ಕ್ರತಿಯ ಮೂಲ ಬೇರು- ಸಂತೋಷ ಬಂಡೆ

 ಯೋಗವು ಭಾರತೀಯ ಸಂಸ್ಕ್ರತಿಯ ಮೂಲ ಬೇರು- ಸಂತೋಷ ಬಂಡೆ


ಇಂಡಿ: ಯೋಗವು ಮನುಷ್ಯನ ಮನಸ್ಸು ಏಕಾಗ್ರಗೊಳಿಸುವ ಶಿಕ್ಷಣ ಕ್ರಮವಾಗಿದೆ. ಯೋಗವು ಧರ್ಮ, ಜಾತಿ, ಪಂಗಡ ರಾಷ್ಟ್ರೀಯತೆಗಳ ಭೇದ ಮೀರಿ ನಿಂತಿದೆ. ಇದು ಒಂದು ರಾಷ್ಟ್ರೀಯ ಭಾವ್ಯಕ್ಯತೆ ಸಮನ್ವಯ ಜೀವನದ ಶಿಕ್ಷಣವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

       ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.

         ಯೋಗವು ಭಾರತೀಯ ಸಂಸ್ಕ್ರತಿಯ ಮೂಲ ಬೇರು.

ಮನುಷ್ಯ ತನ್ನ ಜೀವನವನ್ನು ಯೋಗ ಜೀವನವನ್ನಾಗಿ ಬದಲಾಯಿಸಿಕೊಂಡಾಗ ಮಾತ್ರ ಜೀವನ ನಿತ್ಯೋತ್ಸವವಾಗಲು ಸಾಧ್ಯ ಎಂದರು.



        ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರಯುತ, ಗುಣಮಟ್ಟದ ಶಿಕ್ಷಣದ ಜೊತೆಗೆ ಯೋಗಾಭ್ಯಾಸ, ಕರಾಟೆ, ಕುಸ್ತಿ ಕಲೆ ಸೇರಿದಂತೆ ಇತರೆ ದೈಹಿಕ ಚಟುವಟಿಕೆಗಳನ್ನು ಕಲಿಸಿಕೊಟ್ಟು ಆರೋಗ್ಯ ಸಂಪನ್ನರಾಗಿಸಬೇಕು ಎಂದು ಹೇಳಿದರು.

       ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಯೋಗವು ವಿಶ್ವಕ್ಕೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆಗಳಲ್ಲಿ ಒಂದು. ಯೋಗದಿಂದ ನಮ್ಮನ್ನು ನಾವು ಅರಿಯಲು ಸಾಧ್ಯವಾಗಲಿದೆ. ಮಾನವೀಯ ಮೌಲ್ಯಗಳನ್ನು ರೂಡಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.

         ಮುಖ್ಯ ಶಿಕ್ಷಕರಾದ ವ್ಹಿ ವೈ ಪತ್ತಾರ, ಎ ಎಂ ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ ಎಸ್ ಅರಬ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಎಸ್ ಎನ್ ಡಂಗಿ, ಜೆ ಸಿ ಗುಣಕಿ, ಎಸ್ ವ್ಹಿ ಬೇನೂರ, ಎಫ್ ಎ ಹೊರ್ತಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು