ಪುಸ್ತಕಕ್ಕಿಂತ ಮತ್ತೊಬ್ಬ ಒಳ್ಳೆಯ ಸ್ನೇಹಿತ ಇರಲು ಸಾಧ್ಯವಿಲ್ಲ.

 ಪುಸ್ತಕಕ್ಕಿಂತ ಮತ್ತೊಬ್ಬ ಒಳ್ಳೆಯ ಸ್ನೇಹಿತ ಇರಲು ಸಾಧ್ಯವಿಲ್ಲ. 

 ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದ 



       ದಿನಾಂಕ ೨೦-೧೧-೨೦೨೪ ರಂದು ಇಂಡಿ ಪಟ್ಟಣದ ಎಸ್.ಎಸ್.ವಿ.ವಿ.ಸಂಘದ ಶ್ರೀ ಜಿ.ಆರ್.ಗಾಂಧಿ ಕಲಾ, ಶ್ರೀ ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಶ್ರೀ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಅಡಿಯಲ್ಲಿ ರಾಷ್ಟಿçÃಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಜರುಗಿತು.

  ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀ.ಎಮ್.ಕೆ.ಬಿರಾದಾರ ಗ್ರಂಥಪಾಲಕರು, ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಚಡಚಣ ಅವರು ಮಾತನಾಡುತ್ತಾ “ಗ್ರಂಥಾಯಲಗಳು ದೇವಾಲಯಗಳಿದ್ದಂತೆ. ಹಣವಿದ್ದರೆ ಕಳೆದು ಹೋಗಬಹುದು. ಆದರೆ ಪುಸ್ತಕಗಳಿಂದ ಪಡೆದ ಜ್ಞಾನ ಕಳೆದು ಹೋಗಲು ಸಾಧ್ಯವೇ ಇಲ್ಲ ಗ್ರಂಥಗಳನ್ನು ಅಧ್ಯಯನ ಮಾಡುವವರು ಮಹೋನ್ನತ ನಾಯಕರಾಗಿ ಬೆಳದ ಉಧಾಹರಣೆಗಳು ಸಾಕಷ್ಟು ಇವೆ. ಪುಸ್ತಕಕ್ಕಿಂತ ಮತ್ತೊಬ್ಬ ಒಳ್ಳೆಯ ಸ್ನೇಹಿತ ಇರಲು ಸಾಧ್ಯವಿಲ್ಲ. ಪುಸ್ತಕ ಓದುವಿಕೆ ನಿರಂತರವಾಗಿದ್ದರೆ ವ್ಯಕ್ತಿ ಬೌದ್ಧಿಕಾವಗಿಯೂ ಜೀವಂತವಾಗಿರುತ್ತಾನೆ. ಆದರೆ ಇಂದಿನ ಯುವಪೀಳಿಗೆ ಮೊಬೈಲ್ ಸಂಸ್ಕೃತಿ ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡುತ್ತ ಓದುವಿಕೆಯಿಂದ ದೂರ ಉಳಿಯುತ್ತಿದೆ. ಇದು ಬೆಸರದ ಸಂಗತಿ” ಎಂದು ಹೇಳಿದರು.


  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ  ಡಾ.ಎಸ್.ಬಿ.ಜಾಧವ ಮಾತನಾಡುತ್ತ “ಮನುಕುಲದ ಉದ್ಧಾರದಲ್ಲಿ ಪುಸ್ತಕಗಳ ಕೊಡುಗೆ ಅಪಾರ. ಗ್ರಂಥಾಲಯಗಳು ಜ್ಞಾನದ ಕೇಂದ್ರಗಳಾಗಿದ್ದು, ಸಮಾಜದ ಅಂಕಿಡೊAಕುಗಳನ್ನು ತಿದ್ದಲು ಹಾಗೂ ಸಮಾಜವನ್ನು ವಸ್ತುನಿಷ್ಠ ಅರಿತು ರಚನಾತ್ಮಕವಾಗಿ ಸಮಾಜ ಕಟ್ಟಲು ಪುಸ್ತಕಗಳು ಗ್ರಂಥಾಲಯಗಳು ಬೇಕಿವೆ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳನ್ನು ಹೊರೆತುಪಡಿಸಿ ಸಾಹಿತ್ಯ ಸಂಸ್ಕೃತಿ ಹಿನ್ನಲೆಯಲ್ಲಿ ಕೃತಿಗಳನ್ನು ಓದುವವರ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಜ್ಞಾನ ವಿಸ್ತಾರಕ್ಕೆ ಪೂರಕವಾದ ಪುಸ್ತಕಗಳನ್ನು ಅಧ್ಯಯನ ಮಾಡಲು ಯುವ ವಿದ್ಯಾರ್ಥಿಗಳು ಮುಂದಾಗಬೇಕು” ಎಂದು ಹೇಳಿದರು 

ಈ ಕಾರ್ಯಕ್ರಮದಲ್ಲಿ ಗ್ರಂಥಾಲಯದ ವತಿಯಿಂದ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿಯಾದ ವೈಷ್ಣವಿ ರಾಠೋಡ, ಸ್ವಾಗತ & ಪರಿಚಯವನ್ನು ಗ್ರಂಥಪಾಲಕರಾದ ಶ್ರೀ.ರಾಘವೇಂದ್ರ ಇಂಗನಾಳ, ವಂದನಾರ್ಪಣೆಯನ್ನು ಡಾ.ಸುರೇಂದ್ರ ಕೆ ಅವರು ನಿರ್ವಹಿಸಿದರು.

  ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ಆನಂದ ನಡವಿನಮನಿ, ಸಹಾಯಕ ಪ್ರಾಧ್ಯಾಪಕರಾದ ಡಾ.ವಿಶ್ವಾಸ ಕೊರವಾರ, ಡಾ.ಪಿ.ಕೆ.ರಾಠೋಡ, ಶ್ರೀ ಶ್ರೀಶೈಲ, ಡಾ.ಸಿ.ಎಸ್.ಬಿರಾದಾರ, ಡಾ.ಜಯಪ್ರಸಾದ ಡಿ, ಡಾ.ಶ್ರೀಕಾಂತ ರಾಠೋಡ, ಶ್ರೀ.ಮಲ್ಲಿಕಾರ್ಜುನ ಕೋಣದೆ, ಪಂಕಜಾ ಕುಲಕರ್ಣಿ, ಶೃತಿ ಬಿರಾದಾರ, ಪರಶುರಾಮ ಅಜಮನಿ, ಧಾನಮ್ಮ ಪಾಟೀಲ, ಪ್ರಶಾಂತ ಹಿರೇಮಠ, ಆನಂದ ತಾಂಬೆ ಪ್ರೀತಿ ಘಾಳಿಮಠ, ಜನಾಬಾಯಿ ಪಾರೆಕರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು