ದೇಶದ ಅಭಿವೃದ್ದಿಗೆ ಕಾರ್ಮಿಕರ ಕೊಡುಗೆ ಅತ್ಯಂತ ಮಹತ್ವದಾಗಿದ್ದು

ದೇಶದ ಅಭಿವೃದ್ದಿಗೆ ಕಾರ್ಮಿಕರ ಕೊಡುಗೆ ಅತ್ಯಂತ ಮಹತ್ವದಾಗಿದ್ದು ಅವರು ಕೆಲಸ ಮಾಡದಿದ್ದರೆ ದೇಶದ ಅಭಿವೃದ್ದಿಯ ಮೇಲೆ ವ್ಯತರಿಕ್ತ ಪರಿಣಾಮ ಉಂಟಾಗುತ್ತದೆ.

 ಇಂಡಿ  : ದೇಶದ ಅಭಿವೃದ್ದಿಗೆ ಕಾರ್ಮಿಕರ ಕೊಡುಗೆ ಅತ್ಯಂತ ಮಹತ್ವದಾಗಿದ್ದು ಅವರು ಕೆಲಸ ಮಾಡದಿದ್ದರೆ ದೇಶದ ಅಭಿವೃದ್ದಿಯ ಮೇಲೆ ವ್ಯತರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ಗೌರವಾನ್ವಿತ ಹಿರಿಯ ಶ್ರೇಣಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ ಅಭಿಪ್ರಾಯ ವ್ಯಕ್ತ ಪಡಿಸಿದರು.



 ಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿಗಳ ಗುರುಭವನ ಸಬಾಭವನದಲ್ಲಿ ಹಮ್ಮಿಕೊಂಡ ಕಾರ್ಮಿಕರಿಗೆ ಸಂಬAದಿಸಿದ ವಿವಿಧ ಕಾಯ್ದೆಗಳು ಹಾಗೂ ಸರಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ ತಾಲೂಕಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. 

ಜಗತ್ತಿನ ಎಲ್ಲ ರಾಷ್ಟ್ರಗಳ ಕಾರ್ಮಿಕರ ಸುರಕ್ಷತೆ ಕುರಿತು ಕಾಯ್ದೆ ರೂಪಿಸಿವೆ. ದಿನನಿತ್ಯದಲ್ಲಿ ಸಾಮಾನ್ಯ ಜನರಿಗೆ ಕಾನೂನುಗಳ ಬಗ್ಗೆ ಮಾಹಿತಿ ನೀಡುವದು ನಮ್ಮ ಕರ್ತವ್ಯ. ಕೆಲಸ ಕೀಳು ಎಂದು ತಿಳಿದುಕೊಳ್ಳದೆ ಶ್ರದ್ದೆಯಿಂದ ಮತ್ತು ಸುರಕ್ಷತೆಯಿಂದ ಕೆಲಸ ಮಾಡಲು ಹೆಚ್ಚಿನ ಒತ್ತು ನೀಡಬೇಕು ಎಂದರು.

ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ ಮಾತನಾಡಿ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳು ಇವೆ. ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಟೂಲ್ ಕಿಟ್ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ,ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ, ಮದುವೆ ಧನ ಸಹಾಯ, ತಾಯಿ ಮತ್ತು ಸಹಾಯ ಹಸ್ತ ಎನ್ನುವಂತ ವಿವಿಧ ಸೌಲಭ್ಯ ಸಿಗುತ್ತವೆ. ಕಾರ್ಮಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.  

ಕಾರ್ಮಿಕ ಅಧಿಕಾರಿಗಳು ಉಮಾಶ್ರೀ ಕೋಳಿ, ಕಾರ್ಮಿಕ ನಿರೀಕ್ಷಕ ದತ್ತು ದೇವರಮನಿ, ಕಾರ್ಮಿಕ ಸಂಘದ ಅಧ್ಯಕ್ಷ ಎಲ್.ಡಿ.ನದಾಫ ಮಾತನಾಡಿದರು.

ದಿವಾನಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸುನೀಲಕುಮಾರ, ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕಿ ನೀಲಮ್ಮ ಖೇಡಗಿ , ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ, ವಕೀಲರ ಸಂಘದ ಅಧ್ಯಕ್ಷ ಎಸ್.ಆರ್. ಬಿರಾದಾರ, ಮಲ್ಲಿಕಾರ್ಜುನ ಬಗಲಿ, ಸುಭಾಸಚಂದ್ರ ಟೋನಿ, ರೋಹಿತ ಗೊಂದಳಿ,ಪ್ರಶಾAತ ಅರ್ಜನಾಳ ವೇದಿಕೆ ಮೇಲಿದ್ದರು. ಸಿದ್ದು ಹಾವಳಗಿ ಸೇರಿದಂತೆ ಹಲವಾರು ಕಾರ್ಮಿಕರು ಉಪಸ್ಥಿತರಿದ್ದರು. 

ಇಂಡಿ  ಪಟ್ಟಣದ  ಗುರುಭವನ ಸಬಾಭವನದಲ್ಲಿ ಹಮ್ಮಿಕೊಂಡ ಕಾರ್ಮಿಕರಿಗೆ  ಏರ್ಪಡಿಸಿದ ತಾಲೂಕಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಹಿರಿಯ ಶ್ರೇಣಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ ಮಾತನಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು