ಲೆಕ್ಕಪತ್ರ ನೀಡಿದರೂ ಸಹ ಕೆಲವು ದುರುದ್ದೇಶದಿಂದ ಸುಖಾಸುಮ್ಮನೆ ದೇವಸ್ಥಾನದ ಎದುರು ಧರಣಿ ನಡೆಸುತ್ತಿದ್ದಾರೆ

 ಇಂಡಿ: ನವೆಂಬರ್ ೧೦ ರಂದು ಸಾಯಂಕಾಲ ಶಾಂತೇಶ್ವರ ದೇವಸ್ಥಾನದಲ್ಲಿ ಭಕ್ತರು ಕೇಳಿದ ಲೆಕ್ಕಪತ್ರವನ್ನು ಸಾರ್ವಜನಿಕವಾಗಿ ನೀಡಲಾಗಿದ್ದು, ಡಿ.೯ ರಿಂದ ೧೧ ರವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಅನುಮತಿ ನೀಡಿದ್ದು ಈಗಾಗಲೆ ಜಾತ್ರಾ ತಯಾರಿ ನಡೆದಿದೆ ಎಂದು ದೇವಸ್ಥಾನ ಕಮೀಟಿ ಅಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೆಕ್ಕಪತ್ರ ನೀಡಿದರೂ ಸಹ ಕೆಲವು ದುರುದ್ದೇಶದಿಂದ ಸುಖಾಸುಮ್ಮನೆ ದೇವಸ್ಥಾನದ ಎದುರು ಧರಣಿ ನಡೆಸುತ್ತಿದ್ದಾರೆ


. ನೂರಾರು ಜನರ ಸಮ್ಮುಖದಲ್ಲಿಯೇ ಲೆಕ್ಕಪತ್ರ ನೀಡಲಾಗಿದೆ. ಅಲ್ಲದೆ ದೇವಸ್ಥಾನದ ಸೂಚನಾ ಫಲಕದಲ್ಲಿಯೂ ಲೆಕ್ಕಪತ್ರದ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.

ನವೆಂಬರ್ ೨೬ ರಿಂದ ಡಿ. ೯ರವರೆಗೆ ಧಾನಮ್ಮದೇವಿ ಪುರಾಣ ಕಾರ್ಯಕ್ರಮ ಸಾಯಂಕಾಲ ೭-೦೦ ರಿಂದ ೮-೩೦ ರವರೆಗೆ ಹಮ್ಮಿಕೊಂಡಿದ್ದು, ಡಿ. ೯ ಕ್ಕೆ ಸಾಮೂಹಿಕ ವಿವಾಹ ಧರ್ಮಸಭೆ, ಡಿ. ೧೦ ಮತ್ತು ೧೧ ರಂದು ಜಾತ್ರಾ ಮಹೋತ್ಸವ ನಡೆಯಲಿದೆ. ಈಗಾಗಲೆ ಜಾತ್ರೆಗೆ ಭಕ್ತರಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದ್ದು ಅದ್ದೂರಿ ಜಾತ್ರೆಗೆ ಸಿಧ್ಧತೆ ನಡೆದಿದೆ ಎಂದು ಕಾಸುಗೌಡ ಬಿರಾದಾರ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀಕಾಂತ ಕೂಡಿಗನೂರ, ದೇವೆಂದ್ರ ಕುಂಬಾರ, ಬಸವರಾಜ ಮಸಳಿ, ವಿಜಯ್ ಉಡಚಣ, ರಾವುತ್ ಲಾಳಸಂಗಿ, ಸತೀಶ ಝಂಪಾ, ಅಶೋಕಗೌಡ ಪಾಟೀಲ ಮತ್ತಿತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು