“ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು ಸಮಪಾಲು ನೀಡಿದೆ.

ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು ಸಮಪಾಲು ನೀಡಿದೆ. 


       ದಿನಾಂಕ ೨೬/೧೧/೨೦೨೪ ರಂದು ಇಂಡಿ ಪಟ್ಟಣದ ಎಸ್.ಎಸ್.ವಿ.ವಿ.ಸಂಘದ ಶ್ರೀ ಜಿ.ಆರ್.ಗಾಂಧಿ ಕಲಾ, ಶ್ರೀ ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಶ್ರೀ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ & ರಾಜ್ಯಶಾಸ್ತç ವಿಭಾಗದ ಅಡಿಯಲ್ಲಿ ಭಾರತೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಜರುಗಿತು.

  ಈ ಕಾರ್ಯಕ್ರಮದ  ಸಹ ಪ್ರಾಧ್ಯಾಪಕರಾದ ಡಾ.ಆನಂದ ಸಿ. ನಡವಿನಮನಿ ಅವರು ಮಾತನಾಡುತ್ತಾ “ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು ಸಮಪಾಲು ನೀಡಿದೆ. ಭಾರತೀಯರಾದ ನಾವು ಎಂಬ ವ್ಯಾಖ್ಯೆಯೊಂದಿಗೆ ಆರಂಭವಾಗುವ ನಮ್ಮ ಸಂವಿಧಾನ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟçಕ್ಕೆ ಸಂವಿಧಾನ  ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಸಮಾನತೆಯ ಅವಕಾಶ ಲಭಿಸಿದೆ.” ಎಂದು ಹೇಳಿದರು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನಮ್ಮ ಮಹಾವಿದ್ಯಾಲಯದ ಪ್ರಾಂಶುಪಾಲರಾದ  ಡಾ.ಎಸ್.ಬಿ.ಜಾಧವ ಅವರು ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡುತ್ತ “ಭಾರತೀಯರಾದ ನಾವು ವಿಶೆಷವಾಗಿ ವಿದ್ಯಾರ್ಥಿಗಳು ಹಾಗೂ ಯುವಸಮುದಾಯ ಭಾರತದ ಸಂವಿಧಾನದ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕು.” ಎಂದು ಹೇಳಿದರು. 

  ಈ ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಪ್ರಾಧ್ಯಾಪಕರಾದ ಡಾ.ಜಯಪ್ರಸಾದ ಡಿ, ವಂದನಾರ್ಪಣೆಯನ್ನು ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದÀ ಡಾ. ಪಿ.ಕೆ.ರಾಠೋಡ ಅವರು ನಿರ್ವಹಿಸಿದರು.

  ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ  ಸಹಾಯಕ ಪ್ರಾಧ್ಯಾಪಕರಾದ ಡಾ. ವಿಶ್ವಾಸ್. ಕೋರವಾರ, ಡಾ.ಸುರೇದ್ರ ಕೆ, ಶ್ರೀ.ಶ್ರೀಶೈಲ, ಡಾ. ಸಿ.ಎಸ್.ಬಿರಾದಾರ, ಡಾ. ಶ್ರೀಕಾಂತ ರಾಠೋಡ, ಶ್ರೀ ಎಮ್.ಆರ್ ಕೋಣದೆ, ಶೃತಿ ಪಾಟೀಲ, ಶ್ವೇತಾ ಕಾಂತ, ಪಂಕಜಾ ಕುಲಕರ್ಣಿ, ಶೃತಿ ಬಿರಾದಾರ, ಶ್ರೀ.ಪರಶುರಾಮ ಅಜಮನಿ, ನಸ್ರೀನ ವಾಲಿಕಾರ, ಧಾನಮ್ಮ ಪಾಟೀಲ, ಬೋಧಕೇತರ ಸಿಬ್ಬಂದಿ & ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು