ಡಿ ೧೨ ರಂದು ಬೆಳಗ್ಗೆ ೧೦.೩೦ ರಿಂದ ಸಂಜೆ ೫ ರ ವರೆಗೆ ಮೆಗಾ ಲೋಕ ಅದಾಲತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

 ಇಂಡಿ  :   ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸ್ಥಳೀಯ ನ್ಯಾಯಾಲಯದಲ್ಲಿ ಡಿ ೧೨ ರಂದು ಬೆಳಗ್ಗೆ ೧೦.೩೦ ರಿಂದ ಸಂಜೆ ೫ ರ ವರೆಗೆ ಮೆಗಾ ಲೋಕ ಅದಾಲತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ  ಹೇಳಿದರು.



ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ್ಯ ಪಡಿಸಿ ಇಬ್ಬರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ  ಲೋಕ ಅದಾಲತ ಆಯೋಜಿಸಲಾಗಿದೆ. ಇದು ಈ ವರ್ಷದ ಕೊನೆಯ ಲೋಕ ಅದಾಲತ ಎಂದರು.

ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ ೧೪೯೧ ಪ್ರಕರಣಗಳು ಇತ್ಯರ್ಥ ಗೊಂಡಿವೆ. ಮತ್ತು ೨ ಕೋಟಿ ೫೨ ಲಕ್ಷ ೪೫೫೧೧  ರೂ ಬ್ಯಾಂಕು, ಪುರಸಭೆ, ಗ್ರಾ.ಪಂ ಕರವಸೂಲಾತಿ, ಫೈನಾನ್ಸ, ಬಡ್ಡಿ ವ್ಯವಹಾರ ಸೇರಿದಂತೆ ಇಲಾಖೆಗಳಿಗೆ ಸಂದಾಯವಾಗಬಹುದಾದ ಹಣ ಸಂದಾಯವಾಗಿದೆ ಎಂದರು. ಈ ಬಾರಿ ಅದಕ್ಕೂ ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಈ ಅದಾಲತ್ ನಲ್ಲಿ ಹೊಲ, ಮನೆ, ಬ್ಯಾಂಕು, ಅಪಘಾತ, ಚೆಕ್ ಬೌನ್ಸ, ಜನನ, ಸಹಕಾರಿ, ಸಣ್ಣ ಪುಟ್ಟ ಗಲಾಟೆ, ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ವಿಚಾರಣೆ ಮಾಡುವದರ ಮೂಲಕ ಅಂದೇ ಅಂತಿಮ ನಿರ್ಣಯದ ಮೂಲಕ ರಾಜಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಹಲವು ವರ್ಷಗಳ ಕಾಲ ಕಾನೂನು ಹೋರಾಟ ಮಾಡಿ ಒಬ್ಬರು ಗೆಲ್ಲುತ್ತಾರೆ, ಮತ್ತೊಬ್ಬರಿಗೆ ಸೋಲಾಗುತ್ತದೆ. ಆದರೆ ಅದಾಲತನಲ್ಲಿ ಇಬ್ಬರಿಗೂ ತೃಪ್ತಿಯಾಗುವ ತೀರ್ಮಾನ ಮಾಡಲಾಗುತ್ತದೆ. ಲೋಕ್ ಅದಾಲತನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ಇತ್ಯರ್ಥ್ಯ ಪಡಿಸಿಕೊಳ್ಳಲು ಅವಕಾಶವಿದೆ.

ನೇರವಾಗಿಯೂ ಭಾಗವಹಿಸಬಹುದು. ಇಬ್ಬರಿಗೂ ತೃಪ್ತಿಯಾದರೆ ಮಾತ್ರ ಇತ್ಯರ್ಥ ಮಾಡುತ್ತೇವೆ. ಮತ್ತೆ ಮೇಲ್ಮನವಿಗೆ ಅವಕಾಶ ಇರುವದಿಲ್ಲ. ಕೌಟುಂಬಿಕ ಕಲಹಗಳನ್ನು ರಾಜಿ ಸಂಧನದ ಮೂಲಕ ಇತ್ಯರ್ಥ ಪಡಿಸಲು ಪ್ರಯತ್ನಿಸಲಾಗುವದು ಎಂದು ಕೋಟೆಪ್ಪ ಕಾಂಬಳೆ ಹೇಳಿದರು.   ದಿವಾನಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸುನೀಲಕುಮಾರ ಉಪಸ್ಥಿತರಿದ್ದರು. 

ಇಂಡಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ  ಮಾತನಾಡಿದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು