ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ.

 


ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ.

       ದಿನಾಂಕ ೦೨/೧೨/೨೦೨೪ ರಂದು ಇಂಡಿ ಪಟ್ಟಣದ ಎಸ್.ಎಸ್.ವಿ.ವಿ.ಸಂಘದ ಶ್ರೀ ಜಿ.ಆರ್.ಗಾಂಧಿ ಕಲಾ, ಶ್ರೀ ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಶ್ರೀ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್, ರೆಡ್ ಕ್ರಾಸ್ ಹಾಗೂ ಸ್ಕೌಟ್ಸ್ & ಗೈಡ್ಸ್ ಅಡಿಯಲ್ಲಿ ‘ರಾಷ್ಟಿçÃಯ ಮಾಲಿನ್ಯ ನಿಯಂತ್ರಣ ದಿನಾಚರಣೆ’ ಕಾರ್ಯಕ್ರಮ ಜರುಗಿತು.

  ಈ ಕಾರ್ಯಕ್ರಮದಲ್ಲಿ ಅತಿಥಿಗಳಾದ ಡಾ.ಪ್ರವೀಣ ಗಜಕೋಶ ಅರ್‌ಟಿ ಮೆಡಿಕಲ್ ಆಫಿಸರ್ ಇಂಡಿ, ಅವರು ಮಾತನಾಡುತ್ತಾ “ಇಂದು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ. ಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗಾಳಿಯಲ್ಲಿ ವಿಷಾನಿಲಗಳು ಹೆಚ್ಚಾಗುತ್ತಿರುವ ಪರಿಣಾಮ ಶುದ್ಧಗಾಳಿ ಸಿಗುತ್ತಿಲ್ಲ. ಜಲಮೂಲಗಳ ನಾಶದಿಂದಾಗಿ ಕುಡಿಯುವ ನೀರು ಮಲಿನವಾಗಿದೆ. ಅತಿ ಹೆಚ್ಚು ರಾಸಾಯನಿಕ ಬಳಕೆಯಿಂದ ಮಣ್ಣು ಕಲುಷಿತವಾಗುತ್ತಿದೆ. ಮನುಷ್ಯನ ಕಣ್ಣಿಗೆ ಹಾನಿ ಉಂಟು ಮಾಡುವ ಬೆಳಕಿನ ಮಾಲಿನ್ಯ, ಕಿವುಡರನ್ನಾಗಿ ಮಾಡುತ್ತಿರುವ ಶಬ್ದ ಮಾಲಿನ್ಯ, ಆರೋಗ್ಯ ಕೆಡಿಸುವ ವಿಕಿರಣ, ಇವೆಲ್ಲವೂ ಭೂಮಿಯ ಮೇಲೆ ಮನುಷ್ಯನ ಉಳಿವಿಗೆ ಮಾರಕವಾಗುತ್ತಿವೆ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಡಿಸೆಂಬರ್ ೨ ರಂದು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಣೆ ಮಾಡಲಾಗುತ್ತದೆ.” ಎಂದು ಹೇಳಿದರು.

  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನಮ್ಮ ಮಹಾವಿದ್ಯಾಲಯದ ಪ್ರಾಂಶುಪಾಲರಾದ  ಡಾ.ಎಸ್.ಬಿ.ಜಾಧವ ಅವರು ಮಾತನಾಡುತ್ತ “ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ ಆಚರಣೆಯ ಮೂಲ ಉದ್ದೇಶ ಕೈಗಾರಿಕಾ ವಿಪತ್ತುಗಳ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವುದು. ಮಾಲಿನ್ಯ ನಿಯಂತ್ರಣಕ್ಕೆ ಪ್ರಯತ್ನಗಳನ್ನು ಮಾಡುವುದು. ಇವುಗಳ ಜೊತೆಗೆ ಈ ದಿನವನ್ನು ಆಚರಿಸುವ ಉದ್ದೇಶವು ಗಾಳಿ, ನೀರು ಮತ್ತು ಮಣ್ಣನ್ನು ಕಲುಷಿತವಾಗದಂತೆ ರಕ್ಷಿಸಲು ಜನರನ್ನು ಪ್ರೋತ್ಸಾಹಿಸುವುದು.” ಎಂದು ಹೇಳಿದರು. 

  ಈ ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಪ್ರಾಧ್ಯಾಪಕರಾದ ಡಾ.ಸುರೇಂದ್ರ ಕೆ, ವಂದನಾರ್ಪಣೆಯನ್ನು ಸಹಾಯಕ ಪ್ರಾಧ್ಯಾಪಕರಾದ ಡಾ. ವಿಶ್ವಾಸ್. ಕೋರವಾರ ಅವರು ನಿರ್ವಹಿಸಿದರು.

  ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ  ಸಹ ಪ್ರಾಧ್ಯಾಪಕರಾದ ಡಾ.ಆನಂದ ನಡವಿನಮನಿ, ಸಹಾಯಕ ಪ್ರಾಧ್ಯಾಪಕರಾz ಡಾ.ಪಿ.ಕೆ.ರಾಠೋಡ, ಶ್ರೀ.ಶ್ರೀಶೈಲ, ಡಾ. ಸಿ.ಎಸ್.ಬಿರಾದಾರ, ಡಾ. ಶ್ರೀಕಾಂತ ರಾಠೋಡ, ಶ್ರೀ ಎಮ್.ಆರ್ ಕೋಣದೆ, ಶ್ರೀ.ರಾಘವೇಂದ್ರ ಇಂಗನಾಳ, ಶ್ವೇತಾ ಕಾಂತ, ಪಂಕಜಾ ಕುಲಕರ್ಣಿ, ಶೃತಿ ಬಿರಾದಾರ, ಶ್ರೀ.ಪರಶುರಾಮ ಅಜಮನಿ, ನಸ್ರೀನ ವಾಲಿಕಾರ, ಧಾನಮ್ಮ ಪಾಟೀಲ, ಬೋಧಕೇತರ ಸಿಬ್ಬಂದಿ & ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು