ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಮತ್ತು ಬಾಗಲಕೋಟೆ ಉಭಯ ಜಿಲ್ಲೆಗಳ ಶಾಸಕರು ಹಾಗೂ ಸಂಸದರು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ

 ಈ ಸುದ್ದಿಯನ್ನು ವಿಜಯಪುರ ಮತ್ತು ಬಾಗಲಕೋಟೆ ಎರಡೂ ಆವೃತ್ತಿಗಳಲ್ಲಿ ಬಳಸಿಕೊಳ್ಳಲು ಕೋರಿಕೆ.


ವಿಜಯಪುರ, ಡಿ. 09: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಮತ್ತು ಬಾಗಲಕೋಟೆ ಉಭಯ ಜಿಲ್ಲೆಗಳ ಶಾಸಕರು ಹಾಗೂ ಸಂಸದರು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.


ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಸಂತ್ರಸ್ತರ ಹೋರಾಟ ಸಮಿತಿ ಬಾಗಲಕೋಟೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ದರಣಿ/ಸರದಿ ಸತ್ಯಾಗ್ರಹದಲ್ಲಿ ಇಂದು ಸೋಮವಾರ ಪಾಲ್ಗೋಂಡು ಬೆಂಬಲ ಸೂಚಿಸಿ ಅವರು ಮಾತನಾಡಿದರು.


ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀಟರ್ ಎತ್ತರ ಮಾಡುವುದರಿಂದ ಈ ಯೋಜನೆ ಪೂರ್ಣಗೊಂಡರೆ ಉಭಯ ಜಿಲ್ಲೆಗಳಷ್ಟೇ ಅಲ್ಲ, ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಿಗೂ ಅನುಕೂಲವಾಗಲಿದೆ.  16 ಲಕ್ಷ ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ.  ಇದರಿಂದ ರೈತರ ಬಾಳು ಹಸನಾಗಲಿದೆ.  ಎರಡೂ ಜಿಲ್ಲೆಗಳ 18 ಜನ ಶಾಸಕರು ಪಕ್ಷಾತೀತವಾಗಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ.  ರಾಜ್ಯ ಮತ್ತು ಕೇಂದ್ರ ಸರಕಾರಗಳು ಈ ಯೋಜನೆಗೆ ಬೇಕಾದ ಹಣವನ್ನು ಬಿಡುಗಡೆ ಮಾಡಬೇಕು.  ಆಲಮಟ್ಟಿ ಜಲಾಷಯ ಎತ್ತರದಿಂದ ಸಂತ್ರಸರಾಗುವ 22 ಗ್ರಾಮಸ್ಥರು ಮತ್ತು 1.30 ಲಕ್ಷ ಎಕರೆ ರೈತರ ಜಮೀನು ಭೂಸ್ವಾಧೀನಕ್ಕೆ ಏಕರೂಪ ಪರಿಹಾರ ನೀಡಬೇಕು.  ನ್ಯಾಯಯುತವಾಗಿರುವ ಈ ಯೋಜನೆಯನ್ನು ಕಾಲಮಿತಿಯಲ್ಲಿ ಮಾಡಬೇಕು.  ಸಿಎಂ ಗುರುವಾರ ಸಂಜೆ 4 ಗಂಟೆಗೆ ಈ ಭಾಗದ ಶಾಸಕರು, ಸಂಸದರ ಸಭೆ ಕರೆದಿದ್ದಾರೆ.  ನಾವೆಲ್ಲ ಶಾಸಕರು ಪಕ್ಷಾತೀತವಾಗಿ ಸಂತ್ರಸ್ತರ ದನಿಯಾಗಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಿದ್ದೇವೆ.  ಅಲ್ಲದೇ, ಪ್ರಾಮಾಣಿಕವಾಗಿ ಸರಕಾರದ ಗಮನ ಸೆಳೆಯುತ್ತೇವೆ.  ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.  


ಈ ಸಂದರ್ಭದಲ್ಲಿ ನಾನಾ ಸ್ವಾಮೀಜಿಗಳು, ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕರು, ರೈತ ಮುಖಂಡರು, ಸಂತ್ರಸ್ತರು ಉಪಸ್ಥಿತರಿದ್ದರು.


ಇದಕ್ಕೂ ಮೊದಲು ನಾನಾ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸುನೀಲಗೌಡ ಪಾಟೀಲ ಪಾಲ್ಗೋಂಡರು.


 ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಬಾಗಲಕೋಟೆಯಲ್ಲಿ ಸಂತ್ರಸ್ತರ ಹೋರಾಟ ಸಮಿತಿ ನಡೆಸುತ್ತಿರುವ ಅಹೋರಾತ್ರಿ ದರಣಿ/ಸರದಿ ಸತ್ಯಾಗ್ರಹದಲ್ಲಿ ಪಾಲ್ಗೋಂಡು ಬೆಂಬಲ ಸೂಚಿಸಿದ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮಾತನಾಡಿದರು.  ಈ ಸಂದರ್ಭದಲ್ಲಿ ಗದುಗಿನ ತೋಂಟದಾರ್ಯ ಸ್ವಾಮೀಜಿ, ನಿಡುಸೋಶಿ ಮಠದ ಸ್ವಾಮೀಜಿ, ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಶ್ರೀಗಳು ಮಾಜಿ ಸಚಿವರಾದ ಅಜಯಕುಮಾರ ಸರನಾಯಕ, ಎಸ್. ಆರ್. ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಮುಖಂಡರಾದ ಅದೃಶ್ಯಪ್ಪ ದೇಸಾಯಿ, ನಾಗರಾಜ ಹದ್ಲಿ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು