ಆರೋಗ್ಯಕರ ಭವಿಷ್ಯಕ್ಕಾಗಿ ಮಾಲಿನ್ಯ ನಿಯಂತ್ರಣ ಅಗತ್ಯ- ಸಂತೋಷ ಬಂಡೆ

 ಆರೋಗ್ಯಕರ ಭವಿಷ್ಯಕ್ಕಾಗಿ ಮಾಲಿನ್ಯ ನಿಯಂತ್ರಣ ಅಗತ್ಯ- ಸಂತೋಷ ಬಂಡೆ

ಇಂಡಿ: ಗಾಳಿ, ನೀರು, ಮಣ್ಣಿನ ಮೇಲೆ ಪರಿಣಾಮ ಬೀರುವ ಮಾಲಿನ್ಯಕಾರಕಗಳನ್ನು ಕಡಿಮೆ ಮಾಡಲು ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಗೊಳಿಸಿಕೊಳ್ಳುವ ಅಗತ್ಯತೆ ಇದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

        ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸೋಮವಾರದಂದು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನದ ನಿಮಿತ್ತ ಹಮ್ಮಿಕೊಂಡ 'ಮಾಲಿನ್ಯ ನಿಯಂತ್ರಣದಲ್ಲಿ ನಮ್ಮ ಪಾತ್ರ' ಕುರಿತ ಚರ್ಚಾಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

            ಶುದ್ಧ ಗಾಳಿ, ಹಸಿರು ಭೂಮಿಯ ಮೂಲಕ ಸುಸ್ಥಿರ ಜೀವನದತ್ತ ಹೆಜ್ಜೆ ಹಾಕಲು ಪರಿಸರ ಮಾಲಿನ್ಯ ನಿಯಂತ್ರಣದ ಸಂಕಲ್ಪ ಮಾಡಬೇಕು. ನೀರಿನ ವ್ಯರ್ಥವನ್ನು ತಪ್ಪಿಸಬೇಕು.

ಸಾರ್ವಜನಿಕ ಸಾರಿಗೆ ಬಳಸುವ ಮೂಲಕ ವಾಯು ಮಾಲಿನ್ಯವನ್ನು ನಿಯಂತ್ರಿಸಬೇಕಿದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ಸಿಗುವುದು ಕಷ್ಟ ಎಂದು ಹೇಳಿದರು.

       ಮುಖ್ಯ ಅತಿಥಿಗಳಾಗಿ ಕೆಬಿಎಸ್ ಶಾಲಾ ಶಿಕ್ಷಕಿ ಎಫ್ ಎ ಹೋರ್ತಿ ಮಾತನಾಡಿ, ಮಿತಿ ಮೀರಿದ ಪ್ಲಾಸ್ಟಿಕ್‌ ಬಳಕೆ ಮಾಲಿನ್ಯಕ್ಕೆ ಮುಖ್ಯ ಕಾರಣವಾಗಿದ್ದು, ಪರಿಸರ ಸ್ನೇಹಿ ಬಟ್ಟೆ ಚೀಲ ಬಳಸುತ್ತಾ, ಎಸೆಯುವ ಸಂಸ್ಕೃತಿ ಬದಲಾಗಿ ರಿಪೇರಿ ಸಂಸ್ಕೃತಿಯನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

        ಅಧ್ಯಕ್ಷತೆ ವಹಿಸಿದ್ದ ಹಿರಿಯ ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ, ಸಾಧ್ಯವಾದಾಗಲೆಲ್ಲಾ ರಾಸಾಯನಿಕ ಮುಕ್ತ, ಸಾವಯವ ಹಾಗೂ ಸಸ್ಯಮೂಲದ ಆಹಾರ ಪದಾರ್ಥಗಳನ್ನೇ ಬಳಸಿದಾಗ ಪರಿಸರಕ್ಕೂ ನಿರಾಳ, ನಮ್ಮ ಆರೋಗ್ಯಕ್ಕೂ ವರದಾನ. ಸ್ವಚ್ಛ ಸುಂದರ ಪರಿಸರ ನಮ್ಮ ಆದ್ಯತೆಯಾಗಲಿ ಎಂದು ಹೇಳಿದರು.

         ಶಿಕ್ಷಕಿ ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು