ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಇಂಡಿಯಲ್ಲಿ ಪ್ರತಿಭಟನೆ

 ಇಂಡಿ.  ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪಗ್ರತಿಪರ ಚಿಂತಕರು ಹಾಗೂ ಅಂಬೇಡ್ಕರ ಅನುಯಾಯಿ ಬಳೆಗ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಶುಕ್ರವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಕಾರರು, ಶಾ ಪುತಳಿಗೆ  ಚಪ್ಪಲಿ ಹಾರ್ ಹಾಕಿ ಹಾಗೂ ಕೊನೆಯಲ್ಲಿ ಭಾವಚಿತ್ರಗಳನ್ನು ಸುಟ್ಟು ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಮುಖಂಡರು  ಬಿಜೆಪಿ ಮನುವಾದಿ ಪಕ್ಷ, ಆ ಪಕ್ಷದ ನಿಜವಾದ ಬಣ್ಣ ಈಗ ಮತ್ತೊಮ್ಮೆ ಬಯಲಾಗಿದೆ. ಅಮಿತ್ ಶಾ ಅವರನ್ನು ಸಂಪುಟದಿಂದ ಕಿತ್ತೊಗೆಯಬೇಕು, ಮುಂಬರುವ ಚುನಾವಣೆ ವೇಳೆ ಅಂಬೇಡ್ಕರ್‌ ಪರ ನಿಲುವ ಇರುವ ಎಲ್ಲರೂ ಬಿಜೆಪಿಯಿಂದ ಹೊರಬರಬೇಕು, ಚುನಾವಣೆಯಲ್ಲಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು’ ಎಂದು ಮಾತನಾಡಿ ಹಲವು ನಾಯಕರು ಒತ್ತಾಯಿಸಿದರು.

ತಲಿದ ಮುಖಂಡ ಪ್ರಶಾಂತ ಕಾಳೆ ಮಾತನಾಡಿ  ಇಂದು ಸಂವಿಧಾನದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದಂತಹ ಬಿಜೆಪಿ ನಾಯಕರು ಆ ಸಂವಿಧಾನಕ್ಕೆ ಮತ್ತು ಅದರ ನಿರ್ಮಾತೃರಾದಂತಹ ಡಾ.ಅಂಬೇಡ್ಕರ್ ರಿಗೆ ಅವಮಾನ ಮಾಡುವಂತಹ ಮಾತನಾಡಿದ್ದು ಖಂಡನೀಯ.



ಕೇವಲ ಭಾರತವಷ್ಟೇ ಅಲ್ಲದೆ ಪರದೇಶಗಳಲ್ಲಿಯೂ ಕೂಡ ನಮ್ಮ ಸಂವಿಧಾನವನ್ನು ಮತ್ತು ಅದರ ಶಿಲ್ಪಿಗಳಾದ ಡಾ.ಅಂಬೇಡ್ಕರ್ ರವರನ್ನು ಗೌರವದಿಂದ ಕಂಡು ಪೂಜ್ಯನೀಯ ಭಾವನೆಯನ್ನು ವ್ಯಕ್ತಪಡಿಸುತ್ತಾರೆ. ಆದರೇ, ಅವರ ಜನ್ಮ ಭೂಮಿಯಾದ ಭಾರತದಲ್ಲಿ ಕೆಲವೊಂದು ಅವಿವೇಕಿಗಳು ಈ ತರಹದ ಮಾತನಾಡುತ್ತಾರೆ ಇದು ನಾಚಿಕೆಗೇಡಿನ ಸಂಗತಿ ಎಂದರು.

ಇಲಿಯಾಸ ಬೋರಾಮಣಿ ಮಾತನಾಡಿ ದೇಶದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅವೆಲ್ಲವುಗಳನ್ನು ಪರಿಹರಿಸುವುದನ್ನು ಬಿಟ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವುದನ್ನು ಬಿಟ್ಟು ಇಂತಹ ಕುತಂತ್ರಗಳನ್ನು ಮಾಡುವುದರಲ್ಲಿ ನಿರತರಾಗಿದ್ದಾರೆ. ಇವರೆಲ್ಲರೂ ಮನುವಾದ ತುಂಬಿಕೊಂಡಂತಹ ಮನೋರೋಗಿಗಳು ಎಂದರು.

ದಲಿತ ನಾಯಕ ಪ್ರಶಾಂತ ಕಾಳೆ, ಇಲಿಯಾಸ ಬೋರಾಮಣಿ, ಜೆಟ್ಟೆಪ್ಪ ರವಳಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಜಾವೀದ ಮೋಮಿನ, ಅಬ್ದುಲ್ ರಶೀದ ಅರಬ, ಸದಾಶಿವ ಪ್ಯಾಟಿ,  ಅಯುಬ ಬಾಗವಾನ, ಉಮೇಶ ದೇಗಿನಾಳ, ರಯಿಸ್ ಆಸ್ಟೇಕರ, ಹುಚ್ಚಪ್ಪ ತಳವಾರ, ಉಸ್ಮಾನ ಶೇಖ್, ಹುಚ್ಚಪ್ಪ ಅಂಜುಟಗಿ, ಭೀಮಣ್ಣ ಕವಲಗಿ, ಅವೀನಾಶ ಬಗಲಿ, ಸೇರಿದಂತೆ ಅನೇಕ ದಲಿತ ಮುಖಂಡರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು