ಮೆಗಾ ಮಾರುಕಟ್ಟೆ ಕಾಮಗಾರಿ ಆರಂಭಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

 ಮೆಗಾ ಮಾರುಕಟ್ಟೆ ಕಾಮಗಾರಿ ಆರಂಭಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ವಿಜಯಪುರ. ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮೆಗಾ ಮಾರುಕಟ್ಟೆ ಕಾಮಗಾರಿ ಪ್ರಾರಂಭಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಗುರವಾರ ಜಿಲ್ಲೆಯ ನಿಡಗುಂದಿ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು,  ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಎಸ್.ಎಫ್.ಸಿ. ವಿಶೇಷ ಅನುದಾನ ಯೋಜನೆಯಡಿಯಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆಂದು ಕಾಯ್ದಿರಿಸಿದ ಜಾಗೆಯನ್ನು ಸ್ಥಾನಿಕವಾಗಿ ಪರಿಶೀಲನೆ ನಡೆಸಬೇಕು. ಕಾಯ್ದಿರಿಸಿದ ಜಾಗ ಅತಿಕ್ರಮಣವಾಗಿದ್ದಲ್ಲಿ ತೆರವುಗೊಳಿಸಲು ಕ್ರಮ ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸುವಂತೆ ಪಟ್ಟಣ ಪಂಚಾಯತಿಯ ಅಧಿಕಾರಿಗಳು ಹಾಗೂ ನಿಡಗುಂದಿ ತಹಶೀಲ್ದಾರರಿಗೆ ಅವರು ಸೂಚನೆ ನೀಡಿದರು. 

ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಆರ್.ಎಸ್. ನಲ್ಲಿರುವ ಜವಾಹರ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿದ ಅವರು, ಅಧಿಕಾರಿಗಳೊಂದಿಗೆ. ಸಭೆ ನಡೆಸಿ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

 ನಿಡಗುಂದಿ ಪಟ್ಟಣದ ಹೊಸ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಅವರು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸ್ವಚ್ಛತೆ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.


 ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು