ಮಕ್ಕಳು ವಿಕಲಚೇತನರೆಂದು ಅವರನ್ನು ಮನೆಯಲ್ಲೇ ಇರಿಸದೇ ಶಾಲೆಗಳಿಗೆ ಸೇರಿಸಿ ವಿಶೇಷ ಜ್ಞಾನ ನೀಡಿ, ಎಲ್ಲರಂತೆ ಸಾಮಾನ್ಯ ಜೀವನ ಸಾಗಿಸಲು ಅನುಕೂಲ ಕಲ್ಪಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ

 ವಿಕಲಚೇತನರಿಗೆ ಅವಕಾಶ ಕಲ್ಪಿಸಿ-ಸಂತೋಷ ಬಂಡೆ


ಇಂಡಿ:ಮಕ್ಕಳು ವಿಕಲಚೇತನರೆಂದು ಅವರನ್ನು ಮನೆಯಲ್ಲೇ ಇರಿಸದೇ ಶಾಲೆಗಳಿಗೆ ಸೇರಿಸಿ ವಿಶೇಷ ಜ್ಞಾನ ನೀಡಿ, ಎಲ್ಲರಂತೆ ಸಾಮಾನ್ಯ ಜೀವನ ಸಾಗಿಸಲು ಅನುಕೂಲ ಕಲ್ಪಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.


 ಅವರು ಮಂಗಳವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ 'ವಿಶ್ವ ವಿಕಲಚೇತನರ ದಿನ'ವನ್ನು ಉದ್ಘಾಟಿಸಿ ಮಾತನಾಡಿದರು.

         ವಿಶ್ವದಲ್ಲಿ ಬಹಳಷ್ಟು ವಿಕಲಚೇತನರು ತಾವು ಯಾರಿಗಿಂತ ಕಡಿಮೆ ಇಲ್ಲ ಎಂಬುದನ್ನು ನಾನಾ ರಂಗಗಳಲ್ಲಿ ಸಾಧಿಸಿ ತೋರಿಸಿದ್ದಾರೆ. ಅಂಗವೈಕಲ್ಯ ಅವರ ಪ್ರತಿಭೆಗೆ ಅಡ್ಡಿಯಾಗದಂತೆ ಸಮಾಜ ಅವರಿಗೆ ಸಮಾನ ಅವಕಾಶಗಳನ್ನು ಕೊಡಬೇಕು ಎಂದರು.

        ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ವಿಕಲಾಂಗ ವ್ಯಕ್ತಿಗಳು ಕಲೆ, ವಿಜ್ಞಾನ, ಕ್ರೀಡೆ, ಸಂಗೀತ, ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಈ ದಿನವು ವಿಕಲಾಂಗ ವ್ಯಕ್ತಿಗಳ ಅಪಾರ ಸಾಮರ್ಥ್ಯವನ್ನು ಮತ್ತು ಅವರ ನಾಯಕತ್ವವನ್ನು ಸಶಕ್ತಗೊಳಿಸುವ ಮಹತ್ವವನ್ನು ನಮಗೆ ನೆನಪಿಸುತ್ತದೆ ಎಂದು ಹೇಳಿದರು.

         ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು