ವ್ಯವಸ್ಥಿತ ವ್ಯಾಪಾರ-ವಹಿವಾಟು ನಡೆಸಿ ನಗರ ಸೌಂದರ್ಯೀಕರಣಕ್ಕೆ ಸಹಕರಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್

 ಜಿಲ್ಲಾಧಿಕಾರಿಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ಪರಿವೀಕ್ಷಣೆ


ವ್ಯವಸ್ಥಿತ ವ್ಯಾಪಾರ-ವಹಿವಾಟು ನಡೆಸಿ ನಗರ ಸೌಂದರ್ಯೀಕರಣಕ್ಕೆ ಸಹಕರಿಸಿ-  ಜಿಲ್ಲಾಧಿಕಾರಿ ಟಿ.ಭೂಬಾಲನ್


 ವಿಜಯಪುರ ನಗರದ ಸೌಂದರ್ಯಿಕರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಬೀದಿ-ಬದಿ ವ್ಯಾಪಾರಿಗಳು ನಿಗದಿತ ಸ್ಥಳಗಳಲ್ಲಿ ವ್ಯವಸ್ಥಿತ ಹಾಗೂ ಶಿಸ್ತುಬದ್ಧ ವ್ಯಾಪಾರ ಮಾಡುವುದು ಮತ್ತು ಎಲ್ಲೆಂದರಲ್ಲಿ ಕಸ ಚೆಲ್ಲದೇ ಕಸದ ಡಬ್ಬಿಯಲ್ಲಿ ಸಂಗ್ರಹಿಸಿ ತ್ಯಾಜ್ಯ ಸಂಗ್ರಹಣೆ ವಾಹನಕ್ಕೆ ನೀಡುವ ಮೂಲಕ ನಗರದ ಸೌಂದರ್ಯಿಕರಣಕ್ಕೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ. 



ಶುಕ್ರವಾರ ನಗರದ ಜನತಾ ಬಜಾರ,  ಎಂ.ಆರ್.ಹೋಟೆಲ್ ಹತ್ತಿರ, ಕೆ.ಎಸ್.ಆರ್.ಟಿ.ಸಿ. ಡಿಪೋ ಪಕ್ಕ, ಪ್ರವಾಸೋದ್ಯಮ ಮಂದಿರದ ಹಿಂದೆ, ಸೈನಿಕ ಶಾಲೆ ಜಿಮ್‍ಖಾನಾ ಕ್ಲಬ್ ಹಿಂದೆ ಹಾಗೂ ಆಹಾರ ಮಾರಾಟಕ್ಕೆ ಇಂಡಿ ರೋಡ ಕ್ರೀಡಾಂಗಣದ ಹತ್ತಿರ ಗುರುತಿಸಲಾಗಿರುವ ವೆಂಡಿಂಗ್ ಜೋನ್ ಜಾಗಗಳಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದರು. 


ವಿಜಯಪುರ ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿ ಪರಿಹಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಮಾತನಾಡಿ, ಮಹಾನಗರ ಪಾಲಿಕೆಯ ವಾಣಿಜ್ಯ ಪ್ರದೇಶಗಳಲ್ಲಿ ಕಸವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದ್ದು, ಸಾರ್ವಜನಿಕರು, ಉದ್ದಿಮೆದಾರರು ಕಸವನ್ನು ರಸ್ತೆಯ ಮೇಲೆ ಎಸೆಯದೇ ಕಸ ಸಂಗ್ರಹಿಸಿ ತ್ಯಾಜ್ಯ ಸಂಗ್ರಹಣೆ ವಾಹನಗಳಿಗೆ ನೀಡಬೇಕು. ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಹಾಗೂ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆಯಬೇಕು ಎಂದು ಅವರು ಹೇಳಿದರು. 


ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು