ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು
ಇಂಡಿ. ಪಟ್ಟಣದ ಕೆಲವು ದಿನಗಳಿಂದ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಇದು ಸಾರ್ವಜನಿಕರಿಗೆ ಅತಿಯಾದ ಕಿರಿಕಿರಿ ಉಂಟುಮಾಡುವ ಜತೆಗೆ ರಾತ್ರಿ ವೇಳೆ ತಿರುಗಾಟಕ್ಕೂ ಭಯಪಡುವಂತಾಗಿದೆ.ಬೀದಿ ನಾಯಿಗಳು ಹಗಲು, ರಾತ್ರಿ ಬೊಗಳುವುದು, ರಸ್ತೆಯಲ್ಲಿ ವಾಹನಗಳನ್ನು ( ವಿಶೇಷವಾಗಿ ದ್ವಿಚಕ್ರ ವಾಹನ) ಹಿಂಬಾಲಿಸಿಕೊಂಡು ಹೋಗುವುದು, ವಾಹನದ ಹತ್ತಿರ ಬಂದು ಸವಾರರಿಗೆ ಭಯ ಹುಟ್ಟಿಸುತ್ತಿವೆ.
ಕಸದ ರಾಶಿ ನಾಯಿಗಳ ಮತ್ತೊಂದು ಅಡ್ಡೆಯಾಗಿದ್ದು, ತ್ಯಾಜ್ಯದಲ್ಲಿನ ಆಹಾರ ತಿನ್ನಲು ಶ್ವಾನಗಳ ಗುಂಪುಗಳ ನಡುವೆ ಕಾದಾಟ ನಡೆಯುತ್ತಲೆ ಇರುತ್ತದೆ. ಈ ವೇಳೆ ಚಲಿಸುವ ವಾಹನಗಳಿಗೆ ಅಡ್ಡ ಬಂದು ವಾಹನ ಸವಾರರು ಬೀಳುವುದು ಸಾಮಾನ್ಯವಾಗಿದೆ.ವಿದ್ಯಾರ್ಥಿಗಳು ಶಾಲಾ–ಕಾಲೇಜಿಗೆ, ವಯೋವೃದ್ಧರು ವಾಯು ವಿಹಾರಕ್ಕೆ ತೆರಳುವ ವೇಳೆ ನಾಯಿಗಳು ದಾಳಿ ನಡೆಸುತ್ತವೆ. .
ಇಂಡಿ ಪಟ್ಟಣದಲ್ಲಿ ಪ್ರಮುಖ ರಸ್ತೆ ಗಳಾದ ಬಿಜಾಪುರ ರಸ್ತೆ ಸ್ಟೇಷನ್ ರಸ್ತೆ , ಅಗರಖೇಡ ರಸ್ತೆ, ಸಿಂದಗಿ ರಸ್ತೆಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯುತ್ತಿದ್ದು, ಇದರಿಂದ ಬೀದಿ ನಾಯಿಗಳಿಗೆ ಮೃಷ್ಠಾಹ್ನ ಸಿಕ್ಕಂತಾಗಿದೆ. ಇನ್ನು ಮಾಂಸದ ಅಂಗಡಿಗಳ ಬಳಿಯಂತೂ ಸ್ವಚ್ಛತೆ ಮಾಯವಾಗಿದ್ದು, ಎಲ್ಲೆಡೆ ತ್ಯಾಜ್ಯ ತುಂಬಿ ತುಳುಕುತ್ತಿರುವುದರಿಂದ ಬೀದಿ ನಾಯಿಗಳ ಹಾವಳಿ ಒಂದೆಡೆಯಾದರೆ ಕೊಳೆತ ತ್ಯಾಜ್ಯದಿಂದ ಉತ್ಪತ್ತಿಯಾಗುತ್ತಿರುವ ಸೊಳ್ಳೆ ಸಂತತಿ ಜಿಲ್ಲೆಯ ಜನತೆಯ ನಿದ್ದೆಗೆಡಿಸಿದೆ.
ನಗರದೆಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬೊಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಬೀದಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರಿಗೆ ನಡುಕ ಶುರುವಾಗಿದೆ. ಬೀದಿ ನಾಯಿಗಳ ಹಾವಳಿಯಿಂದ ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳ ಉಪಟಳ ಹೆಚ್ಚಾಗಿದೆ.
ಇಂಡಿ ಪಟ್ಟಣದಲ್ಲಿ ಹಲವು ದಿನಗಳಿಂದ ಬಿದಿ ನಾಯಿಗಳ ಕಾಟ ಜಾಸ್ತಿ ಯಾಗಿದ್ದು ಕೂಡಲೆ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನಹರಿಸಲು ವಿನಂತಿಸುತ್ತೆವೆ. ಇರಶಾದ ಬೋರಾಮಣೆ ಸ್ಥಳೀಯ ನಿವಾಸಿಗಳು.



ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ