ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ -ಪ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ

 ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ -ಪ್ಲೋರೋಸಿಸ್ ತಡೆ-ನಿಯಂತ್ರಣ

 ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ.


 ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ

 ಹಾಗೂ ರಾಷ್ಟ್ರೀಯ ಪೆÇ್ಲೀರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.


ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪೆÇ್ಲೀರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಜಿಲ್ಲೆಯಲ್ಲಿನ ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಆರೋಗ್ಯ ತಪಾಸಣೆಯಿಂದ ವಂಚಿತರಾಗದಂತೆ ನೊಡಿಕೊಳ್ಳಬೇಕು. ಜಿಲ್ಲೆಯ ಪ್ರತಿ ಶಾಲೆಗಳಲ್ಲಿ ಆರೋಗ್ಯ ತಪಾಸಣೆಯ ದಾಖಲಾತಿ ವಹಿ ನಿರ್ವಹಿಸಬೇಕು. ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿರುವ ಮಕ್ಕಳ ನಿಯಮಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಮಕ್ಕಳಲ್ಲಿ ಕಂಡುಬರುವ ಅನೇಮಿಯಾ ಕುರಿತು ಚರ್ಚಿಸಿ, ಪ್ರತಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಅನಿಮಿಯಾ ಕುರಿತು ಮಾಹಿತಿ ನೀಡಿ, ಅದಕ್ಕೆ ಪೂರಕವಾಗಿ ಪ್ರತಿ ಸೋಮವಾರದಂದು ಕಬ್ಬಿಣಾಂಶದ ಮಾತ್ರೆಯನ್ನು ಎಲ್ಲ ಮಕ್ಕಳು ಸೇವನೆ ಮಾಡಲು ಆಯಾ ಶಾಲಾ ದೈಹಿಕ ಶಿಕ್ಷಕರು ಹಾಗೂ ಮುಖ್ಯಗುರುಗಳು ಪ್ರೇರೇಪಿಸಬೇಕು. ಜಿಲ್ಲೆಯಲ್ಲಿ ಕಂಡು ಬಂದಿರುವ ಅಪೌಷ್ಠಿಕ ಮಕ್ಕಳ ಮಾಹಿತಿಯನ್ನು ಕ್ರೋಢೀಕರಿಸಿ ಅಪೌಷ್ಠಿಕತೆ ಹೊಂದಿರುವ ಮಕ್ಕಳಿಗೆ ಅವಶ್ಯವಿರುವ ಸೂಕ್ತ ಚಿಕಿತ್ಸೆಯನ್ನು ಕೊಡಿಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಲ್ಲಿರುವ ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಹೇಳಿದರು.



ರಾಷ್ಟ್ರೀಯ ಪೆÇ್ಲೀರೋಸಿಸ್ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫೆÇ್ಲೀರೈಡ್ ಅಂಶ ಹೆಚ್ಚು ಇರುವ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳ ಪ್ರಸ್ತುತ ಕಾರ್ಯ ನಿರ್ವಹಣಾ ವರದಿ ಸಲ್ಲಿಸಬೇಕು ಹಾಗೂ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣದ ಅವಶ್ಯಕತೆ ಇರುವ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ತುರ್ತಾಗಿ ಸ್ಥಾಪಿಸಲು ಕ್ರಿಯಾಯೋಜನೆಯನ್ನು ಸಲ್ಲಿಸುವಂತೆ ಅವರು  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ ಡಾ. ಕೆ.ಡಿ ಗುಂಡಬಾವಡಿ, ವಿವಿಧ ಕಾರ್ಯಕ್ರಮಗಳ ಕುರಿತಾದ ಪ್ರಗತಿಯನ್ನು ಹಾಗೂ ಕಾರ್ಯಕ್ರಮಗಳ ಯಶಸ್ವಿ ಅನುμÁ್ಠನಕ್ಕಾಗಿ ವಿವಿಧ ಇಲಾಖೆಗಳ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ. ಕೆ. ಚವ್ಹಾಣ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ಅಧಿಕಾರಿ,ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು