ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಸೂಕ್ತ ಜಾಗೃತಿ-ತಿಳುವಳಿಕೆ ಮೂಡಿಸಿ - ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

 ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಸೂಕ್ತ ಜಾಗೃತಿ-ತಿಳುವಳಿಕೆ ಮೂಡಿಸಿ - ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ.


ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ನಿರ್ಮೂಲನೆಗಾಗಿ ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಅಗತ್ಯ ಜಾಗೃತಿ- ತಿಳುವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು. 

ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೊಳಪಡುವ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ ಗಾಂಜಾ ಸಸಿ, ಗಿಡಗಳು ಬೆಳೆಯದಂತೆ ನಿಗಾ ವಹಿಸಬೇಕು. ಮಾದಕ ದ್ರವ್ಯಗಳ ಸಸಿಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆ ಮಾಹಿತಿ ಒದಗಿಸುವಂತೆ ಅವರು ಸೂಚನೆ ನೀಡಿದರು. 

ಔಷಧ ನಿಯಂತ್ರಕ ಇಲಾಖೆ ಮಾದಕ ಅಂಶಗಳನ್ನುಳ ಔಷಧಿ ಮಳಿಗೆಗಳಲ್ಲಿ ಕಡ್ಡಾಯವಾಗಿ ವೈದ್ಯರ ಅನುಮತಿ ಚೀಟಿಯೊಂದಿಗೆ ಮಾರಾಟಕ್ಕೆ ಮಾತ್ರ ಅವಕಾಶ ಒದಗಿಸಬೇಕು. ಈ ಕುರಿತು ಜಿಲ್ಲೆಯಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇಡಬೇಕು. ನಿಯಮಿತವಾಗಿ ಈ ಕುರಿತು ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದಲ್ಲದೇ, ಮಾದಕ ದ್ರವ್ಯಗಳ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಬಕಾರಿ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ-ಸಂಗ್ರಹಣೆ ಬಗ್ಗೆ ತೀವ್ರ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.


ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಅವರು ಮಾತನಾಡಿ, ಮಾದಕ ದ್ರವ್ಯ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಲಾಗಿದ್ದು, ಜಿಲ್ಲೆಯಾದ್ಯಂತ ಕಳೆದ 03 ವರ್ಷಗಳಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿಯಲ್ಲಿ 2022 ರಲ್ಲಿ 21 ಪ್ರಕರಣಗಳನ್ನು ದಾಖಲಿಸಿ 44 ಕೆ.ಜಿ. 416 ಗ್ರಾಂ. ಗಾಂಜಾ ಜಪ್ತಿ ಮಾಡಲಾಗಿದ್ದು, 36.45 ಕೆ.ಜಿ. ಮಾದಕ ದ್ರವ್ಯಗಳನ್ನು ನಾಶಪಡಿಸಿಲಾಗಿದೆ. ಅದರಂತೆ 2023ನೇ ಸಾಲಿನಲ್ಲಿ 29 ಪ್ರಕರಣಗಳನ್ನು ದಾಖಲಿಸಿ, 277 ಕೆ.ಜಿ.ಗೂ ಹೆಚ್ಚಿನ ಗಾಂಜಾ ಜಪ್ತಿ ಮಾಡಿ 202 ಕೆ.ಜಿ.ಗೂ ಹೆಚ್ಚಿನ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ. 2024ನೇ ಸಾಲಿನಲ್ಲಿ 24 ಪ್ರಕರಣಗಳನ್ನು ದಾಖಲಿಸಿ, 146.808 ಕೆ.ಜಿ. ಮಾದಕ ದ್ರವ್ಯ ಜಪ್ತಿ ಮಾಡಲಾಗಿದೆ ಎಂದು ಹೇಳಿದರು. 

ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿ.ಬಿ.ಚಿಕ್ಕಲಕಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು