ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್. 

ಇಂಡಿ: ಪಟ್ಟಣದ  ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಸಾಮಾನ್ಯ ಸಂಸ್ಥೆಯ ಆವರಣದಲ್ಲಿ ಡಿಫಾರಂಸಿ ಮಹಾವಿದ್ಯಾಲಯದಲ್ಲಿ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಅಧ್ಯಕ್ಷ ದೀಪಕ ದೋಶಿ ಇವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷ ನೀಲಕಂಠಗೌಡ ಪಾಟೀಲ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಕಾಸುಗೌಡ ಬಿರಾದಾರ ಹಾಜರಿದ್ದರಿಂದ ಮೂಲಕ ಅವರಿಗೆ ನಿಮ್ಮ ಸದಸ್ಯತ್ವ ರದ್ದು ಪಡಿಸಲಾಗಿದೆ. ಕಾರಣ ನೀವು ಸಭೆಯಲ್ಲಿ ಇರುವ ಅರ್ಹತೆ ಹೊಂದಿಲ್ಲ. ಹೀಗಾಗಿ ನೀವು ಹೊರಗೆ ಹೋಗಿ ಎಂದು ಸದಸ್ಯರು ಹೇಳಿದರು.

ಅದಕ್ಕೆ ಪ್ರತಿಯಾಗಿ ಕಾಸುಗೌಡ ಬಿರಾದಾರರವರು ನಮ್ಮ ಕುಟುಂಬವು ಈ ಸಂಸ್ಥೆಗೆ ೧೨ ಎಕರೆ ಜಾಗವನ್ನು ದಾನ ರೂಪದಲ್ಲಿ ನೀಡಿರುತ್ತಾರೆ. ಹೀಗಾಗಿ ನನ್ನ ಸದಸ್ಯತ್ವ ರದ್ದು ಮಾಡಲು ಬರುವದಿಲ್ಲ ಎಂದು ವಾದಿಸಿದರು.

ಮಾತಿಗೆ ಮಾತು ಬೆಳೆದು ಅವಾಚ್ಯ ಶಬ್ದಗಳ ಪ್ರಯೋಗವಾಗ ತೊಡಗಿ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ, ಉಪಾಧ್ಯಕ್ಷ ನೀಲಕಂಠಗೌಡ ಬಿರಾದಾರ ಮತ್ತು ನಿರ್ದೇಶಕ ಸಾತು ತೆನೆಹಳ್ಳಿ ಇವರು ಕಾಸುಗೌಡ ಮೇಲೆ ಹಲ್ಲೆ ಮಾಡಿ ಅಂಗಿ ಹರಿದು ಅವಾಚ್ಯ ಶಬ್ದ ಪ್ರಯೋಗಿಸಿ ಹೊಡೆದ ಘಟನೆ ನಡೆದಿದೆ ಎಂದು ಕಾಸುಗೌಡ ಬಿರಾದಾರರವರು ಫಿರ್ಯಾದಿಯಲ್ಲಿ ತಿಳಿಸಿದ್ದಾರೆ.  ಶಾಂತೇಶ್ವರ ವಿದ್ಯಾವರ್ಧಕ ಸಂಘದ ಸಾಮಾನ್ಯ ಸಭೆಯಲ್ಲಿ ಕಾಸು ಗೌಡ ಬಿರಾದಾರ ಇವರ ಸದಸ್ಯತ್ವದ ಬಗ್ಗೆ ಹೊಡೆದಾಟ  ಕೊನೆಗೆ ಪೊಲೀಸ್ ಠಾಣಾ ಮೆಟ್ಟಿಲೇರುವಂತಾಗಿದೆ.

ಸಂಸ್ಥೆಯ ಅಧ್ಯಕ್ಷ ದೀಪಕ ದೋಶಿ ಇವರ ಬೆಂಬಲ ಇದೆ ಎಂದು ಮತ್ತು ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ, ಉಪಾಧ್ಯಕ್ಷ ನೀಲಕಂಠಗೌಡ ಬಿರಾದಾರ ಮತ್ತು ನಿರ್ದೇಶಕ ಸಾತು ತೆನೆಹಳ್ಳಿ, ದೀಪಕ್ ಮಾಣ ಕಲಾಲ್ ದೋಶಿ ಅವರ ಮೇಲೆ ಶಹರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು