ನಾಳೆ ಕರ್ನಾಟಕ ರಾಜ್ಯಾಧ್ಯಂತ ಸರಕಾರಿ ಕಚೇರಿ ಹಾಗೂ ಶಾಲಾ ಕಾಲೇಜ ರಜೆ.
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್. ಎಂ ಕೃಷ್ಣ ಅವರ ನಿಧನದ ಹಿನ್ನೆಲೆ ಮೂರು ದಿನಗಳ ಕಾಲ ಶೋಕಾಚರಣೆ ಮತ್ತು ಗೌರವಾರ್ಥವಾಗಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ
ಎಸ್.ಎಂ ಕೃಷ್ಣ ಅವರ ನಿಧನದ ಹಿನ್ನೆಲೆ 10 - 12 - 2024 ರಿಂದ 12 - 12 - 2024 ರವರೆಗೆ ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ನಿಧನದರಾದ ಹಿನ್ನೆಲೆಯಲ್ಲಿ ಗೌರವಾರ್ಥವಾಗಿ ನಾಳೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ ಅವರ ನಿಧನದ ಹಿನ್ನೆಲೆ ಮೂರು ದಿನಗಳ ಕಾಲ ಶೋಕಾಚರಣೆ ಮತ್ತು ಗೌರವಾರ್ಥವಾಗಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ದಿವಂಗತರ ಅಂತ್ಯಕ್ರಿಯೆಯನ್ನು ನಾಳೆ 11-12-2024 ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಎಸ್. ಎಂ ಕೃಷ್ಣ ಅವರ ನಿಧನದ ಹಿನ್ನೆಲೆ ಬುಧವಾರದಂದು 11-12-2024 ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ