ಭ್ರಷ್ಟಾಚಾರ ವಿರೋಧಿ ದಿನಾಚರಣೆ ಕಾರ್ಯಕ್ರಮದ ವರದಿ

ಭ್ರಷ್ಟಾಚಾರ ವಿರೋಧಿ ದಿನಾಚರಣೆ ಕಾರ್ಯಕ್ರಮದ ವರದಿ 


 ಇಂಡಿ ಪಟ್ಟಣದ ಎಸ್.ಎಸ್.ವಿ.ವಿ.ಸಂಘದ ಶ್ರೀ ಜಿ.ಆರ್.ಗಾಂಧಿ ಕಲಾ, ಶ್ರೀ ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಶ್ರೀ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ & ರಾಜ್ಯಶಾಸ್ತç ವಿಭಾಗದ ಅಡಿಯಲ್ಲಿ ಭ್ರಷ್ಟಾಚಾರ ವಿರೋಧಿ ದಿನಾಚರಣೆ ಕಾರ್ಯಕ್ರಮ ಜರುಗಿತು.

  ಈ ಕಾರ್ಯಕ್ರಮದ ಸಹಾಯಕ ಪ್ರಾಧ್ಯಾಪಕರಾದ ಡಾ.ಜಯಪ್ರಸಾದ ಡಿ. ಅವರು ಮಾತನಾಡುತ್ತಾ “ಇಂದು ಅಂತರ್‌ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ. ಪ್ರತಿ ವರ್ಷ ಡಿಸೆಂಬರ್ ೯ ರಂದು ಅಂತರರಾಷ್ಟ್ರೀಯ ಭ್ರಷ್ಟಚಾರ ವಿರೋಧಿ ದಿನವನ್ನು ಆಚರಣೆ ಮಾಡಲಾಗುತ್ತದೆ. ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗು ಜನರು ಭ್ರಷ್ಟಾಚಾರವನ್ನು ಹೇಗೆ ತಡೆಯಬಹುದು ಮತ್ತು ಭ್ರಷ್ಟಾಚಾರವನ್ನು ಸಮರ್ಥವಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸುವ ಕ್ರಮಗಳನ್ನು ಬಲಪಡಿಸುವ ಸಲುವಾಗಿ ಪ್ರತಿವರ್ಷ ಡಿಸೆಂಬರ್ ೯ ರಂದು ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಣೆ ಮಾಡಲಾಗುತ್ತದೆ.” ಎಂದು ಹೇಳಿದರು.

  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನಮ್ಮ ಮಹಾವಿದ್ಯಾಲಯದ ಪ್ರಾಂಶುಪಾಲರಾದ  ಡಾ.ಎಸ್.ಬಿ.ಜಾಧವ ಅವರು ಮಾತನಾಡುತ್ತ ಸಮಾಜದಲ್ಲಿ ಭ್ರಷ್ಟಾಚಾರವು “ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹಾಳುಮಾಡುತ್ತಿರುವ ಗಂಭೀರ ಪಿಡುಗಾಗಿದೆ. ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅನಿವಾರ್ಯವಾಗಿದೆ. ಶಿಕ್ಷಣ, ಆರೋಗ್ಯ, ರಾಜಕೀಯ, ಕ್ರೀಡೆ, ನ್ಯಾಯ, ದೇಶದ ಅಭಿವೃದ್ಧಿ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರ ಆಳವಾಗಿ ಬೇರೂರಿದೆ. ಇದರಿಂದ ಉಂಟಾಗುವ ಸಮಸ್ಯೆಗಳು ಗಂಭೀರವಾಗಿವೆ. ಪ್ರಜಾಪ್ರಭುತ್ವ, ಸಮಾಜದ ಭದ್ರತೆ, ನೈತಿಕ ಮೌಲ್ಯ, ನ್ಯಾಯ ಸಂಸ್ಥೆಯ ಮೌಲ್ಯಗಳನ್ನು ಭ್ರಷ್ಟಾಚಾರ ಎಂಬ ಪಿಡುಗು ದುರ್ಬಲಗೊಳಿಸುತ್ತಿದೆ.” ಎಂದು ಹೇಳಿದರು. 

  ಈ ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಪ್ರಾಧ್ಯಾಪಕರಾದ ಡಾ.ಸುರೇದ್ರ ಕೆ, ವಂದನಾರ್ಪಣೆಯನ್ನು ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದÀ ಡಾ. ಪಿ.ಕೆ.ರಾಠೋಡ ಅವರು ನಿರ್ವಹಿಸಿದರು.

  ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ  ಸಹ ಪ್ರಾಧ್ಯಾಪಕರಾದ ಡಾ.ಆನಂದ ಸಿ. ನಡವಿನಮನಿ ಸಹಾಯಕ ಪ್ರಾಧ್ಯಾಪಕರಾದ ಡಾ. ವಿಶ್ವಾಸ್. ಕೋರವಾರ, ಶ್ರೀ.ಶ್ರೀಶೈಲ, ಡಾ. ಸಿ.ಎಸ್.ಬಿರಾದಾರ, ಡಾ. ಶ್ರೀಕಾಂತ ರಾಠೋಡ, ಶ್ರೀ ಎಮ್.ಆರ್ ಕೋಣದೆ, ಶೃತಿ ಪಾಟೀಲ, ಶ್ವೇತಾ ಕಾಂತ, ಪಂಕಜಾ ಕುಲಕರ್ಣಿ, ಶೃತಿ ಬಿರಾದಾರ, ಶ್ರೀ.ಪರಶುರಾಮ ಅಜಮನಿ, ನಸ್ರೀನ ವಾಲಿಕಾರ, ಧಾನಮ್ಮ ಪಾಟೀಲ, ಬೋಧಕೇತರ ಸಿಬ್ಬಂದಿ & ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು