ಅಂಬೇಡ್ಕರ್ ಚಿಂತನೆಗಳು ಇಂದಿನ ಪೀಳಿಗೆಗೆ ದಾರಿದೀಪ- ಸಂತೋಷ ಬಂಡೆ

 ಅಂಬೇಡ್ಕರ್ ಚಿಂತನೆಗಳು ಇಂದಿನ ಪೀಳಿಗೆಗೆ ದಾರಿದೀಪ- ಸಂತೋಷ ಬಂಡೆ


ಇಂಡಿ: ಸಮಾನತೆ ಮತ್ತು ಮಾನವೀಯ ಮೌಲ್ಯಗಳಿಗಾಗಿ ಜೀವನಪರ್ಯಂತ ಹೋರಾಟ ನಡೆಸಿ ನೂತನ ದಿಕ್ಕೊಂದನ್ನು ಸೂಚಿಸಿದ ಭಾರತದ ಸಂವಿಧಾನಶಿಲ್ಪಿ ಡಾ. ಬಿ ಆರ್  ಅಂಬೇಡ್ಕರ್ ಅವರ ತತ್ವಾದರ್ಶ ನಮಗೆ ಸ್ಫೂರ್ತಿಯಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

        ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಡಾ.ಬಿ ಆರ್ ಅಂಬೇಡ್ಕರ್ ಅವರ 68 ನೇ ಮಹಾಪರಿನಿರ್ವಾಣ ದಿನವನ್ನು ಉದ್ಧೇಶಿಸಿ ಮಾತನಾಡಿದರು.

        ಡಾ. ಬಿ ಆರ್ ಅಂಬೇಡ್ಕರ್ ಅವರು ಅಪಾರವಾದ ಅಧ್ಯಯನ, ಚಿಂತನೆಗಳು, ತಮ್ಮ ಸಂಶೋಧನೆ ಮತ್ತು ಪಾಂಡಿತ್ಯಗಳಿಂದ ಬೌದ್ಧಿಕ ಪ್ರಖರತೆಯನ್ನು ಹೊಂದಿದ್ದರು. ಛಲ, ಶ್ರದ್ಧೆ ಮತ್ತು ಪರಿಶ್ರಮದಿಂದ ಪ್ರತಿಕೂಲ ಸನ್ನಿವೇಶದಲ್ಲೂ ಒಬ್ಬ ಸಾಮಾನ್ಯ ಮನುಷ್ಯ ಏನೆಲ್ಲವನ್ನು ಸಾಧಿಸಬಲ್ಲ ಎನ್ನುವುದಕ್ಕೆ ಅವರ ಜೀವನವೇ ಸಾಕ್ಷಿ. ಅವರ ಚಿಂತನೆಗಳು ಇಂದಿನ ಪೀಳಿಗೆಗೆ ದಾರಿದೀಪ ಎಂದು ಹೇಳಿದರು.


        ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, 'ಸಮಾಜದ ಎಲ್ಲ ವರ್ಗಗಳ ಜನರೂ ಸಮಾನ ಹಕ್ಕು- ಅವಕಾಶಗಳನ್ನು ಹೊಂದಬೇಕು ಮತ್ತು ಅನುಭವಿಸಬೇಕು ಎಂಬ ವಿಚಾರಧಾರೆಯನ್ನು ಸಂವಿಧಾನದಲ್ಲಿ ಅಳವಡಿಸಿದ ಅಂಬೇಡ್ಕರ್ ಅವರು ಸಮಾಜದ ಏಳಿಗೆ ಹಾಗೂ ರಾಷ್ಟ್ರದ ಪ್ರಗತಿಯ ಹಾದಿ ಬಗ್ಗೆ ಅತ್ಯುತ್ತಮ ದೂರದೃಷ್ಟಿ ಹೊಂದಿದ್ದರು’ ಎಂದು ಹೇಳಿದರು.

        ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು