ನೌಕರರ ಸಂಘದ ರಾಜ್ಯ ಅಧ್ಯಕ್ಷ ಷಡಕ್ಷರಿಗೆ ಇಂಡಿಯಲ್ಲಿ ಅಭಿನಂದನಾ ಸಮಾರಂಭ.
ಇಂಡಿ. ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸರಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರಿಗೆ ಇಂಡಿ ತಾಲ್ಲೂಕು ನೌಕರರ ಸಂಘದ ವತಿಯಿಂದ ಅಭಿನಂದನಾ ಸಮಾರಂಭವನ್ನು ದಿನಾಂಕ 03-01-2025 ರಂದು ನೌಕರರ ಸಭಾ ಭವನದಲ್ಲಿ ನೆಡಯಲಿದೆ ಎಂದು ಇಂಡಿ ತಾಲೂಕಾ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ರಾವೂರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು ನಿರ್ದೇಶಕರು ಸೇರಿದಂತೆ 400 ನೂರಕ್ಕೂ ಹೆಚ್ಚು ನೌಕರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಮ್ಮ ಪ್ರಮುಖ ಬೇಡಿಕೆಯಾದ ಏಳನೇ ವೇತನ ವನ್ನು ಕರ್ನಾಟಕ ಸರಕಾರ ಜಾರಿಮಾಡಿದೆ. ಈಗ ನಮ್ಮ ಮುಂದೆ ಇರುವುದು ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಪ್ರಯತ್ನ ಮಾಡಲಾಗುತ್ತದೆ ಹೀಗೆ ಅನೇಕ ಬೇಡಿಕೆಯನ್ನು ಪೂರೈಸಲು ನಮ್ಮ ನೌಕರರ ಸಂಘ ಸಿ.ಎಸ್. ಷಡಕ್ಷರಿ ಇವರ ನೇತ್ರತ್ವದಲ್ಲಿ ಪ್ರಯತ್ನ ಮಾಡಲಾಗುತ್ತದೆ ಎಂದರು.
ಬಸವರಾಜ ಮೇತ್ರಿ ರಾಜ್ಯ ಪರಿಷತ್ತ ಸದಸ್ಯರು, ರವಿ ಗಿಣ್ಣಿ ಖಜಾಂಚಿ, ಜಿ.ಎನ್.ಬಿರಾದಾರ, ಎಸ್.ವಿ. ಹರಳಯ್ಯಾ, ಸಂಗನಬಸವ, ಸಂತೋಷ ಪ್ಯಾಟಿ, ಅಬುತಾಲಿಬ ಹೊಸುರ, ಸೇರಿದಂತೆ ಅನೇಕರು ಇದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ