ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯಸ್ಮರಣೆ ಹಾಗೂ ಸೇವಾದಳ ಸಪ್ತಾಹ ಆಚರಣೆ
ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯಸ್ಮರಣೆ ಹಾಗೂ ಸೇವಾದಳ ಸಪ್ತಾಹ ಆಚರಣೆ.
ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಭಾರತ ಸೇವಾದಳ ಎಲ್ಲಾ ತಾಲೂಕು ಸಮಿತಿ ಹಾಗೂ ಸರ್ಕಾರಿ ಪ್ರೌಢಶಾಲೆ ಇಂಡಿ ಇವರುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯ ಸ್ಮರಣೆ ಹಾಗೂ ಸೇವಾದಳ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಭಾರತ ಸೇವಾದಳ ಕಾರ್ಯಚಟುವಟಿಕೆಗಳು, ರಾಷ್ಟ್ರಧ್ವಜ ಆರೋಹಣ, ಅವರೋಹಣ ಮತ್ತು ಶಾರೀರಿಕ, ನೈತಿಕ ಯೋಗ ಮತ್ತು ಮೌಲ್ಯ ಶಿಕ್ಷಣವನ್ನು ನೀಡುವುದರ ಜೊತೆಗೆ ದೇಶಪ್ರೇಮ, ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವಲ್ಲಿ ಮಹತ್ವದ ಸಂಸ್ಥೆಯಾಗಿದೆ ಎಂದರು.
ಸೇವಾದಳ ಜಿಲ್ಲಾ ಸಂಪನ್ಮೂಲ ಶಿಕ್ಷಕ ಜಿ ಜಿ ಬರಡೋಲ, ಸೇವಾದಳದ ಹುಟ್ಟು, ಬೆಳವಣಿಗೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯ ಪಿ ಎನ್ ಸೋನಾವನೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಭಾರತ ಸೇವಾದಳ ತಾಲೂಕು ಅಧಿನಾಯಕ ಎಸ್ ಬಿ ಕಲ್ಲೊಳ್ಳಿ, ಸೇವಾದಳ ಶಾಖಾ ನಾಯಕಿ ಎ ಎಪ್ ಚವ್ಹಾಣ,ಹಿರಿಯ ಶಿಕ್ಷಕರಾದ ಎಮ್ ಎಸ್ ಚಲವಾದಿ ಹಾಗೂ ಶಾಲಾ ಶಿಕ್ಷಕ ವೃಂದ, ಬಿಎಡ್ ಪ್ರಶಿಕ್ಷಣಾರ್ಥಿಗಳು, ಸೇವಾದಳ ಮಕ್ಕಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಯೋಗ ಶಿಕ್ಷಕ ಬಿ ಎಸ್ ಪಾಟೀಲ ನಿರೂಪಿಸಿದರು. ಎ ಎಪ್ ಚವ್ಹಾಣ ಸ್ವಾಗತಿಸಿದರು. ಶಿಕ್ಷಕ ಬಿ ಎಸ್ ತೆಗ್ಗಳ್ಳಿ ವಂದಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ