ವೇಮನರ ಚಿಂತನೆ ಬದುಕಿಗೆ ಮಾರ್ಗದರ್ಶಿ-ಸಂತೋಷ ಬಂಡೆ

 ವೇಮನರ ಚಿಂತನೆ ಬದುಕಿಗೆ ಮಾರ್ಗದರ್ಶಿ-ಸಂತೋಷ ಬಂಡೆ

ಇಂಡಿ: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಮಾಜ ಸುಧಾರಕರಾಗಿ, ಜನರಾಡುವ ಭಾಷೆಯಲ್ಲಿ ಬೋಧನೆ ಮಾಡಿದ ಜನಪರ ನಿಲುವಿನ ಮಹಾಯೋಗಿ ವೇಮನ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.



         ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಮಹಾಯೋಗಿ ವೇಮನರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.

       ಕನ್ನಡದಲ್ಲಿ ಸರ್ವಜ್ಞರಿದ್ದಂತೆ, ತೆಲುಗಿನಲ್ಲಿ ವೇಮನ. ಯೋಗ ವಿಚಾರದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅವರ ಕವಿತೆಗಳಲ್ಲಿ ಸಾಮಾಜಿಕ, ನೈತಿಕ, ವಿಡಂಬನಾತ್ಮಕ ಸಂಗತಿಗಳಿವೆ. ಸಮಾಜ ಚಿಂತಕರಾಗಿ ಅವರು ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದವರು. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು. 

          ಶಿಕ್ಷಕಿ ಎಸ್ ಪಿ ಪೂಜಾರಿ ಮಾತನಾಡಿ, ಸಾಮಾನ್ಯ ಜ್ಞಾನದ ಮೂಲಕವೇ ಡಾಂಭಿಕತೆ, ಧರ್ಮ- ಅಧರ್ಮ, ಜ್ಞಾನ-ಅಜ್ಞಾನ ಸೇರಿದಂತೆ ಜೀವನದಲ್ಲಿ ಸಾರ್ಥಕತೆಯನ್ನು ಕಂಡುಕೊಳ್ಳುವ ಪದ್ಯಗಳನ್ನು ರಚಿಸುವ ಮೂಲಕ ತೆಲುಗಿನ ಸರ್ವಜ್ಞನೆನಿಸಿಕೊಂಡಿದ್ದ ವೇಮನರ ವಿಚಾರಗಳು ಇಂದಿಗೂ ಮಹತ್ವ ಪಡೆದಿವೆ ಎಂದು ಹೇಳಿದರು.


             ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿದ್ದರು. ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಸ್ಥಳೀಯರಾದ ಬೇಗಂ ಮುಲ್ಲಾ, ಕಮಲಾಬಾಯಿ ದಳವಾಯಿ ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು