ಆಧುನಿಕ ಶಿಕ್ಷಣದ ಜನನಿ ಸಾವಿತ್ರಿಬಾಯಿ ಫುಲೆ-ಸಂತೋಷ ಬಂಡೆ

 ಆಧುನಿಕ ಶಿಕ್ಷಣದ ಜನನಿ ಸಾವಿತ್ರಿಬಾಯಿ ಫುಲೆ-ಸಂತೋಷ ಬಂಡೆ

ಇಂಡಿ: ಹೆಣ್ಣು ಮಕ್ಕಳು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟಗಳನ್ನು ಲೆಕ್ಕಿಸದೆ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದ ಮಹಾತಾಯಿ ಸಾವಿತ್ರಿಬಾಯಿ ಫುಲೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

       ಅವರು ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ನಿಮಿತ್ತ ಹಮ್ಮಿಕೊಂಡ 'ಆಧುನಿಕ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ' ಕುರಿತ ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

      ಸಾವಿತ್ರಿಬಾಯಿ ಫುಲೆ ಭಾರತದ ಮೊಟ್ಟಮೊದಲ ಶಿಕ್ಷಕಿ. ಸಾಮಾಜಿಕ-ಮಹಿಳಾ ಹಕ್ಕುಗಳ ಹೋರಾಟಗಾರ್ತಿ.

ಮಹಿಳೆಯರು ಮನೆಯಿಂದ ಹೊರಬಂದು ಸಾಮಾಜಿಕ ಚಳವಳಿಯಲ್ಲಿ ಪಾಲ್ಗೊಳ್ಳಲು ಹಿಂಜರಿಯುತ್ತಿದ್ದ ಕಾಲದಲ್ಲಿ ಪತಿ ಜ್ಯೋತಿಬಾ ಫುಲೆ ಅವರ ಜೊತೆಗೂಡಿ ಅನೇಕ ಶಾಲೆಗಳನ್ನು ಸ್ಥಾಪಿಸಿದ, ಆಧುನಿಕ ಶಿಕ್ಷಣದ ಜನನಿಯ ಜೀವನಾದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

        ಹಿರಿಯ ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ, ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟ ಮಾಡಿ ಮಹಿಳೆಯರಿಗೊಸ್ಕರ ಪ್ರಪ್ರಥಮವಾಗಿ ಶಾಲೆಗಳನ್ನು ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಎಲ್ಲರಿಗೂ ವಿದ್ಯೆ ಸಿಗಬೇಕೆಂಬ ಅವರ ದೂರದೃಷ್ಟಿ ಇಂದಿಗೂ ಪ್ರಸ್ತುತವೆನಿಸುತ್ತದೆ ಎಂದು ಹೇಳಿದರು.

         ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಗ್ರಾಮಸ್ಥರಾದ ಬೇಗಂ ಮುಲ್ಲಾ, ಕಮಲಾಬಾಯಿ ದಳವಾಯಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು