ಪತ್ರಕರ್ತರಿಗೆ ಗೂಡ್ ನ್ಯೂಸ್: ಉಚಿತ್ ಬಸ್ ಪಾಸ್ ಸೌಲಭ್ಯ.

 ಬೆಂಗಳೂರು: ಗ್ರಾಮಿಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಜಿ ಆಹ್ವಾನಿಸಲಾಗಿದೆ. ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ಕರ್ನಾಟಕ ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನುಡಿದಂತೆ ನಡೆದಿದೆ.


  ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಖಾತೆ ವಿವರ ಸೇರಿದಂತೆ ಯಾವುದೇ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ,

ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ. 

ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ ‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು