ಕಳೆದ ೫ ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತಹ ಸರಕಾರದಿಂದ ೨೫ ಆದೇಶಗಳನ್ನು ಮಾಡಿಸಿದ್ದೇನೆ.

 ಇಂಡಿ: ಮುಂಬರುವ ೨೦೨೬ಕ್ಕೆ ಕೇಂದ್ರ ಸರ್ಕಾರ ೮ನೇ ವೇತನ ಆಯೋಗ ಜಾರಿಗೆ ತರಲಿದ್ದು, ಅದನ್ನು ಯಥಾವತ್ತಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ಜಾರಿಯಾಗುವಂತೆ ಕ್ರಮ ಜರುಗಿಸಲಾಗುವದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಭರವಸೆ ನೀಡಿದರು. 

ಅವರು ಶುಕ್ರವಾರ ಇಂಡಿ ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಸಭಾ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕಳೆದ ೫ ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತಹ ಸರಕಾರದಿಂದ ೨೫ ಆದೇಶಗಳನ್ನು ಮಾಡಿಸಿದ್ದೇನೆ. ಇದನ್ನು ಅರಿತ ರಾಜ್ಯದ ನೌಕರರು ಸಂಘಟನೆಯ ಸತ್ಯ ಮತ್ತು ನ್ಯಾಯವನ್ನು ಕಂಡು ಮತ್ತೊಮ್ಮೆ ನನಗೆ ಗೆಲ್ಲಿಸಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುವದಾಗಿ ಹೇಳಿದರು. 

ಸಂಘದ ಸಂವಿಧಾನವನ್ನು ತಿದ್ದಿ ೧೨೨ ಪುಟಗಳಿಗೆ ಹೆಚ್ಚಿಸಿದ್ದೇನೆ. ಇದರ ಅಡಿಯಲ್ಲಿ ಎಲ್ಲಾ ನೌಕರರಿಗೂ ನ್ಯಾಯ ಸಿಗುವಂತೆ ಮಾಡಲಾಗಿದೆ. ಭ್ರಷ್ಟಾಚಾರ ಕೊನೆಗೊಳಿಸಲು ಸಂಕಲ್ಪ ತೊಡಲಾಗಿದೆ. ಸರ್ಕಾರದ ೨೫ ಕೋಟಿ ಅನುದಾನ ಬಳಸಿಕೊಂಡು ಸಂಘದ ಅಡಿಯಲ್ಲಿ ಸಭಾ ಭವನ ನಿರ್ಮಿಸಲಾಗಿದೆ ಎಂದರು.

ನೌರರಿಗಾಗಿ ಎನಪಿಎಸ್ ತೆಗೆದು ಓಪಿಎಸ್ ಜಾರಿಗೊಳಿಸುವದು, ನಗದು ರಹಿತ ಚಿಕಿತ್ಸೆ ಮಾಡುವ ಬಗ್ಗೆ ಸರ್ಕಾರ ಭರವಸೆ ನೀಡಿದೆ. ಇದರ ಜೊತೆಗೆ ನೌಕರ ಮರಣ ಹೊಂದಿದರೆ ಅವರ ಕುಟುಂಬಕ್ಕೆ ೧ ಕೋಟಿ ರೂ, ಬರುವಂತೆ ಇನ್ಸುರೆನ್ಸ ಮಾಡಿಸುವ ಯೋಜನೆ ಜಾರಿಗೊಳಸಲಾಗುವದು ಎಂದರು.

ರಾಜ್ಯ ಸರ್ಕಾರಿ ನೌಕರರು ಬೆಂಗಳೂರಿಗೆ ಬಂದರೆ ಕೇವಲ ೧೦೦ ರೂ, ಗಳಲ್ಲಿ ಅವರು ತಂಗಲು ವ್ಯವಸ್ಥೆ ಮಾಡಲಾಗುವದು ಎಂದರು.


ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವೂರ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯಾಧ್ಯಕ್ಷರಾದ ಷಡಕ್ಷರಿ ಅವರು ನಮ್ಮೆಲ್ಲ ನೌಕರ ವರ್ಗಕ್ಕೆ ಒಳಿತು ಮಾಡಲು ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬೆನ್ನೆಲುಬಾಗಿ ಎಲ್ಲ ನೌಕರರು ಕಾರ್ಯ ನಿರ್ವಹಿಸಬೇಕಿದೆ ಎಂದು ತಿಳಿಸಿ ಓಪಿಎಸ್ ಜಾರಿಗೊಳಿಸಬೇಕು, ನಗದು ರಹಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ, ಮನವಿ ಸಲ್ಲಿಸಿದರು. 

ಜಿಲ್ಲಾ ಅಧ್ಯಕ್ಷ ಸುರೇಶ ಶೇಡಬ್ಯಾಳ, ಸಿಂದಗಿ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ರಾಜ್ಯ ಕಾರ್ಯದರ್ಶಿ ಸಂಗನಬಸವ ಮಾತನಾಡಿದರು.

ಕಾರ್ಯಕ್ರಮವನ್ನು ರವಿ ಗಿಣ್ಣಿ ನಿರೂಪಿಸಿದರು.ಎಸ್.ಎಸ್.ಭಜಂತ್ರಿ ಪ್ರಾರ್ಥಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು