ರಕ್ತಹೀನತೆಯು ಗರ್ಭಿಣಿಯರು, ಚಿಕ್ಕ ಮಕ್ಕಳು, ಹದಿಹರೆಯದವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ: ಭಜಂತ್ರಿ

 ರಕ್ತಹೀನತೆ ತಡೆಗಟ್ಟಲು ಎಲ್ಲರ ಸಹಕಾರ ಮುಖ್ಯ-ಭಜಂತ್ರಿ



ಇಂಡಿ: ರಕ್ತಹೀನತೆಯು ಗರ್ಭಿಣಿಯರು, ಚಿಕ್ಕ ಮಕ್ಕಳು, ಹದಿಹರೆಯದವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸೇವಿಸುವ ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆಯೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ತಡವಲಗ ಸಮುದಾಯ ಆರೋಗ್ಯ ಕೇಂದ್ರದ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಆಪ್ತ ಸಮಾಲೋಚಕ ರಾಮಗೊಂಡ ಭಜಂತ್ರಿ ಹೇಳಿದರು.

         ಸೋಮವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್,ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ 'ಅನಿಮೀಯ ಮುಕ್ತ ಅಭಿಯಾನ'ವನ್ನು ಉದ್ಧೇಶಿಸಿ ಮಾತನಾಡಿದರು.


        10 ರಿಂದ 19 ವಯಸ್ಸಿನವರಲ್ಲಿ ಕಂಡುಬರುವ ರಕ್ತಹೀನತೆ ಪ್ರಮಾಣ ನಿಯಂತ್ರಿಸುವದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪ್ರತಿಶತ 55%ಕ್ಕಿಂತ ಹೆಚ್ಚು ಗಂಡು ಮತ್ತು ಹೆಣ್ಣು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.

ಪ್ರತಿವಾರಕ್ಕೆ ಒಂದು ಕಬ್ಬಿಣಾಂಶದ ಮಾತ್ರೆಯನ್ನು ನೀಡಿ, ಮಕ್ಕಳಲ್ಲಿ ರಕ್ತಹೀನತೆಯನ್ನು ತಡೆಗಟ್ಟಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

       ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ರಕ್ತಹೀನತೆಯು ಸಾರ್ವತ್ರಿಕ ಆರೋಗ್ಯ ಸಮಸ್ಯೆಯಾಗಿದ್ದು, ನಿತ್ಯ ಹಸಿರು ತರಕಾರಿ, ಬೇಳೆಕಾಳುಗಳಿಂದ ತಯಾರಿಸಿದ ಊಟ ಸೇವಿಸುವುದರ ಜೊತೆಗೆ ಹಣ್ಣು, ಮೊಸರು ಸೇವಿಸಿ ರಕ್ತ ಹೀನತೆಯಿಂದ ದೂರವಿರುವಂತೆ ತಿಳಿಸಿದರು. 


       ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಮಕ್ಕಳಲ್ಲಿ ಕಂಡು ಬರುವ ರಕ್ತ ಹೀನತೆಯನ್ನು ನಿಯಂತ್ರಿಸಲು ಕಬ್ಬಿಣಾಂಶಯುಕ್ತ ಸಮತೋಲನ ಆಹಾರ ಸೇವಿಸುವ ಮೂಲಕ ರಕ್ತಹೀನತೆಯಿಂದ ಮುಕ್ತರಾಗುವಂತೆ ಕರೆ ನೀಡಿದರು.

         ಮುಖ್ಯ ಶಿಕ್ಷಕ ಅನಿಲ ಪತಂಗಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು