ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಪ್ರಥಮ ಸ್ಥಾನ ಪಡೆದ ಪೂರ್ಣಿಮಾ ಕೆಂಭಾವಿ

 ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಪ್ರಥಮ ಸ್ಥಾನ ಪಡೆದ ಪೂರ್ಣಿಮಾ ಕೆಂಭಾವಿ


ಇಂಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಧಾರವಾಡದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಶಿರಕನಹಳ್ಳಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ವರ್ಗದ ವಿದ್ಯಾರ್ಥಿನಿ ಪೂರ್ಣಿಮಾ ಕೆಂಭಾವಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ.


       ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹಾಗೂ ಯೋಜನಾಧಿಕಾರಿ ಭಾರತಿ ಶೆಟ್ಟರ ಅವರು ವಿಜೇತ ಪೂರ್ಣಿಮಾಳಿಗೆ ಪ್ರಶಸ್ತಿ ಪತ್ರ ಹಾಗೂ 25000 ರೂ.ಗಳ ಚೆಕ್ ನೀಡಿ ಗೌರವಿಸಿದ್ದಾರೆ.

        ರೈತರಾದ ತಂದೆ ರಮೇಶ ಹಾಗೂ ತಾಯಿ ಮಲ್ಲಮ್ಮಳ ಸುಪುತ್ರಿಯಾದ ಪೂರ್ಣಿಮಾ ಕೆಂಭಾವಿ-ಈ ವಿದ್ಯಾರ್ಥಿನಿಯ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ,ಶಿಕ್ಷಣ ಸಂಯೋಜಕ ಪ್ರಕಾಶ ನಾಯಕ, ಬಿ ಆರ್ ಪಿ ಎ ಜಿ ಚೌಧರಿ, ಸಿ ಆರ್ ಪಿ ಸಂತೋಷ ನೆರಕಿ, ಮುಖ್ಯ ಶಿಕ್ಷಕ ಭೀಮು ಲಮಾಣಿ, ಎಸ್ ಡಿ ಎಂ ಸಿ ಅಧ್ಯಕ್ಷ ಶಂಕರಗೌಡ ಪಾಟೀಲ ಸೇರಿದಂತೆ ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು,ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು