ಮಾಚಿದೇವರ ತತ್ವಾದರ್ಶ ಸರ್ವಕಾಲಕ್ಕೂ ಅನ್ವಯ

 ಮಾಚಿದೇವರ ತತ್ವಾದರ್ಶ ಸರ್ವಕಾಲಕ್ಕೂ ಅನ್ವಯ

ಇಂಡಿ. 


೧೨ ನೇ ಶತಮಾನದಲ್ಲಿ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು. ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ ಜನರಲ್ಲಿ ಭಕ್ತಿ ಪ್ರಧಾನ ಚಿಂತನೆಗಳನ್ನು ಮೂಡಿಸಿದ ಮಾಚಿದೇವರ ತತ್ವಾದರ್ಶಗಳು ಸರ್ವಕಾಲಕ್ಕೂ ಅನ್ವಯ ಎಂದು ಕಂದಾಯ ಉಪವಿಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡ  ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.

ಕಲ್ಯಾಣ ಕ್ರಾಂತಿಯ ಕೊನೆಯ ಘಟ್ಟದ ಹೋರಾಟದಲ್ಲಿ ಮಾಚಿದೇವರು ತಮ್ಮ ಪರಾಕ್ರಮದಿಂದ ವಚನ ಸಾಹಿತ್ಯ ಉಳಿಸುವಲ್ಲಿ ಅನುಪಮ ಸೇವೆಗೈದಿದ್ದಾರೆ. ಮಡಿವಾಳ ಮಾಚಿದೇವರು ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ, ದಿಟ್ಟ ಗಣಾಚಾರಿ ಎಂದು ಹೇಳಿದರು.

ಸಮಾಜದ ಧುರೀಣ ಅಗಸರ ಮಾತನಾಡಿ, ಮೇಲು ಕೀಳು, ಬಡವರು,ಸಾಮಾಜಿಕ ಬಹಿಷ್ಕಾರ ಹಾಗೂ ಶೋಷಣೆಗೊಳಗಾದವರ ಬಗ್ಗೆ  ಚಿಂತಿಸಿ, ವ್ಯಕ್ತಿ-ವ್ಯಕ್ತಿಗಳ ನಡುವೆ ಇರುವ ಅಂತರವನ್ನು ಹೋಗಲಾಡಿಸಲು ಹೋರಾಡಿದ ಮಾಚಿದೇವರ ಜೀವನ ಎಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಹೇಳಿದರು.

ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ, ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ  ಬಸವರಾಜ ರಾಹೂರ, ಎಸ್.ಆರ್.ಮುಜಗೊಂಡ, ಸಂತೋಷ ಮ್ಯಾಕೇರಿ, ವೀಣಾ ಕೋಳುರಗಿ, ಬಸವರಾಜ ಬಿರಾದಾರ,  ಶ್ರೀಮತಿ ಎಸ್,ಎನ್,ಕೊಡತೆ, ಸಂಕೇತಾ ಪಾಟೀಲ,ಎಚ್.ಎಚ್.ಗುನ್ನಾಪುರ, ಬಿ.ಎ.ಗುನ್ನಾಪುರ, ಶೃತಿ ಖೇಡಗಿ,ದಾನಮ್ಮ ಕಂಬಾರ, ಬಸವರಾಜ ಅಗಸರ, ಪ್ರಕಾಶ ಅಗಸರ, ಶಿವು ಅಗಸರ, ಮಹೇಶ ಮಡಿವಾಳರ ಮತ್ತಿತರಿದ್ದರು.  



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು