ಶಿವಾಜಿಯ ಮಾತೃಪ್ರೇಮ, ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿ -ಸಂತೋಷ ಬಂಡೆ

 ಶಿವಾಜಿಯ ಮಾತೃಪ್ರೇಮ, ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿ

-ಸಂತೋಷ ಬಂಡೆ



ಇಂಡಿ: ಶಿವಾಜಿಯ ಆದರ್ಶ ವ್ಯಕ್ತಿತ್ವ, ಸಾಹಸ, ದೇಶಪ್ರೇಮದ ಜತೆಗೆ ಅವರ ಜೀವನ ಚರಿತ್ರೆಯನ್ನು ಇಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ಪರಿಚಯಿಸಿ, ಮಕ್ಕಳಲ್ಲಿ ಧೈರ್ಯ, ಸ್ಥೈರ್ಯ, ದೇಶಾಭಿಮಾನ ಮೂಡಿಸಲು ಪ್ರೇರೇಪಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ತಿಳಿಸಿದರು.

       ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಬುಧವಾರದಂದು ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.

        ಬಲಿಷ್ಠ ಭಾರತ ನಿರ್ಮಾಣದಲ್ಲಿ ಅವಿರತ ಶ್ರಮಿಸಿದವರಲ್ಲಿ ಛತ್ರಪತಿ ಶಿವಾಜಿ ಕೂಡಾ ಒಬ್ಬರು.ಸೇವೆ ಮತ್ತು ಹೋರಾಟದ ಮೂಲಕ ಎಲ್ಲರ ಮನಗೆದ್ದ ಶಿವಾಜಿ ಮಹಾರಾಜರು ಸದ್ಗುಣಗಳ ಸಾಕಾರಮೂರ್ತಿ ಆಗಿದ್ದರು. ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಿದ್ದ ಶಿವಾಜಿಯ ಮಾತೃಪ್ರೇಮ, ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿಯಾಗಿದೆ.


       ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ದೇಶದ ಎಲ್ಲ ಧರ್ಮಗಳನ್ನು ಗೌರವಾಧಾರಗಳಿಂದ ಕಾಣುತ್ತಿದ್ದ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ದಕ್ಷ ಆಡಳಿತ ಎಲ್ಲರಿಗೂ ಪ್ರೇರಣೆ. ಭಾರತದ ಸಂಸ್ಕೃತಿ, ಪರಂಪರೆಗೆ ಧಕ್ಕೆಯುಂಟಾದಾಗ ಅದನ್ನು ರಕ್ಷಿಸಿದ ಕೀರ್ತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

      ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು