ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

 ಇಂಡಿ. ಪಟ್ಟಣದ  ಬಿ.ಎಲ್.ಈ  ಅಸೋಸಿಯೇಶನ ಇಂಡಿ ವತಿಯಿಂದ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ  ಉರ್ದು ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ  ಪ್ರಥಮ ದ್ವಿತಿಯ ತೃತೀಯ ಸ್ಥಾನ ಪಡೆದ  ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. 


ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನ ಗಳಿಸಿದ  ಶಮ್ಸ್  ಪ್ರೌಢ ಶಾಲೆ ಇಂಡಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ.ಎಲ್‌.ಈ ಅಸೋಸಿಯೇಶನ ಉಪಾಧ್ಯಕ್ಷರಾದ ಹಸನ ಮುಜಾವರ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾಗಿ ಧರ್ಮಗುರು ಮೌಲಾನಾ ಜಿಯಾವುಲ್ ಹಕ್ ಉಮರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿದ್ಯಾಭ್ಯಾಸವೆಂದರೆ ಬದುಕಿಗೆ ಬೆಳಕು ತರುವ ಶಕ್ತಿ. ನಮ್ಮ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿರುವುದು ಹೆಮ್ಮೆಗಾಯಕ. ಇವರೆಲ್ಲರ ಸಾಧನೆ ಇತರರಿಗೂ ಪ್ರೇರಣೆ ನೀಡಲಿ.  ಈ ಸನ್ಮಾನ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಹೊಸ ಉತ್ಸಾಹ ತುಂಬಿದಂತಾಯಿತು. ಬಿಎಲ್‌ಇ ಅಸೋಸಿಯೇಶನ ವತಿಯಿಂದ ಹಮ್ಮಿಕೊಂಡ ಈ ಕಾರ್ಯಕ್ರಮ  ಸಾಮಾಜಿಕ ಜವಾಬ್ದಾರಿಯ ನಿಜವಾದ ಪ್ರತಿರೂಪವಾಗಿದೆ ಎಂದು ಹೇಳಿದರು.


ಮುಫ್ತಿ ಅಬ್ದುರ್ರಹ್ಮಾನ್ ಅರಬ್ ಮಾತನಾಡಿ , ಧರ್ಮ ಮತ್ತು ಶಿಕ್ಷಣ ಇಬ್ಬರೂ ಕೈಗೊಳ್ಳಬೇಕಾದ ಮಹತ್ವಪೂರ್ಣ ವಿಷಯಗಳು. ವಿದ್ಯೆಯ ಮೂಲಕ ವ್ಯಕ್ತಿತ್ವ ವಿಕಸನವಾಗುತ್ತದೆ. ಇಂದಿನ ವಿದ್ಯಾರ್ಥಿಗಳ ಸಾಧನೆ ಭವಿಷ್ಯದಲ್ಲಿ ಸಮಾಜದ ಬೆಳವಣಿಗೆಗೆ ಬುನಾದಿಯಾಗುತ್ತದೆ  ಎಂದು ಹೇಳಿದರು

 ನಿವೃತ್ತ ಪ್ರಾಂಶುಪಾಲ ಅಂಜುಮನ್ ಉರ್ದೂ ಟಿಟಿಐ ಕಾಲೇಜಿನ ಬಾಬು ಸಾಬ್ ಸೌದಾಗರ್ ಮಾತನಾಡಿ  ಇಂದಿನ ವಿದ್ಯಾರ್ಥಿಗಳೇ ನಾಳೆಯ ಪ್ರಜಾಪ್ರಭುತ್ವದ ಆಧಾರ. ಅವರಿಗೆ ಉತ್ತಮ ಶಿಕ್ಷಣ, ಮಾರ್ಗದರ್ಶನ ದೊರೆತರೆ ಸಮಾಜವೇ ಉಜ್ವಲವಾಗುತ್ತದೆ. ಕಾರ್ಯಕ್ರಮವು ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುವಂತಾಗಿತ್ತು. ಇಂತಹ ಸನ್ಮಾನ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿ ನಿಲ್ಲುತ್ತವೆ.


ಬಿ.ಎಲ್.ಈ ಸಂಸ್ಥೆಯ ಉಪಾಧ್ಯಕ್ಷ ಹಸನ ಮುಜಾವಾರ  ಮಾತನಾಡುತ್ತಾ ಹೇಳಿದರು ಇದು ನಮ್ಮ ಮಕ್ಕಳ ಸಾಧನೆಯ ಯಶಸ್ಸಾಗಿದೆ. ಅವರ ಈ ತಪಸ್ಸು, ಪರಿಶ್ರಮ ಮತ್ತು ಧೈರ್ಯ ಇತರ ವಿದ್ಯಾರ್ಥಿಗಳಿಗೆ ದಿಕ್ಕು ತೋರಿಸಬೇಕು. ಶಿಕ್ಷಣವೇ ಬೆಳಕಿನ ದಾರಿ; ಈ ದಾರಿಯಲ್ಲಿ ನಾವು ಎಲ್ಲರೂ ನಡೆಯಬೇಕು. ಈ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸುತ್ತಾ, ಅವರಿಗೆ ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಎಂದರು

ಈ ಸಂದರ್ಭದಲ್ಲಿ ಹಸನ್ ಮುಜಾವರ್, ಪುರಸಭೆ ಉಪಾಧ್ಯಕ್ಷ ಜಹಾಂಗೀರ್ ಸೌದಾಗರ್, ಅಬ್ದುಲ್ ರಶೀದ್ ಮುಗಲಿ, ನಿವೃತ್ತ ಶಿಕ್ಷಕ ಫಾರೂಕ್ ತುರ್ಕಿ, ಅಬ್ದುಲ್ ರಶೀದ್ ಅರಬ್, ಅಬ್ಬು ಮಲ್ಲಾ, ರಫೀಕ್ ಜಾಂಬಗಿ, ಶಕೀಲ್ಅಹಮದ್ ಅರಬ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು