ಪೋಸ್ಟ್‌ಗಳು

ಜೂನ್, 2025 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ದಶಕಗಳ ಕನಸು ನನಸು: ತಗಡೂರು

ಇಮೇಜ್
 ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ದಶಕಗಳ ಕನಸು ನನಸು: ತಗಡೂರು ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ.   ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ ಲವಾಗಿ ಈ ಯೋಜನೆ ಜಾರಿಗೆ ಬರುತ್ತಿದೆ. ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಬಸ್ ಪಾಸ್ ನೀಡಬೇಕೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳ ಮುಂದೆ ಹಕ್ಕೋತ್ತಾಯ ಮಂಡಿಸಿದ್ದರು. ವೇದಿಕೆಯಲ್ಲಿಯೇ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಿಎಂ ಮನವೊಲಿಕೆ ಮಾಡಿದರು. ಕೂಡಲೇ ಅದಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಉಚಿತ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದಲ್ಲದೆ, ಬಜೆಟ್‌ನಲ್ಲಿಯೂ ೋಷಣೆ ಮಾಡಿದ್ದು, ಮರೆಯಲಾಗದ ಕ್ಷಣವಾಗಿತ್ತು.   ಬಸ್ ಪಾಸ್ ಯ...

ಅಂಜುಮನ್ ಕಮಿಟಿಯ ಕಾಂಪ್ಲೆಕ್ಸಿನ ಮೇಲೆ ನಡೆಯುತ್ತಿರುವ ಅನಧಿಕೃತವಾಗಿ ಕಟ್ಟಡ ಕಾರ್ಯವನ್ನು ಕೂಡಲೇ ನಿಲ್ಲಿಸಲು ಆಗ್ರಹ

ಇಮೇಜ್
 ಇಂಡಿ: ಪಟ್ಟಣದ ಮಹಾವೀರ ವೃತ್ತದಲ್ಲಿ ಇರುವ   ಅಂಜುಮನ್ ಕಮಿಟಿಯ ಕಾಂಪ್ಲೆಕ್ಸಿನ ಮೇಲೆ  ನಡೆಯುತ್ತಿರುವ  ಅನಧಿಕೃತವಾಗಿ  ಕಟ್ಟಡ ಕಾರ್ಯವನ್ನು ಕೂಡಲೇ ನಿಲ್ಲಿಸಲು ಇಂಡಿ ತಹಶೀಲ್ದಾರ್ ಮತ್ತು ಪುರಸಭೆ ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಆದರೂ ಕೂಡ ಅಂಜುಮನ್ ಕಮಿಟಿಯು ಈ ನೋಟಿಸ್‌ಗಳನ್ನೂ ಲೆಕ್ಕಿಸದೇ ತಾವು ನಿರ್ಧರಿಸಿದಂತೆ ಕೆಲಸ ಮುಂದುವರೆಸುತ್ತಿದೆ ಕೂಡಲೆ ಇಂಡಿ ಪುರಸಭೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳಿಯ ನಿವಾಸಿ  ಸಗೀರ ಮುಲ್ಲಾ ಆಗ್ರಹಿಸಿದರು. .  ಈಗಿರುವ ಅಂಜುಮನ್ ಕಮಿಟಿಯ  ಅವಧಿ ಎರಡು ತಿಂಗಳು ಹಿಂದೆ ಮುಕ್ತಾಯವಾಗಿದೆ. ಆದರೆ ಇಲ್ಲೆಯವರೆಗೂ ನೂತನ ಸಮಿತಿಯ ಚುನಾವಣೆ ಜರುಗದಿರುವುದರಿಂದ ಈ ಸಮಿತಿಯು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಅರ್ಹವಲ್ಲ. ಇತ್ತ, ಈ ಸಮಿತಿಯು ತಮ್ಮ ಅವಧಿ ಮುಗಿದರೂ, ಕಾನೂನು ಮೀರಿ ಕೃತ್ಯಗಳಲ್ಲಿ ತೊಡಗಿಕೊಂಡಿದ್ದು ಅಂಜುಮನ್ ಕಮಿಟಿಯ ಆಸ್ತಿಗೆ ನಷ್ಟವನ್ನುಂಟು ಮಾಡುತ್ತಿದೆ. ಅಂಜುಮನ್ ಕಮಿಟಿಯ ಸದಸ್ಯರು ಪಟ್ಟಣದ ಕೆಲ ಜನರಿಂದ ಹಣವನ್ನು ಪಡೆದು ಪುರಸಭೆ  ಅನುಮತಿ ಇಲ್ಲದೆ ಅನಧಿಕೃತ ರೀತಿಯಲ್ಲಿ ಅಂಗಡಿಗಳನ್ನು ನಿರ್ಮಾಣ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದರು.  ಅಂಜುಮನ್ ಸಮಿತಿಯು ತಕ್ಷಣವೇ ಈ ಅನಧಿಕೃತವಾಗಿ ನಿರ್ಮಿಸುತ್ತಿದ್ದ  ನಿರ್ಮಾಣವನ್ನು ನಿಲ್ಲಿಸದಿದ್ದರೆ, ಸರ್ಕಾರದ ನಿಯಮಾನುಸಾರ ಕಾನೂನು ಕ್ರಮ...

ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

ಇಮೇಜ್
ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ   ವಿಜಯಪುರ 27. ಕ್ಯಾನ್ಸರ್ ನಿಂದ ಬಳಲುತ್ತಿರುವವರಿಗೆ ಅತ್ಯಾಧುನಿಕ ತಂತ್ರಜ್ಞಾನ ಚಿಕಿತ್ಸೆ ಕಲ್ಪಿಸಲು ಬಿ.ಎಲ್.ಡಿ.ಇ ಆಸ್ಪತ್ರೆ ಆವರಣದಲ್ಲಿ ನೂತನ ಕ್ಯಾನ್ಸರ್ ಘಟಕಕ್ಕೆ ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ  ಅವರು ಇಂದು ಭೂಮಿ ಪೂಜೆ ನೆರವೇರಿಸಿದರು. ಈ ಭಾಗದ ಜನ ಕ್ಯಾನ್ಸರ್ ನಿಂದ ತುತ್ತಾಗಿ ಸೂಕ್ತ ಚಿಕಿತ್ಸೆಗಾಗಿ ಬೆಂಗಳೂರಿಗೆ ಮತ್ತು ಹುಬ್ಬಳ್ಳಿಗೆ ಹೋಗಬೇಕಾಗಿದೆ. ಇದೀಗ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಈ ಸೌಲಭ್ಯ ಒದಗಿಸುವ ದೃಷ್ಟಿಯಿಂದ 100 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈ ಆಸ್ಪತ್ರೆಗೆ ಖ್ಯಾತ ಕ್ಯಾನ್ಸರ್ ತಜ್ಞ ಡಾ. ಶೇಖರ ಪಾಟೀಲ ಅವರು ಮಾರ್ಗದರ್ಶನ ಮಾಡಲಿದ್ದಾರೆ. ನೂತನ ಕ್ಯಾನ್ಸರ್ ಘಟಕದಲ್ಲಿ ಕಾಂಪ್ರ್ಹೆನ್ಸಿವ್ ಕ್ಯಾನ್ಸರ್ ಬ್ಲಾಕ್, ರೇಡಿಯೋಥೇರಪಿ, ಪಿಇಟಿ ಸ್ಕ್ಯಾನ್ (ಪಾಸಿಟ್ರಾನ್ ಎಮಿಷನ್ ಟೊಮೊಗ್ರಫಿ), ನ್ಯೂಕ್ಲೀಯರ್ ಮೆಡಿಸಿನ್, ರೋಗಿಗಳಿಗೆ ವಸತಿ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ (ಓಂಕೊ ಸರ್ಜರಿ), ಕ್ಯಾನ್ಸರ್ ಮೆಡಿಸಿನ್ ಒಳಗೊಂಡಿದ್ದು, ಶೀಘ್ರದಲ್ಲಿಯೇ ಸೌಲಭ್ಯ ದೊರೆಯಲಿದೆ. ಭೂಮಿ ಪೂಜೆ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ.ಅರುಣ ಇನಾಮದಾರ, ...

ಸ್ವ ಪಕ್ಷದ ಸದಸ್ಯರೇ ಅಧ್ಯಕ್ಷರಿಗೆ ತರಾಟೆಗೆ ತೆಗೆದುಕೊಂಡು ನಿಮ್ಮ ಕೈಲಾಗದಿದ್ದರೆ ಖುರ್ಚಿಯಿಂದ ಇಳಿಯಿರಿ ಎಂದು ಆಕ್ರೋಶ ಹೊರಹಾಕಿದ ಘಟನೆ ಪಟ್ಟಣದ ಪುರಸಭೆಯಲ್ಲಿ ನಡೆಯಿತು.

ಇಮೇಜ್
 ಇಂಡಿ: ಸ್ವ ಪಕ್ಷದ ಸದಸ್ಯರೇ ಅಧ್ಯಕ್ಷರಿಗೆ ತರಾಟೆಗೆ ತೆಗೆದುಕೊಂಡು ನಿಮ್ಮ ಕೈಲಾಗದಿದ್ದರೆ ಖುರ್ಚಿಯಿಂದ ಇಳಿಯಿರಿ ಎಂದು ಆಕ್ರೋಶ ಹೊರಹಾಕಿದ ಘಟನೆ  ಪಟ್ಟಣದ ಪುರಸಭೆಯಲ್ಲಿ ನಡೆಯಿತು.  ಗುರುವಾರ ಪುರಸಭೆಯ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಬಹುತೇಕ ಸದಸ್ಯರು ಕಳೆದ ಆರು ತಿಂಗಳಿಗಿನಿಂದ ಪಟ್ಟಣದಲ್ಲಿ ಪುರಸಭೆಯಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿಲ್ಲ, ಯಾವೊಬ್ಬ ಸದಸ್ಯರಿಗೂ ಅಧ್ಯಕ್ಷರು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿಲ್ಲ ಎಂದು ಸ್ವಪಕ್ಷದ ಹಾಗೂ ವಿರೋಧ ಪಕ್ಷದ ಸದಸ್ಯರು ಅಧ್ಯಕ್ಷ ಲಿಂಬಾಜಿ ರಾಠೋಡ ವಿರುದ್ಧ ಅಸಮಾಧಾನ ಹೊರಹಾಕಿದರು. ಸದಸ್ಯರಾದ ಅನೀಲಗೌಡ ಬಿರಾದಾರ, ಉಮೇಶ ದೇಗಿನಾಳ ಮಾತನಾಡಿ, ವಾರ್ಡ್ ಗಳಲ್ಲಿ ವಿದ್ಯುತ್ ಕಂಬಗಳಿಗೆ ನಾಲ್ಕು ತಿಂಗಳಿನಿಂದ ವಿದ್ಯುತ್ ಬಲ್ಬ್ ಅಳವಡಿಸಿಲ್ಲ, ಬಲ್ಬ ಹಾಕದಷ್ಟೂ ಅನುದಾನವಿಲ್ಲವೇ ಎಂದು ಮುಖ್ಯಾಧಿಕಾರಿ, ಅಧ್ಯಕ್ಷರ ವಿರುಧ್ಧ ಗುಡುಗಿದರು.ಟೆಂಡರ್ ದಾರರಿಗೆ ಹೇಳಿದರೆ ಮುಖ್ಯಾಧಿಕಾರಿಗಳಿಗೆ ಹೇಳಿ ಎನ್ನುತ್ತಾರೆ. ಸದಸ್ಯರು ಎಂದರೆ ಕಿಮ್ಮತ್ತು ಇರದಂತಾಗಿದೆ, ಪಟ್ಟಣದ ೧೩ ಮತ್ತು ೧೯ನೇ ವಾರ್ಡಗಳು ಅತಿ ದೊಡ್ಡ ವಾರ್ಡುಗಳಾಗಿವೆ. ಆ ವಾರ್ಡಿನಲ್ಲಿ ರಸ್ತೆಗಳೆಲ್ಲ ಹದಗೆಟ್ಟಿವೆ, ಒಂದು ವಾರ್ಡಿಗೆ ರಸ್ತೆಗಳಲ್ಲಿನ ಗುಂಡಿ ತುಂಬಲು ಕೇವಲ ಮೂರು ಲಾರಿ ಗರಸು ನೀಡಿದರೆ ಹೇಗೆ? ದೊಡ್ಡವಾರ್ಡಿಗೆ ಹೆಚ್ಚಿನ ಗರಸು ನೀಡಬೇಕು, ರಸ್ತೆ ಹದಗೆಟ್ಟಿ...

ತಿಡಗುಂದಿಯಲ್ಲಿನ ತೋಟಗಾರಿಕೆ ಸಂಶೋಧನಾ ಕೇಂದ್ರವನ್ನು ಮುಖ್ಯ ತೋಟಗಾರಿಕೆ ಸಂಶೋಧನಾ ಕೇಂದ್ರವಾಗಿ ಘೋಷಿಸುವಂತೆ ಡಾ. ಎಂ. ಬಿ. ಪಟ್ಟಣಶೆಟ್ಟಿ ಆಗ್ರಹ

ಇಮೇಜ್
ತಿಡಗುಂದಿಯಲ್ಲಿನ ತೋಟಗಾರಿಕೆ ಸಂಶೋಧನಾ ಕೇಂದ್ರವನ್ನು ಮುಖ್ಯ ತೋಟಗಾರಿಕೆ ಸಂಶೋಧನಾ ಕೇಂದ್ರವಾಗಿ ಘೋಷಿಸುವಂತೆ ಡಾ. ಎಂ. ಬಿ. ಪಟ್ಟಣಶೆಟ್ಟಿ ಆಗ್ರಹ     ವಿಜಯಪುರ ಜಿಲ್ಲೆಯು ದ್ರಾಕ್ಷಿ, ದಾಳಿಂಬೆ, ಲಿಂಬೆ, ಸೀತಾಫಲ, ಪೇರಲ ಮುಂತಾದ ಉಷ್ಣ ವಲಯದ ಹಣ್ಣಿನ ಬೆಳೆಗಳಿಗೆ ಇಡೀ ಭಾರತ ದೇಶದಲ್ಲಿಯೇ ಹೆಸರು ವಾಸಿಯಾಗಿದ್ದು, ಸುಮಾರು ೩೦ ಸಾವಿರ ಹೇ. ಪ್ರದೇಶದಲ್ಲಿ ದ್ರಾಕ್ಷಿ, ೭ ಸಾವಿರ ಹೇ. ಪ್ರದೇಶದಲ್ಲಿ ಲಿಂಬೆ, ೧೦ ಸಾವಿರ ಹೇ. ಪ್ರದೇಶದಲ್ಲಿ ದಾಳಿಂಬೆ ಮತ್ತು ಇತರೆ ಉಷ್ಣ ವಲಯದ ಹಣ್ಣಿನ ಬೆಳೆಗಳನ್ನು ವ್ಯಾಪಕವಾಗಿ ಬೆಳೆಯಲಾಗುತ್ತಿದೆಯಲ್ಲದೇ, ತರಕಾರಿ, ಹೂ, ಮತ್ತು ಸಾಂಬಾರ ಬೆಳೆಗಳಾದ ಮೆನಸಿನಕಾಯಿ, ಅಜಿವಾನ, ಉಳ್ಳಾಗಡ್ಡೆ ಬೆಳೆಗಳನ್ನೂ ಸಹ ಗಣನೀಯ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಈ ಎಲ್ಲ ತೋಗಾರಿಕೆ ಬೆಳೆಗಳಿಂದ ವಾರ್ಷಿಕ ಸುಮಾರು ೧೦ ಸಾವಿರ ಕೋಟಿ ರೂಪಾಯಿಗಳ ವಹಿವಾಟು ನಡೆಯುತ್ತಿದ್ದು, ರೈತರ ಮತ್ತು ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಯಲ್ಲಿ ಮತ್ತು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತೋಟಗಾರಿಕೆ ಬೆಳೆಗಳು ಪ್ರಮುಖ ಪಾತ್ರವಹಿಸಿವೆ.      ಈ ವಿಷಯಕ್ಕೆ ಸಂಭAಧೀಸಿದAತೆ  ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದ ಅಧೀನದಲ್ಲಿರುವ, ತಿಡಗುಂದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ತೋಟಗಾರಿಕೆ ಮತ್ತು ವಿಸ್ತರಣಾ ಕೇಂದ್ರ’, ತೋಟಗಾರಿಕೆ ರೈತರಿಗೆ ಅವಶ್ಯವಿರುವ ತಂತ್ರಜ್ಞಾನ ಮತ್ತು ಮಾಹಿತಿ ಒ...

ಹೆಣ್ಣು–ಗಂಡು ಸಹಜೀವಿಗಳಾಗಿ, ಪರಸ್ಪರ ಪೂರಕವಾಗಿ ಬದುಕಿದಾಗ ಮಾತ್ರ ಸಮತೋಲನದ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.

ಇಮೇಜ್
 ವಿಜಯಪುರ: ಸ್ತಿçÃವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥಮಾಡಿಕೊಳ್ಳುವುದು ಈಗಿನ ಕಾಲದಲ್ಲಿ ಅಗತ್ಯವಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ  ಆಯೋಜಿಸಿದ್ದ ‘ಲಿಂಗತ್ವ ಗ್ರಹಿಕೆ ವಿವಿಧ ಆಯಾಮಗಳಲ್ಲಿʼ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಣ್ಣು–ಗಂಡು ಸಹಜೀವಿಗಳಾಗಿ, ಪರಸ್ಪರ ಪೂರಕವಾಗಿ ಬದುಕಿದಾಗ ಮಾತ್ರ ಸಮತೋಲನದ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸ್ತಿçÃವಾದವು ಮಹಿಳೆಯರನ್ನು ಸೃಜನಶೀಲರಾಗಿರಲು ಪ್ರೇರೇಪಿಸುವುದಲ್ಲದೆ, ನಮ್ಮೊಳಗಿನ ಸಮಾನತೆಯ ಅರಿವನ್ನು ಎಚ್ಚರಿಸುತ್ತದೆ. ಇದು ಹಕ್ಕುಗಳಿಗಾಗಿ ಹೋರಾಟವಲ್ಲ, ಬದಲಾಗಿ ಮಾನವೀಯ ಮೌಲ್ಯಗಳ ಪ್ರತಿಪಾದನೆ ಎಂದರು.  ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಸಮಾಜದಲ್ಲಿ ಯಾರು ಶ್ರೇಷ್ಠರು ಅಥವಾ ಕನಿಷ್ಠರು ಎಂಬ ಭಾವನೆಗೆ ಸ್ಥಳವಿಲ್ಲ, ಪ್ರತಿಯೊಬ್ಬರೂ ತಮ್ಮದೇ ಆದ ಶಕ್ತಿ ಮತ್ತು ಸಾಮರ್ಥ್ಯ ಹೊಂದಿದ್ದಾರೆ. ಮಹಿಳೆ ಮತ್ತು ಪುರುಷರು ಸಮಾನವಾಗಿ ಬೆಳೆದುಬರಬೇಕಾದ ಕಾಲ ಇದು. ಇಂದಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಹಿಳಾ ಅಧ್ಯಯನ ಶಿಸ್ತು ಕೇವಲ ಅಧ್ಯಯನವಲ್ಲ, ಅದು ಸಮಾನತೆ, ಸಬಲೀಕರಣ ...

ಯುವಕರು ಯೋಗ ಆಟೋಟ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು -ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ.

ಇಮೇಜ್
 ಯೋಗೋತ್ಸವ-2025ರ ಅಂಗವಾಗಿ ರಾಜ್ಯ ಮಟ್ಟದ ಚಿಂತನಾಗೋಷ್ಠಿ-ಯೋಗ ಪ್ರದರ್ಶನಕ್ಕೆ ಚಾಲನೆ ಯುವಕರು ಯೋಗ ಆಟೋಟ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು -ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ.   ದೈನಂದಿನ ಒತ್ತಡದ ಬದುಕಿನ ಮಧ್ಯೆಯೇ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಲು, ಯೋಗ, ಆಟೋಟಗಳು, ಓಟ, ನಡಿಗೆ, ನೃತ್ಯ ಸೇರಿದಂತೆ ವಿವಿಧ ಸೃಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಯಾಶೀಲತೆ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಹಯೋಗದಲ್ಲಿ ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾದ ಯೋಗೋತ್ಸವ-2025ರ ಅಂಗವಾಗಿ ರಾಜ್ಯ ಮಟ್ಟದ ಚಿಂತನಾಗೋಷ್ಠಿ ಹಾಗೂ ಯೋಗ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತದ ಸಂಸ್ಕøತಿ ಹಾಗೂ ಪರಂಪರೆಯಲ್ಲಿ ಯೋಗಕ್ಕೆ ತನ್ನದೇಯಾದ ಮಹತ್ವವಿದೆ. ಇಡೀ ವಿಶ್ವವೇ ಇಂದು  ಯೋಗ ದಿನವನ್ನು ಆಚರಿಸುತ್ತದೆ. ಅಬಾಲವೃದ್ಧರಾದಿಯಾಗಿ ಯೋಗ ಪ್ರತಿನಿತ್ಯ ಜೀವನದ ಭಾಗವಾಗಿಸಿಕೊಂಡು ಸದೃಢ ಆರೋಗ್ಯ ಹೊಂದಬೇಕು.   ಯೋಗದಿಂದ ಮನಸ್ಸು ಮತ್ತು ದೈಹಿಕ ಸದೃಢತೆ ಹೊಂದುವುದರ ಜೊತೆಗೆ  ಉತ್ತಮ ಆರೋಗ್ಯವನ್ನು ಪಡೆಯಬಹುದು. ದೇಹದ ಆರೋಗ...

ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಇಮೇಜ್
 ಆಲಮೇಲ : ಭೀಮಾತೀರದಲ್ಲಿ ಯುವಕನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾಗರಹಳ್ಳಿ ರಸ್ತೆಯ ಜಮೀನಿನಲ್ಲಿ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಗಿಡಾದ ಯುವಕ ಫಾರುಕ ಲಾಳಸಂಗಿ 24 ವಯಸ್ಸು ಎಂದು ಗುರುತಿಸಲಾಗಿದ್ದು, ಕೊಲೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ ‌ ಸ್ಥಳಕ್ಕೆ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲಮೇಲ ಪೋಲಿಸ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಶರೀರ ಮನಸ್ಸು ಆತ್ಮ ಪರಿಶುದ್ಧಗೊಳ್ಳಬೇಕಾದರೆ ಯೋಗ ಮಾಡಬೇಕು ಯೋಗವು ಮನುಷ್ಯನ ಮಾನಸಿಕ ಆರೋಗ್ಯ ಸದೃಢ ಮಾಡುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀಮತಿ ಅನುರಾಧ ವಸ್ತ್ರದ

ಇಮೇಜ್
  ಇಂಡಿ. ಬರದ ನಾಡಿನಲ್ಲಿ ಬಡವರ ವಿದ್ಯಾಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ಶ್ರೀ ಭಾಗ್ಯವಂತಿ ವಿದ್ಯಾ ವರ್ಧಕ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ  ಹಾಗೂ ಕಾನೂನು ಅರಿವು ಕಾರ್ಯಕ್ರಮವು ವಿಜಯವಾಣಿ ಕನ್ನಡ ದಿನಪತ್ರಿಕೆ ಮತ್ತು ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘಗ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಇಂಡಿ ಇವರ ಸಹಯೋಗದೊಂದಿಗೆ  ಅತ್ಯಂತ ಸಂಭ್ರಮದಿಂದ ಜರುಗಿತು. ಈ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ  ಆಗಮಿಸಿರುವ ಶ್ರೀಮತಿ ಅನುರಾಧ ವಸ್ತ್ರದ ಕಂದಾಯ  ಉಪವಿಭಾಗ ಅಧಿಕಾರಿಗಳು  ಹಾಗೂ ಉಪ ವಿಭಾಗಿಯ ದಂಡಾಧಿಕಾರಿಗಳು ಇಂಡಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶರೀರ ಮನಸ್ಸು ಆತ್ಮ ಪರಿಶುದ್ಧಗೊಳ್ಳಬೇಕಾದರೆ ಯೋಗ ಮಾಡಬೇಕು ಯೋಗವು ಮನುಷ್ಯನ ಮಾನಸಿಕ ಆರೋಗ್ಯ ಸದೃಢ ಮಾಡುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಫೋಟೋ ಪೂಜೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಶ್ರೀ ಕೋಟೆಪ್ಪ ಕಾಂಬಳೆ ಹಿರಿಯ ದಿವಾನಿ ನ್ಯಾಯಾಧೀಶರು ಇಂಡಿ ಇವರು ನಮ್ಮ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕಾದರೆ ಯೋಗವು ತುಂಬಾ ಅತ್ಯವಶ್ಯಕವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ  ಶ್ರೀ ಸಿ ಎಸ್ ದಶವಂತ ಪ್ರಾಚಾರ್ಯರು  ಶ್ರೀ ಭಾಗ್ಯವಂತಿ ಪದವಿ ಪೂರ್ವ ಕಾಲೇಜು ಚವಡಿಹಾಳ ಇ...

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಪಟ್ಟಣ ಪಂಚಾಯತಿಯ ಅಧ್ಯಕ್ಷ ಇಂದು ರಾಜೀನಾಮೆ ಪತ್ರ ನೀಡಿದರು.

ಇಮೇಜ್
 * ಪ.ಪಂ ಅಧ್ಯಕ್ಷ   ಡಾ.ಎಂ  ಡಿ ಮೇತ್ರಿ ರಾಜೀನಾಮೆ * ಮುಂದಿನ ಅಧ್ಯಕ್ಷ ಯಾರಿಗೆ..?    ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಪಟ್ಟಣ ಪಂಚಾಯತಿಯ ಅಧ್ಯಕ್ಷ ಇಂದು ರಾಜೀನಾಮೆ ಪತ್ರ ನೀಡಿದರು.  ಕಳೆದ ಮೂರು ತಿಂಗಳ ಹಿಂದಅಷ್ಟೇ ಅಧ್ಯಕ್ಷ ಗದ್ದುಗೆ ಹಿಡಿದಿದ್ದ ಡಾ. ಎಂ ಡಿ ಮೇತ್ರಿ ಇಂದು ಅವರ ಅಧ್ಯಕ್ಷ ಸ್ಥಾನಕ್ಕೆ  ಮಾನ್ಯ ಉಪ ವಿಭಾಗ ಅಧಿಕಾರಿಗಳು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳು ವಿಜಯಪುರ ಇವರಿಗೆ ತಮ್ಮ ರಾಜೀನಾಮೆ ಪತ್ರ  ಸಲ್ಲಿಸಲಾಯಿತು.  ಮನಗೂಳಿ ಪಟ್ಟಣದ 6 ನೇ ವಾರ್ಡಿನ ಬಿಜೆಪಿ ಪಕ್ಷದಿಂದ ಜಯಶಾಲಿಯಾಗಿ ಮುಂದೆ ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದು ಮನಗೂಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ ಗಾದೆಗೆ ಕುಳಿತುಕೊಂಡು ಮುಂದೆ ಕೇವಲ ಮೂರೇ ಮೂರು ತಿಂಗಳಲ್ಲಿ ಡಾ ಎಂ ಡಿ ಮೇತ್ರಿ ಇಂದು ಅವರ ಅಧಿಕಾರಕ್ಕೆ ರಾಜೀನಾಮೆ ನೀಡಿದರು .  ಮುಂದಿನ ಮನಗೂಳಿ ಪಟ್ಟಣ ಪಂಚಾಯತಿಯ ಅಧ್ಯಕ್ಷ ಕುರ್ಚಿಗೆ ಯಾರ ಕಣ್ಣು, ಮನಗೂಳಿಯ 16 ವಾರ್ಡುಗಳ ಸದಸ್ಯರಲ್ಲಿ ಯಾರು ಮುಂದಿನ ಅಧ್ಯಕ್ಷರು ಎಂದು ಮನಗೂಳಿ ಪಟ್ಟಣದ ಸಾರ್ವಜನಿಕರು ಚಿಂತೆಗೀಡಾಗಿದ್ದಾರೆ, ಬರುವ ಅಧ್ಯಕ್ಷರು ಅವರು ಮೂರೇ ತಿಂಗಳ ಅಧಿಕಾರ ಅಥವಾ ಏನು ಯತ್ತ ಅಂತ ಜನ ಕಾದು ಕುಳಿತಿದ್ದಾರೆ ಮುಂದಿನ ದಿನಗಳಲ್ಲಿ ಏನಾಗುತ್ತೆ ಅಂತ ಕಾದು ನೋಡೋಣ. .. .ಬರುವ ಅಧ್ಯಕ್ಷರಿಗೆ ವೆಲ್ ಕಮ್ ಮಲ್ಲಿಕಾರ್ಜುನ ಮ ಬುರ್ಲಿ

ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದಲ್ಲಿ ಪ್ರಸಕ್ತ ವರ್ಷ ಯೋಗ ದಿನಾಚರಣೆಯನ್ನು ಸಂಘಟಿಸಲಾಗುತ್ತಿದ್ದು,

ಇಮೇಜ್
ವಿಜಯಪುರ - ೧೧ ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಯೋಜನೆ ರೂಪಿಸಿದ್ದು, ಮೊದಲನೆಯ ಬಾರಿಗೆ ದೇಶದ ೧೮೯ ಐತಿಹಾಸಿಕ ಸ್ಮಾರಕಗಳಲ್ಲಿ  ಹಾಗೂ ಪ್ರತಿಷ್ಠಿತ ಸ್ಥಳದಲ್ಲಿ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಸಂಘಟಿಸಿದೆ. `ಒAದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದಲ್ಲಿ ಪ್ರಸಕ್ತ ವರ್ಷ ಯೋಗ ದಿನಾಚರಣೆಯನ್ನು ಸಂಘಟಿಸಲಾಗುತ್ತಿದ್ದು, ಯೋಗದಿಂದ ಆಗುವ ದೈಹಿಕ, ಮಾನಸಿಕ ಆರೋಗ್ಯದ ಪ್ರಯೋಜನಗಳನ್ನು ಉತ್ತೇಜನಗೊಳಿಸುವ ಸಂಕಲ್ಪದೊAದಿಗೆ ಯೋಗ ದಿನಾಚರಣೆ ಆಚರಿಸಲಾಗುವುದು. ಇದರ ಭಾಗವಾಗಿ ಐತಿಹಾಸಿಕ ವಿಶ್ವವಿಖ್ಯಾತ ಗೋಳಗುಮ್ಮಟದ ಹಸಿರು ಉದ್ಯಾನವನದಲ್ಲಿ ಇದೇ ದಿನಾಂಕ ೨೧ ರಂದು ನಸುಕಿನ ೫.೩೦ ಕ್ಕೆ ಯೋಗ ದಿನ ಸಂಘಟಿಸಲಾಗಿದೆ. ಕೇAದ್ರ ಸಂಸ್ಕೃತಿ ಸಚಿವಾಲಯ, ಕೇಂದ್ರ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಭಾರತ ಸರಕಾರ ಸಹಯೋಗದಲ್ಲಿ ಈ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟಿçÃಯ ಯುವ ಪ್ರಶಸ್ತಿ ಪುರಸ್ಕೃತ ಡಾ.ಜಾವೀದ ಜಮಾದಾರ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶನ ಹಾಗೂ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ನೀಡಲಿದ್ದು, ಈ ಸಂದೇಶದ ನೇರಪ್ರಸಾರವನ್ನು ಪರದೆಯ ಮೂಲಕ ಬಿತ್ತರಿಸಲಾಗುತ್ತಿದೆ. ಯೋಗ ಒಂದು ಮಹತ್ವದ ಜೀವನ ಭಾಗವಾಗಿದ್ದು, ಉತ್ತಮ ಆರೋಗ್ಯಕ್ಕೆ ವರದಾನವಾಗಿದೆ, ಈ ಅಪೂರ...

ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆÀ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಇಮೇಜ್
ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆÀ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ-ನೌಕರರು ನಿರಂತರವಾಗಿ ಶ್ರಮಿಸಿ, ಗ್ರಾಮೀಣ ಜನರಿಗೆ ಸೌಲಭ್ಯ ಒದಗಿಸಲು ಕಾರ್ಯನಿರ್ವಹಿಸುತ್ತಿದ್ದು,  ಒತ್ತಡದ ಕಾರ್ಯನಿರ್ವಹಣೆ ಮಧ್ಯದಲ್ಲಿಯೇ ತಮ್ಮ ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.  ಜಿಲ್ಲಾ ಪಂಚಾಯಿತಿ ವಿಜಯಪುರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ ಇವರ ಸಹಯೋಗದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಅಧಿಕಾರಿ, ನೌಕರರ ಮತ್ತು ಸಿಬ್ಬಂದಿಗಳಿಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಹಾಗೂ ಒತ್ತಡ ನಿರ್ವಹಣೆ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  ಕರ್ತವ್ಯದ ಸಂದರ್ಭದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಅವುಗಳಿಗೆ ಯಾವುದೇ ಒತ್ತಡಕ್ಕೊಳಗಾಗದೇ, ಸಮಾಧಾನವಾಗಿ ನಿಭಾಯಿಸಬೇಕು. ಸಾರ್ವಜನಿಕರಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತುರ್ತಾಗಿ ಒದಗಿಸುವ ಒತ್ತಡಗಳಿರುತ್ತವೆ. ಅಂತಹ ಸಂದರ್ಭಗಳಲ್ಲಿ ತಾಳ್ಮೆಯಿಂದ ನಿಭಾಯಿಸುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಬರುವ ಸಮಸ್ಯೆಗಳನ್ನು ಎದುರಿಸಲು ಮತ್ತು ಮಾನಸಿಕ ಆರೋಗ್ಯವನ್ನು ಕಾಪ...

ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ- ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿಯ ಮನೆಗಳ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ ಹಕ್ಕುತ್ತ ವಿತರಣೆಗೆ ಕ್ರಮ ವಹಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ಇಮೇಜ್
 ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-  ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿಯ   ಮನೆಗಳ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ ಹಕ್ಕುತ್ತ ವಿತರಣೆಗೆ ಕ್ರಮ ವಹಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ವಿಜಯಪುರ ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪಲೈನ್ ಸ್ಥಳಾಂತರಿಸುವ ಕಾಮಗಾರಿ, ಅರಕೇರಿ ಜಾಕವೆಲ್‌ದಿಂದ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಪರಿವೀಕ್ಷಣೆ ನಡೆಸಿದ ಅವರು, ಪೌರಕಾರ್ಮಿಕರ ಗೃಹಭಾಗ್ಯ (ಪಿ.ಕೆ.ಜಿ.ಬಿ)ಯೋಜನೆಯಡಿ ವಿಜಯಪುರ ನಗರದ ಹಂಚನಾಳ ಪಿ.ಎಚ್ ಗ್ರಾಮಕ್ಕೆ ಭೇಟಿ ನೀಡಿ,  ಈಗಾಗಲೇ ನಿರ್ಮಾಣಗೊಂಡಿರುವ ಹಾಗೂ ಹಂಚಿಕೆ ಮಾಡಲಾದ ಜಿ+೨ ಮಾದರಿಯ ೫೬ ಗುಂಪು ಮನೆಗಳಲ್ಲಿ  ವಾಸವಾಗಿರುವ ಫಲಾನುಭವಿಗಳ ಸಮಸ್ಯೆಯನ್ನು ಆಲಿಸಿದ ಅವರು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಗೆ ಕ್ರಮ ವಹಿಸುವಂತೆ ತಿಳಿಸಿದ ಅವರು, ನಿರ್ಮಾಣ ...

ಆಲಮಟ್ಟಿ ಲಾಲ್‌ಬಹಾದ್ಧೂರ ಶಾಸ್ತಿç ಜಲಾಶಯ ನೀರಿನ ಮಟ್ಟವನ್ನು ಹೆಚ್ಚಿಸಲು ಒತ್ತಾಯಿಸುವ ಹೋರಾಟ ಸಮಿತಿ ವತಿಯಿಂದ ಪತ್ರಿಕಾ ಗೋಷ್ಠಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇಮೇಜ್
 ವಿಜಯಪುರ : ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ, ಜಲಾಶಯದ ನೀರಿನ ಮಟ್ಟವನ್ನು ೫೧೯.೬೦ ರಿಂದ ೫೨೪.೨೫೬ಕ್ಕೆ ನೀರು ನಿಲ್ಲಿಸಲು ಗೇಟ್ ಅಳವಡಿಸುವುದು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟಿçÃಯ ಯೋಜನೆ ಎಂದು ಘೋಷಣೆ ಮಾಡಿ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿ ಸೋಮವಾರದಂದು ವಿಜಯಪುರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆಲಮಟ್ಟಿ ಲಾಲ್‌ಬಹಾದ್ಧೂರ ಶಾಸ್ತಿç ಜಲಾಶಯ ನೀರಿನ ಮಟ್ಟವನ್ನು ಹೆಚ್ಚಿಸಲು ಒತ್ತಾಯಿಸುವ ಹೋರಾಟ ಸಮಿತಿ ವತಿಯಿಂದ ಪತ್ರಿಕಾ ಗೋಷ್ಠಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ದಿನಾಂಕ ಜೂನ್ ೩೦ ರಂದು ಬೆಳಿಗ್ಗೆ ೧೧. ಘಂಟೆಗೆ ನಿಡಗುಂದಿ ಬಳಿ ಹಾಯ್ದು ಹೋಗಿರುವ ರಾಷ್ಟಿçÃಯ ಹೆದ್ದಾರಿ ಪಕ್ಕದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.  ಸಮಿತಿ ಮುಖಂಡರಾದ ಅರವಿಂದ ಕುಲಕರ್ಣಿ ಹಾಗೂ ಶ್ರೀವಿಜಯ ಪೂಜಾರ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಹಾರಾಷ್ಟ್ರ ಸರ್ಕಾರ ದುರುದ್ದೇಶದಿಂದ ಉತ್ತರಕರ್ನಾಟಕದ ರೈತರನ್ನು ಬಲಿ ತೆಗೆದುಕೊಳ್ಳಲು ಹೊರಟಿದೆ, ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು ೫೨೪,೨೫೬ಕ್ಕೆ ನಿಲ್ಲಿಸಿದರೆ ಮಹಾರಾಷ್ಟ್ರ, ವ್ಯಾಪ್ತಿಯ ಸಾಂಗ್ಲಿ, ಸಾತಾರ, ಮಿರಜ ಸೇರಿದಂತೆ ಕೆಲವು ಜಿಲ್ಲೆಗಳು ಆಲಮಟ್ಟಿಯ ಹಿನ್ನೀರಿನಿಂ...

ಅತಿಸಾರ ಭೇದಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಿ - ಜಿ.ಪಂ. ಸಿಇಓ ರಿಷಿ ಆನಂದ

ಇಮೇಜ್
 ಅತಿಸಾರ ಭೇದಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಿ   - ಜಿ.ಪಂ. ಸಿಇಓ ರಿಷಿ ಆನಂದ  ವಿಜಯಪುರ,  ಅತಿಸಾರ ಭೇದಿಯನ್ನು ತಡೆಯಲು ಮುಖ್ಯ ಆರೋಗ್ಯಕರವಾದ ಅಭ್ಯಾಸಗಳನ್ನು ರೂಡಿಸಿಕೊಳ್ಳುವ ಮೂಲಕ ಮಕ್ಕಳು ಆರೋಗ್ಯ ಕಾಪಾಡಿಕೊಳ್ಳಬೇಕು ಹಾಗೂ ಅತಿಸಾರ ಭೇದಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಹೇಳಿದರು. ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಜೂನ್.೧೬ ರಂದು ವಿಜಯಪುರ ನಗರದ ಸರಕಾರಿ ಮರಾಠಿ ಗಂಡು ಮಕ್ಕಳ ಶಾಲೆಯಲ್ಲಿ ತೀವ್ರತರ ಅತಿಸಾರ ಭೇದಿ ನಿಯಂತ್ರಣಾ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,  ಆರೋಗ್ಯ ಇಲಾಖೆಯ ಮೂಲಕ ಅತಿಸಾರ ಭೇದಿ ನಿಯಂತ್ರಣಾ ಪಾಕ್ಷಿಕ ಕಾರ್ಯಕ್ರಮವನ್ನು       ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು.    ಬೇಸಿಗೆ ಹಾಗೂ ಮಳೆಗಾಲದಲ್ಲಿ ಹೆಚ್ಚಾಗಿ ಅತಿಸಾರ ಭೇದಿ ರೋಗದಿಂದ ಬಳಲುವ ಮಕ್ಕಳನ್ನು ಕಾಣಬಹುದಾಗಿದೆ. ಇಂತಹ ಸಂದರ್ಭಗಳಲ್ಲಿ ಪೋಷಕರು ನಿರ್ಲಕ್ಷö್ಯ ಮಾಡಬಾರದು. ಕೂಡಲೇ ವೈದ್ಯರನ್ನು ಭೇಟಿ ಮಾಡಿ ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.  ಜಿಲ್ಲಾ ಆರೋಗ್ಯ ಮತ್ತ...

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಇಮೇಜ್
ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ ಹೇಳಿದರು.  ಅವರು ಪಟ್ಟಣದ ಗುರು ಭವನದಲ್ಲಿ  ಅಲ್ಲಾಬಕ್ಷ ವಾಲಿಕಾರ ನಿರ್ದೇಶಕರು ಜೆಒಸಿಸಿ ಬ್ಯಾಂಕ್  ಹಾಗೂ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂಡಿ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನಿವೃತ್ತಿ ಶಿಕ್ಷಕರಿಗೆ ಸನ್ಮಾನ ಹಾಗೂ ಸರಕಾರಿ ನೌಕರರ ಸಂಘದ ನಾಮ ನಿರ್ದೇಶಕ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.  ನಮ್ಮ ಶಿಕ್ಷಕರು ಇಂದು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತಿದ್ದು. ಅಲ್ಲಾಬಕ್ಷ ವಾಲಿಕಾರ ಅವರು ಪ್ರತಿವರ್ಷ ಶಿಕ್ಷಕರಿಗೆ ಟ್ಯಾಕ್ಸ್ ಫಾರ್ಮ್, ಹಾಗೂ ಶಿಕ್ಷಕರ ವೇತನದ ಮಾಹಿತಿಯನ್ನು ಮೆಸೇಜ್ ಕಳಿಸುವುದು ಸೇರಿದಂತೆ ಅವರು ಶಿಕ್ಷಕರಿಗಾಗಿ 24 ಗಂಟೆ ಶಿಕ್ಷಕರ ಸೇವೆ ಮಾಡುತಿದ್ದ.  ಇವತ್ತು ಶಿಕ್ಷಕರು ಸಾಮಾಜದಲ್ಲಿ ಜಾಗೃತ ರಾಗಿರಬೇಕು   ಒಗಟ್ಟಿಯಾಗಿದ್ದರೆ ಮಾತ್ರ ನಾವು ಯಶಸ್ಸು ಆಗಲು ಸಾಧ್ಯ. ಅಲ್ಲಾಬಕ್ಷ ವಾಲಿಕಾರ ನಮ್ಮ ಮುಂದೆ ಬೆಳೆದು ಬಂದ ವ್ಯಕ್ತಿ ಅವರು ಶಿಕ್ಷಕರ ಸಮಸ್ಯೆಗಳನ್ನು ಗಮನಿಸಿ ನಮ್ಮ ಜಿಲ್ಲೆಯ ಶಿಕ್ಷಕರಿಗೆ ಅವರು ನಾವು ಯೋಚಿಸುವುದುಕಿಂಕ ಹೆಚ್ಚು  ಸ್ಪಂದಿಸುವ ಕಾರ್ಯ ಮಾಡಿದ್ದಾರೆ. ಅವರು ಶಿಕ್ಷಕರಿಗೆ  ಅನ...

ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಇಮೇಜ್
 ಚಟಚಣ. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.  ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ದೇಶದ ನಿಜವಾದ ಭವಿಷ್ಯ ಅಡಗಿರುವುದು ವಿದ್ಯಾರ್ಥಿಗಳ ಕೈಯಲ್ಲಿ. ಅಂತಹ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ  ಎಂದು ಹೇಳಿದರು ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಗಠಾಣ ಶಾಸಕ ವಿಠಲ್  ಕಟಕಡೊಂಡ  ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದ್ದು, ನಿವೃತ್ತಿ ನಂತರವೂ ಮಕ್ಕಳಿಗೆ ಜ್ಞಾನ ಹಂಚುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು ಸರ್ಕಾರಿ ಸೇವೆಯಲ್ಲಿ 30 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವುದು ಸುಲಭದ ಮಾತಲ್ಲ. ಅವರ ಸಾಧನೆ ಹೆಚ್ಚಿದೆ. ಮುಂದೆಯೂ ಮಕ್ಕಳಿಗೆ ಮಾರ್ಗದರ್ಶನ ಮಾಡುವುದನ್ನು ಮುಂದುವರಿಸಬೇಕು. ನಿವೃತ್ತ ಜೀವನವನ್ನು ಉತ್ತಮವಾಗಿ ಕಳೆಯಬೇಕು’ ಎಂದು ಹೇಳಿದರು. ಪ್ರಸ್ತಾವಿಕ ಮಾತನಾಡಿದ ಶಿಕ್ಷಕರ ಸೋಸೈಟಿ ಅಧ್ಯಕ್ಷ ಎಸ್.ಎಸ್.ಪಾಟೀಲ  ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ...

ಜೂ.21ರಂದು ಜಿಲ್ಲೆಯಲ್ಲಿ ರಾಜ್ಯಮಟ್ಟದ ಯೋಗೋತ್ಸವ ದಿನಾಚರಣೆ -ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ

ಇಮೇಜ್
 ಜೂ.21ರಂದು ಜಿಲ್ಲೆಯಲ್ಲಿ ರಾಜ್ಯಮಟ್ಟದ ಯೋಗೋತ್ಸವ ದಿನಾಚರಣೆ  -ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ  ವಿಜಯಪುರ ಜೂನ್,12 (ಕರ್ನಾಟಕ ವಾರ್ತೆ) : ಮಕ್ಕಳ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಹಾಗೂ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯೊಂದಿಗೆ ಜೂ.21 ರಂದು ಜಿಲ್ಲೆಯಲ್ಲಿ ರಾಜ್ಯಮಟ್ಟದ ಯೋಗೋತ್ಸವ ಕಾರ್ಯಕ್ರಮ ಆಚರಿಸಲಾಗುವುದು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ತಿಳಿಸಿದರು.  ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಯೋಗೋತ್ಸವ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಪ್ರಥಮವಾಗಿ ರಾಜ್ಯಮಟ್ಟದ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕಾಗಿ 15 ಲಕ್ಷ ರೂ.ಗಳನ್ನು ಅಕಾಡೆಮಿ ವತಿಯಿಂದ ಒದಗಿಸಲಾಗಿದ್ದು, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಯೋಗದಲ್ಲಿ ರಾಷ್ಟ್ರೀಯ ಹಾಗೂ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಸನ್ಮಾನ ಹಾಗೂ ಜೂ.22 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಯೋಗದ ಕುರಿತು ಪರಿಣಿತರಿಂದ ಚಿಂತನಾಗೋಷ್ಠಿ  ಹಾಗೂ ಯೋಗ ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು,ಎಲ್ಲ...

ಬಿಜಾಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೆ ಗುಮ್ಮಟ ನಗರಿಯಲ್ಲಿ ಅದ್ದೂರಿ ಸ್ವಾಗತಕ್ಕೆ ಸಿದ್ಧತೆ - ಸತ್ಯಜಿತ್‌

ಇಮೇಜ್
ಬಿಜಾಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಗುಮ್ಮಟ ನಗರಿಯಲ್ಲಿ ಅದ್ದೂರಿ ಸ್ವಾಗತಕ್ಕೆ ಸಿದ್ಧತೆ - ಸತ್ಯಜಿತ್‌ ವಿಜಯಪುರ:  ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಳಿಕ ಮಂಜುನಾಥ ಎಚ್. ಎಸ್. ಜೂ.14 ರಂದು  ಪ್ರಥಮ ಬಾರಿಗೆ ವಿಜಯಪುರ ಜಿಲ್ಲೆಗೆ ಆಗಮಿಸುತ್ತಿದ್ದು, ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ಯಜಿತ್‌ ಎಸ್. ಪಾಟೀಲ, ಜೂ.14 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ವಿಜಯಪುರದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಜುನಾಥ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಬೈಕ್ ರ್ಯಾಲಿ ಮೂಲಕ ಕನಕದಾಸ ವೃತ್ತ, ಡಾ. ಬಿ ಆರ್ ಅಂಬೇಡ್ಕರ್ ವೃತ್ತ, ಶ್ರೀ ಬಸವೇಶ್ವರ ವೃತ್ತ, ಟಿಪ್ಪು ಸುಲ್ತಾನ್ ವೃತ್ತ,  ಮಹಾತ್ಮ ಗಾಂಧಿಜಿ ವೃತ್ತ, ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ, ಸರ್ಕಾರಿ ಜಿಲ್ಲಾ ಆಸ್ಪತ್ರೆ ಮಾರ್ಗವಾಗಿ  ಲೀ ಗ್ರಾಂಡ ಹೋಟೆಲ ತಲುಪಲಿದೆ ಎಂದು ವಿವರಿಸಿದ್ದಾರೆ. ಬಳಿಕ ಲೀ ಗ್ರ್ಯಾಂಡ  ಹೊಟೇಲ್ ನಲ್ಲಿ ಆಯೋಜಿಸಿರುವ ಪಕ್ಷದ ಸಂಘಟನೆಯ ವಿಷಯವಾಗಿ ಯುವ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸತ್ಯಜಿತ್‌ ಪಾಟೀಲ ತಿಳಿಸಿದ್ದಾರೆ. ಕಾರಣ ಸದರಿ ಸಭೆಗೆ ಜಿಲ್ಲೆಯ ಯುವ ಕಾಂಗ್ರೆಸ್ ಪಕ್ಷದ ಎಲ್ಲ ಪದಾಧಿಕಾರಿಗಳು,  ಮುಂಚೂಣಿ ಘಟಕದ ಎಲ್ಲ ಸದಸ್ಯರು ಸದರಿ  ಕಾರ್...

ಕೆ.ಆರ್.ಎಸ್ ಪಕ್ಷವು ಸೈನಿಕರು ಗುಂಡಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವುದರ ಮೂಲಕ ಪ್ರತಿಭಟಿಸಿದರು

ಇಮೇಜ್
 ವಿಜಯಪುರ : ನಗರದಲ್ಲಿ ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದಾಗಿ  ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಬಿದ್ದಿರುವ ಗುಂಡಿಗಳನ್ನು ಮಳೆಗಾಲದ ಮುನ್ಸೂಚನೆಯನ್ನು ಅರಿತು ಮುಚ್ಚುವಂತೆ ಕಾರ್ಯವನ್ನು ಮಹಾನಗರ ಪಾಲಿಕೆ ಮಾಡಬಹುದಾಗಿತ್ತು. ಆದರೆ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದಾಗಿ  ನಗರದಲ್ಲಿ ರಸ್ತೆ ಅಪಘಾತಗಳು ಸಂಖ್ಯೆ ಹೆಚ್ಚಾಗುತ್ತಿಎ. ಈಗ ಮಳೆಗಾಲದ ಸಮಯವಾಗಿದ್ದರಿಂದಾಗಿ ಗುಂಡಿಗಳು ನೀರಿನಿಂದ ತುಂಬಿಕೊಳ್ಳುತ್ತವೆ . ಗುಂಡಿಗಳ ಆಳ ಅಗಲ ಗೊತ್ತಿಲ್ಲದೆ ವಾಹನ ಸವಾರರು ಬಿದ್ದು ಕೈಕಾಲುಗಳನ್ನು ಮುರಿದುಕೊಳ್ಳುತ್ತಿದ್ದಾರೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಆಗ್ರಹಪಡಿಸಿದರು. ಮಹಾನಗರ ಪಾಲಿಕೆಯ ಅಧಿಕಾರಿಗಳು ಗುಂಡಿ ಮುಚ್ಚುವುದರ ಮೂಲಕ ನಗರದ ನಾಗರಿಕರ ಜೀವವನ್ನು ಉಳಿಸಬೇಕಾಗಿದೆ ಎಂದು ಕೆ.ಆರ್.ಎಸ್ ಪಕ್ಷವು ಸೈನಿಕರು ಗುಂಡಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವುದರ ಮೂಲಕ ಪ್ರತಿಭಟಿಸಿದರು. ಇದೆ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ವಿಕ್ರಮ ವಾಗಮೊರೆ, ದುರ್ಗಪ್ಪ ಬೂದಿಹಾಳ, ಸೀನು ಹಿಪ್ಪರಗಿ ಉಪಸ್ಥಿತರಿದ್ದರು.

ಗುಜರಾತ್‌ನ ಅಹಮದಾಬಾದ್‌ನಿಂದ ಗ್ಯಾಟ್ರಿಕ್ (ಇಂಗ್ಲೆಡ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಇಂದು ಮಧ್ಯಾಹ್ನ ಟೇಕ್ ಆಫ್ ಆದ ತಕ್ಷಣ ಪತನಗೊಂಡಿತು.

ಇಮೇಜ್
 ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಿಂದ ಗ್ಯಾಟ್ರಿಕ್ (ಇಂಗ್ಲೆಡ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಇಂದು ಮಧ್ಯಾಹ್ನ ಟೇಕ್ ಆಫ್ ಆದ ತಕ್ಷಣ ಪತನಗೊಂಡಿತು. 12 ಸಿಬ್ಬಂದಿ ಸೇರಿದಂತೆ 242 ಜನರು ಈ ವಿಮಾನದಲ್ಲಿದ್ದರು. ಈ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಇದ್ದ ಡಾಕ್ಟರ್ ಹಾಸ್ಟೆಲ್‌ನೊಳಗೆ ನುಗ್ಗಿದೆ. ಇದರಿಂದ ವಿಮಾನದಲ್ಲಿರುವ ಪ್ರಯಾಣಿಕರು ಮಾತ್ರವಲ್ಲದೆ 15 ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚಿನ ಅತಿ ದುರಂತವಾದ ವಿಮಾನ ಅಪಘಾತ ಇದಾಗಿದೆ. ಇಂದು ವಿಮಾನ ಅಪಘಾತಕ್ಕೀಡಾದಾಗ 12 ಸಿಬ್ಬಂದಿ ಸೇರಿದಂತೆ ಸುಮಾರು 242 ಜನರು ಅಹಮದಾಬಾದ್-ಲಂಡನ್ ವಿಮಾನದಲ್ಲಿದ್ದರು. ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಈ ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್ ಸಿಎಂ, ರಾಜ್ಯದ ಗೃಹ ಸಚಿವರು ಮತ್ತು ಡಿಜಿಪಿ ಅವರೊಂದಿಗೆ ಮಾತನಾಡಿದ್ದಾರೆ. ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇಂದಿನ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಪಘಾತ ಸಂಭವಿಸಿದಾಗ ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿತ್ತು.  ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್...

ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ಪಿಡುಗು ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್

ಇಮೇಜ್
 ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಯೋಜನೆ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ಪಿಡುಗು ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ    -ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿಜಯಪುರ:  ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿ, ಈ ನಿಟ್ಟಿನಲ್ಲಿ ಎಲ್ಲರೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ,ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಗುಣಮಟ್ಟದ ಆರೋಗ್ಯ, ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಇದನ್ನು ಉತ್ತಮಪಡಿಸುವುದರಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗುವುದು. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಅನಿಷ್ಟ ಪದ್ಥತಿ ಮುಕ್ತ ಜಿಲ್ಲೆಯನ್ನಾಗಿಸಲು ಹಾಗೂ ಈ ಪಿಡಗುಗಳ ನಿರ್ಮೂಲನೆಗೊಳಿಸಲು ಕಟಿಬದ್ಧ...

ಯೋಗ ಸಮಾವೇಶ ಶಿರ್ಷಿಕೆಯಡಿ 12 ದಿನಗಳ ವಿಶೇಷ ಯೋಗ ಕಾರ್ಯಕ್ರಮ ಬುಧವಾರ ಪ್ರಾರಂಭವಾಯಿತು.

ಇಮೇಜ್
ವಿಜಯಪುರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶರೀರವಿಜ್ಞಾನ ವಿಭಾಗದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರದಲ್ಲಿ ಯೋಗ ಸಂಗಮ: ಯೋಗ ಸಮಾವೇಶ ಶಿರ್ಷಿಕೆಯಡಿ 12 ದಿನಗಳ ವಿಶೇಷ ಯೋಗ ಕಾರ್ಯಕ್ರಮ ಬುಧವಾರ ಪ್ರಾರಂಭವಾಯಿತು. ಮೋರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ ಮತ್ತು ಕೇಂದ್ರ ಆಯುಷ್ ಸಚಿವಾಲಯ ಸಹಯೋಗದಲ್ಲಿ ಪ್ರಾರಂಭವಾಗಿರುವ ಈ ಶಿಬಿರದಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಪಾಲ್ಗೋಂಡಿದ್ದಾರೆ.  ವೈದ್ಯಕೀಯ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಈ ಸಾಮಾನ್ಯ ಯೋಗ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.  ಯೋಗ ಶಿಕ್ಷಕರಾದ ಮಡಿವಾಳಪ್ಪ ದೊಡ್ಡಮನಿ ಮತ್ತು ಕಾರ್ಯಕ್ರಮ ಸಂಯೋಜಕಿ ಡಾ. ಜ್ಯೋತಿ ಖೋದ್ನಾಪುರ ಈ ಸಂದರ್ಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು. ಇದೇ ತಿಂಗಳು ಜೂ. 21 ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ “ಒಂದು ಭೂಮಿ, ಒಂದು ಆರೋಗ್ಯ”– ಎಂಬ ಥೀಮ್ ದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಡೆಯಲಿದೆ.  Yoga Training Camp: ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಶರೀರವಿಜ್ಞಾನ ವಿಭಾಗದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚ...

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಇಮೇಜ್
 ಇಂಡಿ. ಭೀಮ ತೀರದಲ್ಲಿ ಮತ್ತೆ ರಕ್ತದ ಹೊಲಳೆ.  ಅನೈತಿಕ ಸಂಭಂದ ಹಿನ್ನೆಲೆಯಲ್ಲಿ  ಇಂಡಿ ಪಟ್ಟಣದಲ್ಲಿ ಬೆಳಗಿನ ಜಾವ  ಮಹಿಳಯ ಭಯಾನಕ ಕೊಲೆ ನಡೆದಿದೆ. ನಗರದ ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ಸಂಜು ಬನ್ಸೋಡೆ ಎಂಬ  ವ್ಯಕ್ತಿ ರೇಣುಕಾ ಸಯಬಣ್ಣ  ಕನ್ನೋಳಿ ಎಂಬ ಮಹಿಳೆಯ ಹೊಟ್ಟೆಗೆ ಕ್ರೂರವಾಗಿ ಚಾಕು ಇರಿದು ಹತ್ಯ ಗೈಯಲಾಗಿದೆ. ಮಹಿಳೆ  ಉಸಿರಾಡುತ್ತಲೇ ಇದ್ದ ಕಾರಣ ಅವರನ್ನು ಪೋಲಿಸರು ಹಾಗೂ ಸರಕಾರಿ ಅಸ್ಪತ್ರೆಯರು ಬಿಜಾಪೂರಕ್ಕೆ  ಕರೆದೊಯ್ಯಲಾಗುತ್ತಿತ್ತು. ಆದರೆ ಮಧ್ಯರಸ್ತೆಯಲ್ಲಿ ಅವರು ಕೊನೆಯುಸಿರೆಳೆದರು. ಕೊಲೆ ಮಾಡಿದ ವ್ಯಕ್ತಿಯನ್ನು ಈಗ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತಿಳಿದುಬಂದಂತೆ, ಕೊಲೆಯಾಗಿರುವ ಮಹಿಳೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಂಬಂಧಿ ಕೆಲಸ ಮಾಡುತ್ತಿದ್ದವರು ಹೇಳಲಾಗುತ್ತದೆ.

ಇಂದಿನ ಜನಸಾಮಾನ್ಯರು ಅರಣ್ಯ ನಾಶ ಮಾಡುತ್ತಿದ್ದಾರೆ. ನಿಸರ್ಗದಲ್ಲಿರುವ ಗಿಡ ಗಂಟೆಗಳನ್ನು ಕಡಿದರೆ ನಮ್ಮನ್ನು ನಾವು ಕಡಿದುಕೊಂಡಂತೆ : ಶಾಸಕ ಯಶವಂತ್ರಾಯಗೌಡ ಪಾಟೀಲ.

ಇಮೇಜ್
 ಇಂಡಿ: ಇಂದಿನ ಜನಸಾಮಾನ್ಯರು ಅರಣ್ಯ ನಾಶ ಮಾಡುತ್ತಿದ್ದಾರೆ. ನಿಸರ್ಗದಲ್ಲಿರುವ ಗಿಡ ಗಂಟೆಗಳನ್ನು ಕಡಿದರೆ ನಮ್ಮನ್ನು ನಾವು ಕಡಿದುಕೊಂಡಂತೆ. ಇಂತಹ ಗುಡ್ಡದಲ್ಲಿ ಹಲವಾರು ತರಹದ ಗಿಡ-ಮರಗಳನ್ನು ಬೆಳೆಸಿದ ಅರಣ್ಯ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು. ಅವರು ತಾಲೂಕಿನ ಸಾವಳಸಂಗ ಗ್ರಾಮದ ಜ್ಣಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ವೃಕ್ಷೋದ್ಯಾನದಲ್ಲಿ ಶ್ರೀ ಯಶವಂತರಾಯಗೌಡ ವಿ.ಪಾಟೀಲ ಫೌಂಡೇಶನ್(ರಿ), ಪಡನೂರ ಹಾಗೂ ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ವಲಯ(ಅರಣ್ಯ ಇಲಾಖೆ), ಇಂಡಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉಸಿರಿಗಾಗಿ-ಹಸಿರು ಅಭಿಯಾನ ಕಾಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಾವಳಸಂಗ ಗುಡ್ಡದ ಪರಿಸರ ಬೆಳೆಯಲು ವಿಜಯಪುರದ ಸಿದ್ಧೇಶ್ವರ ಶ್ರೀಗಳ ಕಳಕಳಿಯ, ಕನಸಿನ ಕೂಸು ಎಂದೇ ಹೇಳಬಹುದು. ಅವರು ಹಿಂದೆ ಈ ಪಾವನ ನೆಲದಲ್ಲಿ ಕುಳಿತು ಹೊಗಿದ್ದು ಸ್ಮರಣೀಯ, ಹಾಗಾಗಿ ಈ ಪಾವನ ನೆಲಕ್ಕೆ ಜ್ಝಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಎಂದು ನಾಮಕರಣ ಮಾಡಲಾಯಿತು. ಇವತ್ತು ನಾವೇಲ್ಲರು ಅವರ ನೆನಪು, ಬದುಕು, ಜ್ಜಾನಧರೆಯನ್ನು ಈ ಪರಿಸರದಲ್ಲಿ ಕಾಣುತ್ತಿದ್ದೇವೆ. ಆದ್ದರಿಂದ ಇಂದಿನಿಂದಲೇ ಈ ಭಾಗದಲ್ಲಿ ಜನಜಾಗೃತಿ, ಮನಸಾಪೂರ್ವಕ, ಪ್ರಜ್ಝಾಪೂರ್ವಕವಾಗಿ ಮೂಡಿಸಬೇಕು. ಇಂದು ಫೌಂಡೇಶನ ಹುಟ್ಟಿಕೊಂಡಿದ್ದು ಉತ್ತಮ ಆದರೆ ನಿಮ್ಮ ಕಾರ್ಯ ಹಲವಾರು ಸಮಸ್ಯೆಗಳ, ಬಡವರ ಏಳಿಗೆಗಾಗಿ ಕೆಲ...

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು