ಜೂ.21ರಂದು ಜಿಲ್ಲೆಯಲ್ಲಿ ರಾಜ್ಯಮಟ್ಟದ ಯೋಗೋತ್ಸವ ದಿನಾಚರಣೆ -ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ

 ಜೂ.21ರಂದು ಜಿಲ್ಲೆಯಲ್ಲಿ ರಾಜ್ಯಮಟ್ಟದ ಯೋಗೋತ್ಸವ ದಿನಾಚರಣೆ  -ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ 


ವಿಜಯಪುರ ಜೂನ್,12 (ಕರ್ನಾಟಕ ವಾರ್ತೆ) : ಮಕ್ಕಳ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಹಾಗೂ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯೊಂದಿಗೆ ಜೂ.21 ರಂದು ಜಿಲ್ಲೆಯಲ್ಲಿ ರಾಜ್ಯಮಟ್ಟದ ಯೋಗೋತ್ಸವ ಕಾರ್ಯಕ್ರಮ ಆಚರಿಸಲಾಗುವುದು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ತಿಳಿಸಿದರು. 


ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಯೋಗೋತ್ಸವ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಪ್ರಥಮವಾಗಿ ರಾಜ್ಯಮಟ್ಟದ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕಾಗಿ 15 ಲಕ್ಷ ರೂ.ಗಳನ್ನು ಅಕಾಡೆಮಿ ವತಿಯಿಂದ ಒದಗಿಸಲಾಗಿದ್ದು, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಯೋಗದಲ್ಲಿ ರಾಷ್ಟ್ರೀಯ ಹಾಗೂ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಸನ್ಮಾನ ಹಾಗೂ ಜೂ.22 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಯೋಗದ ಕುರಿತು ಪರಿಣಿತರಿಂದ ಚಿಂತನಾಗೋಷ್ಠಿ  ಹಾಗೂ ಯೋಗ ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು,ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.  


ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಜೂ.21ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ  ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದೊಂದಿಗೆ ಜರುಗುವ ಯೋಗೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಪದವಿಪೂರ್ವ ಕಾಲೇಜ್, ಪ್ರೌಢಶಾಲೆ, ವಿವಿಧ ವಸತಿ ನಿಲಯಗಳು ಸೇರಿದಂತೆ ವಿವಿಧ ಶಾಲಾ-ಕಾಲೇಜಿನ  2000 ವಿದ್ಯಾರ್ಥಿಗಳು ಭಾಗವಹಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತಾ ವ್ಯವಸ್ಥೆ,  ಕ್ರೀಡಾಂಗಣದ ಸ್ವಚ್ಛತೆ, ಅಂಬ್ಯೂಲೆನ್ಸ್ ವ್ಯವಸ್ಥೆ,  ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು. 


ಯೋಗೋತ್ಸವ ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಗುಣಮಟ್ಟದ ಟೀ ಶರ್ಟ್, ಕ್ಯಾಪ್ ಒದಗಿಸಬೇಕು. ಯೋಗದ ಮಹತ್ವ ಕುರಿತ ಕಿರುಪುಸ್ತಕವನ್ನು ಮಕ್ಕಳಿಗೆ ಒದಗಿಸುವುದು, ಕಾರ್ಯಕ್ರಮದ ವೇಳೆ ಮಳೆ ಬಂದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ಪರ್ಯಾಯ ವ್ಯವಸ್ಥೆಯ ಸಿದ್ಧತೆ ಕೈಗೊಳ್ಳಬೇಕು. ಕ್ರೀಡಾಂಗಣದಲ್ಲಿ ಎಲ್‍ಇಡಿ ಪರದೆ ಅಳವಡಿಕೆ, ಕುಡಿಯುವ ನೀರು, ಅಲ್ಪೋಪಹಾರ, ಯೋಗ ಮ್ಯಾಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು  ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ, ಆಯುಷ್ ಇಲಾಖೆಯ ಡಾ.ವಿದ್ಯಾವತಿ ಅಥಣಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಕರಾದ ಶ್ರೀಮತಿ ಟಿ.ಎಸ್.ಕೊಲ್ಹಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು