ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

 ಚಟಚಣ. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. 


ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ದೇಶದ ನಿಜವಾದ ಭವಿಷ್ಯ ಅಡಗಿರುವುದು ವಿದ್ಯಾರ್ಥಿಗಳ ಕೈಯಲ್ಲಿ. ಅಂತಹ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ  ಎಂದು ಹೇಳಿದರು

ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಗಠಾಣ ಶಾಸಕ ವಿಠಲ್  ಕಟಕಡೊಂಡ  ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದ್ದು, ನಿವೃತ್ತಿ ನಂತರವೂ ಮಕ್ಕಳಿಗೆ ಜ್ಞಾನ ಹಂಚುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು

ಸರ್ಕಾರಿ ಸೇವೆಯಲ್ಲಿ 30 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವುದು ಸುಲಭದ ಮಾತಲ್ಲ. ಅವರ ಸಾಧನೆ ಹೆಚ್ಚಿದೆ. ಮುಂದೆಯೂ ಮಕ್ಕಳಿಗೆ ಮಾರ್ಗದರ್ಶನ ಮಾಡುವುದನ್ನು ಮುಂದುವರಿಸಬೇಕು. ನಿವೃತ್ತ ಜೀವನವನ್ನು ಉತ್ತಮವಾಗಿ ಕಳೆಯಬೇಕು’ ಎಂದು ಹೇಳಿದರು.

ಪ್ರಸ್ತಾವಿಕ ಮಾತನಾಡಿದ ಶಿಕ್ಷಕರ ಸೋಸೈಟಿ ಅಧ್ಯಕ್ಷ ಎಸ್.ಎಸ್.ಪಾಟೀಲ  ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಹೇಳಿದರು. 


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ಮಲ್ಲು ಧೋತ್ರೆ, ಬಾಬೂಗೌಡ ಪಾಟೀಲ, ಕಾಂತುಗೌಡ ಪಾಟೀಲ, ಶ್ರೀಮತಿ ಸುಜಾತಾ ಹೂನೂರ, ಬಸವರಾಜ ನಾಡಗೇರಿ, ಯೂನುಸ ಅಲಿ ಮಕಾಂದಾರ, ಬಿಮೆಸ್.ಮಜಗಿ, ವ್ಹಿ.ಆಯ್.ಕಾಂಬಳೆ, ಎಸ್.ಎಸ್.ಮಾವಿನಮರ, ಎ.ಎಸ್.ಸೊನಗಿ, ಬಸವಂತ ಉಮರಾಣಿ, ಎಸ್.ಜೆ.ಪಾಟೀಲ, ಎಸ್.ಬಿ.ಪಾಟೀಲ, ಶ್ರೀಮತಿ ಎಸ್.ಬಿ.ತೇಲಿ, ಆರ್.ಎಸ್.ಗೊಡೆಕಾರ, ಡಿ.ಎಸ್.ಬಗಲಿ, ಸುರೇಶ ಕರ್ಜಗಿ, ವಿಜಯಕುಮಾರ ಕಾಂಬಳೆ ಸೇರಿದಂತೆ ತಾಲೂಕಿನ ಅನೇಕ ಶಿಕ್ಷಕರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು