ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ- ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿಯ ಮನೆಗಳ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ ಹಕ್ಕುತ್ತ ವಿತರಣೆಗೆ ಕ್ರಮ ವಹಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

 ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-  ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿಯ 

 ಮನೆಗಳ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ ಹಕ್ಕುತ್ತ ವಿತರಣೆಗೆ ಕ್ರಮ ವಹಿಸಿ

-ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ



ವಿಜಯಪುರ ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪಲೈನ್ ಸ್ಥಳಾಂತರಿಸುವ ಕಾಮಗಾರಿ, ಅರಕೇರಿ ಜಾಕವೆಲ್‌ದಿಂದ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಪರಿವೀಕ್ಷಣೆ ನಡೆಸಿದ ಅವರು, ಪೌರಕಾರ್ಮಿಕರ ಗೃಹಭಾಗ್ಯ (ಪಿ.ಕೆ.ಜಿ.ಬಿ)ಯೋಜನೆಯಡಿ ವಿಜಯಪುರ ನಗರದ ಹಂಚನಾಳ ಪಿ.ಎಚ್ ಗ್ರಾಮಕ್ಕೆ ಭೇಟಿ ನೀಡಿ,  ಈಗಾಗಲೇ ನಿರ್ಮಾಣಗೊಂಡಿರುವ ಹಾಗೂ ಹಂಚಿಕೆ ಮಾಡಲಾದ ಜಿ+೨ ಮಾದರಿಯ ೫೬ ಗುಂಪು ಮನೆಗಳಲ್ಲಿ  ವಾಸವಾಗಿರುವ ಫಲಾನುಭವಿಗಳ ಸಮಸ್ಯೆಯನ್ನು ಆಲಿಸಿದ ಅವರು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಗೆ ಕ್ರಮ ವಹಿಸುವಂತೆ ತಿಳಿಸಿದ ಅವರು, ನಿರ್ಮಾಣ ಹಂತದಲ್ಲಿರುವ ೬೦ ಗುಂಪು ಮನೆಗಳ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಉಳಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ  ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು. ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದಲ್ಲಿ  ಪಿಎಂಎವಾಯ್ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಜಿ+೧ ಮಾದರಿಯ ೧೪೯೩ ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು,  ಹಕ್ಕು ಪತ್ರ ಪಡೆದುಕೊಂಡು ವಾಸ ಮಾಡುತ್ತಿರುವ ಫಲಾನುಭವಿಗಳ ಮನೆಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 


ರಾಷ್ಡಿçÃಯ ಹೆದ್ದಾರಿಗೆ ಕೂಡುವ ನಗರದ ರಿಂಗ್ ರಸ್ತೆ ಶ್ರೀ ನೇತಾಜಿ ಸುಭಾಷಚಂದ್ರ ಭೋಸ ವೃತ್ತದಿಂದ ಸೊಲಾಪೂರ ರಾಷ್ಟಿçÃಯ ಹೆದ್ದಾರಿ ವರೆಗೆ ವಿದ್ಯುತ್ ಕಂಬಗಳ ಸ್ಥಳಾಂತರ, ಯು.ಜಿ.ಡಿ ಲೈನ್ ಸ್ಥಳಾಂತರ ಹಾಗೂ  ಕುಡಿಯುವ ನೀರಿನ ಪೈಪಲೈನ್‌ಗಳನ್ನು ಸ್ಥಳಾಂತರಿಸಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಯುದ್ದೋಪಾದಿಯಲ್ಲಿ ಕೈಗೊಂಡು ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

ವಿಜಯಪುರ ನಗರದ ವಿವಿಧ ವಾರ್ಡಗಳಿಗೆ ಕುಡಿಯುವ ನೀರಿನ ಜಲಮೂಲವಾಗಿರುವ ಭೂತನಾಳ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ  ಮುಖ್ಯ ಪಾತ್ರವಹಿಸುವ ಅರಕೇರಿ  ಜಾಕ್‌ವೇಲ್‌ಗೆ ಭೇಟಿ ನೀಡಿದ ಅವರು, ಕುಡಿಯುವ ನೀರು ಸರಬರಾಜು ಪ್ರಕ್ರೀಯೆಯಲ್ಲಿ ಯಾವುದೇ ತೊಂದರೆ ಉಂಟಾಗದAತೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ  ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು