ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಆಲಮೇಲ : ಭೀಮಾತೀರದಲ್ಲಿ ಯುವಕನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನಾಗರಹಳ್ಳಿ ರಸ್ತೆಯ ಜಮೀನಿನಲ್ಲಿ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಗಿಡಾದ ಯುವಕ ಫಾರುಕ ಲಾಳಸಂಗಿ 24 ವಯಸ್ಸು ಎಂದು ಗುರುತಿಸಲಾಗಿದ್ದು, ಕೊಲೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ ಸ್ಥಳಕ್ಕೆ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲಮೇಲ ಪೋಲಿಸ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ