ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ


ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ  


ವಿಜಯಪುರ 27. ಕ್ಯಾನ್ಸರ್ ನಿಂದ ಬಳಲುತ್ತಿರುವವರಿಗೆ ಅತ್ಯಾಧುನಿಕ ತಂತ್ರಜ್ಞಾನ ಚಿಕಿತ್ಸೆ ಕಲ್ಪಿಸಲು ಬಿ.ಎಲ್.ಡಿ.ಇ ಆಸ್ಪತ್ರೆ ಆವರಣದಲ್ಲಿ ನೂತನ ಕ್ಯಾನ್ಸರ್ ಘಟಕಕ್ಕೆ ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ  ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.


ಈ ಭಾಗದ ಜನ ಕ್ಯಾನ್ಸರ್ ನಿಂದ ತುತ್ತಾಗಿ ಸೂಕ್ತ ಚಿಕಿತ್ಸೆಗಾಗಿ ಬೆಂಗಳೂರಿಗೆ ಮತ್ತು ಹುಬ್ಬಳ್ಳಿಗೆ ಹೋಗಬೇಕಾಗಿದೆ. ಇದೀಗ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಈ ಸೌಲಭ್ಯ ಒದಗಿಸುವ ದೃಷ್ಟಿಯಿಂದ 100 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈ ಆಸ್ಪತ್ರೆಗೆ ಖ್ಯಾತ ಕ್ಯಾನ್ಸರ್ ತಜ್ಞ ಡಾ. ಶೇಖರ ಪಾಟೀಲ ಅವರು ಮಾರ್ಗದರ್ಶನ ಮಾಡಲಿದ್ದಾರೆ.



ನೂತನ ಕ್ಯಾನ್ಸರ್ ಘಟಕದಲ್ಲಿ ಕಾಂಪ್ರ್ಹೆನ್ಸಿವ್ ಕ್ಯಾನ್ಸರ್ ಬ್ಲಾಕ್, ರೇಡಿಯೋಥೇರಪಿ, ಪಿಇಟಿ ಸ್ಕ್ಯಾನ್ (ಪಾಸಿಟ್ರಾನ್ ಎಮಿಷನ್ ಟೊಮೊಗ್ರಫಿ), ನ್ಯೂಕ್ಲೀಯರ್ ಮೆಡಿಸಿನ್, ರೋಗಿಗಳಿಗೆ ವಸತಿ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ (ಓಂಕೊ ಸರ್ಜರಿ), ಕ್ಯಾನ್ಸರ್ ಮೆಡಿಸಿನ್ ಒಳಗೊಂಡಿದ್ದು, ಶೀಘ್ರದಲ್ಲಿಯೇ ಸೌಲಭ್ಯ ದೊರೆಯಲಿದೆ.


ಭೂಮಿ ಪೂಜೆ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ.ಅರುಣ ಇನಾಮದಾರ, ರಿಜಿಸ್ಟ್ರಾರ್ ಡಾ.ಆರ್.ವಿ.ಕುಲಕರ್ಣಿ, ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ಆಸ್ಪತ್ರೆ ಅಧೀಕ್ಷರಾದ ಡಾ.ರಾಜೇಶ ಹೊನ್ನುಟಗಿ, ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ, ಅಭಿಯಂತರರಾದ ಉಮೇಶ ಕರಡಿ, ರಾಜು ಮುಜುಮದಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  ಧನ್ಯವಾದಗಳು,

ಡಾ.ಮಹಾಂತೇಶ ಬಿರಾದಾರ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು