ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ದಶಕಗಳ ಕನಸು ನನಸು: ತಗಡೂರು

 ಗ್ರಾಮೀಣ ಪತ್ರಕರ್ತರ ಬಸ್ ಪಾಸ್

ದಶಕಗಳ ಕನಸು ನನಸು: ತಗಡೂರು


ಬೆಂಗಳೂರು:

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ.

 

ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ ಲವಾಗಿ ಈ ಯೋಜನೆ ಜಾರಿಗೆ ಬರುತ್ತಿದೆ.


ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಬಸ್ ಪಾಸ್ ನೀಡಬೇಕೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳ ಮುಂದೆ ಹಕ್ಕೋತ್ತಾಯ ಮಂಡಿಸಿದ್ದರು. ವೇದಿಕೆಯಲ್ಲಿಯೇ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಿಎಂ ಮನವೊಲಿಕೆ ಮಾಡಿದರು. ಕೂಡಲೇ ಅದಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಉಚಿತ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದಲ್ಲದೆ, ಬಜೆಟ್‌ನಲ್ಲಿಯೂ ೋಷಣೆ ಮಾಡಿದ್ದು, ಮರೆಯಲಾಗದ ಕ್ಷಣವಾಗಿತ್ತು.

 

ಬಸ್ ಪಾಸ್ ಯೋಜನೆ ಜಾರಿಗೆ ನೀಡಲು ಮೊದಲ ಬಾರಿಗೆ ಮನಸ್ಸು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಸ್ತ ಪತ್ರಕರ್ತರ ಪರವಾಗಿ ಧನ್ಯವಾದಗಳು. 


ಈ ಯೋಜನೆ ಜಾರಿ ಹಿಂದೆ ತೆರೆ ಮರೆಯ ಶಕ್ತಿಯಾಗಿ ಸಂಘಟನೆ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ವಾರ್ತಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು