ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆÀ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆÀ

ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ


 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ-ನೌಕರರು ನಿರಂತರವಾಗಿ ಶ್ರಮಿಸಿ, ಗ್ರಾಮೀಣ ಜನರಿಗೆ ಸೌಲಭ್ಯ ಒದಗಿಸಲು ಕಾರ್ಯನಿರ್ವಹಿಸುತ್ತಿದ್ದು,  ಒತ್ತಡದ ಕಾರ್ಯನಿರ್ವಹಣೆ ಮಧ್ಯದಲ್ಲಿಯೇ ತಮ್ಮ ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು. 

ಜಿಲ್ಲಾ ಪಂಚಾಯಿತಿ ವಿಜಯಪುರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ ಇವರ ಸಹಯೋಗದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಅಧಿಕಾರಿ, ನೌಕರರ ಮತ್ತು ಸಿಬ್ಬಂದಿಗಳಿಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಹಾಗೂ ಒತ್ತಡ ನಿರ್ವಹಣೆ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಕರ್ತವ್ಯದ ಸಂದರ್ಭದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಅವುಗಳಿಗೆ ಯಾವುದೇ ಒತ್ತಡಕ್ಕೊಳಗಾಗದೇ, ಸಮಾಧಾನವಾಗಿ ನಿಭಾಯಿಸಬೇಕು. ಸಾರ್ವಜನಿಕರಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತುರ್ತಾಗಿ ಒದಗಿಸುವ ಒತ್ತಡಗಳಿರುತ್ತವೆ. ಅಂತಹ ಸಂದರ್ಭಗಳಲ್ಲಿ ತಾಳ್ಮೆಯಿಂದ ನಿಭಾಯಿಸುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಬರುವ ಸಮಸ್ಯೆಗಳನ್ನು ಎದುರಿಸಲು ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಅವರು ಹೇಳಿದರು. 


ಸದಾ ಒತ್ತಡದಲ್ಲಿಯ ಕಾರ್ಯನಿರ್ವಹಿಸುವ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ನೌಕರರ ಮತ್ತು ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ವಿಶೇಷ ಕಾಳಜಿಯೊಂದಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು, ಆರೋಗ್ಯದ ಕುರಿತು ಯಾವುದೇ ಸಮಸ್ಯೆಗಳಿದ್ದಲ್ಲಿ ಭಯ ಪಡದೇ ಮುಕ್ತವಾಗಿ ವೈದ್ಯರೊಂದಿಗೆ ಮಾತನಾಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಒಂದೆಡೆ ಕಛೇರಿ ಕೆಲಸ, ಇನ್ನೊಂದು ಕಡೆ ಮನೆ ಕೆಲಸ, ಮಕ್ಕಳು,  ಕುಟುಂಬದ ಹಿರಿಯರ ಬಗ್ಗೆ ಗಮನ ಹರಿಸುತ್ತಾ ನಮ್ಮ ಆರೋಗ್ಯದ ಕಡೆಗೆ ಗಮನಹಿರಿಸಿರುವುದಿಲ್ಲ. ಇವೆಲ್ಲವುದರ ಜೊತೆಗೆ ಕಛೇರಿ ಕೆಲಸ ನಿಭಾಯಿಸಬೇಕು. ಮಲ್ಟಿಟಾಸ್ಕ್ (ಒuಟಣiಣಚಿsಞ) ಮಾಡಬೇಕು ಎಂದರೆ ಮನಸ್ಸು, ದೇಹ ಎರಡೂ ಸದೃಢವಾಗಿರಬೇಕು. ಆದ್ದರಿಂದ ಎಲ್ಲರೂ  ತಮ್ಮ ಆರೋಗ್ಯದ ಕಡೆ ಗಮನ ಹರಿಸುವಂತೆ ಅವರು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಡಾ.ವಿಜಯಕುಮಾರ ಆಜೂರ, ಸಹಾಯಕ ಕಾರ್ಯದರ್ಶಿಗಳಾದ ಅನುಸೂಯಾ ಚಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಸಂಪತ್ ಗುಣಾರಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ|| ಅರ್ಚನಾ ಕುಲಕರ್ಣಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ||  ಅಪ್ಪಾಸಾಹೇಬ ಇನಾಮದಾರ,  ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರಾದ ಸಿ. ಜಿ. ಪಾರೆ, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಮಟ್ಟದ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು