ಆಲಮಟ್ಟಿ ಲಾಲ್‌ಬಹಾದ್ಧೂರ ಶಾಸ್ತಿç ಜಲಾಶಯ ನೀರಿನ ಮಟ್ಟವನ್ನು ಹೆಚ್ಚಿಸಲು ಒತ್ತಾಯಿಸುವ ಹೋರಾಟ ಸಮಿತಿ ವತಿಯಿಂದ ಪತ್ರಿಕಾ ಗೋಷ್ಠಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

 ವಿಜಯಪುರ : ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ, ಜಲಾಶಯದ ನೀರಿನ ಮಟ್ಟವನ್ನು ೫೧೯.೬೦ ರಿಂದ ೫೨೪.೨೫೬ಕ್ಕೆ ನೀರು ನಿಲ್ಲಿಸಲು ಗೇಟ್ ಅಳವಡಿಸುವುದು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟಿçÃಯ ಯೋಜನೆ ಎಂದು ಘೋಷಣೆ ಮಾಡಿ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿ ಸೋಮವಾರದಂದು ವಿಜಯಪುರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆಲಮಟ್ಟಿ ಲಾಲ್‌ಬಹಾದ್ಧೂರ ಶಾಸ್ತಿç ಜಲಾಶಯ ನೀರಿನ ಮಟ್ಟವನ್ನು ಹೆಚ್ಚಿಸಲು ಒತ್ತಾಯಿಸುವ ಹೋರಾಟ ಸಮಿತಿ ವತಿಯಿಂದ ಪತ್ರಿಕಾ ಗೋಷ್ಠಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.


ದಿನಾಂಕ ಜೂನ್ ೩೦ ರಂದು ಬೆಳಿಗ್ಗೆ ೧೧. ಘಂಟೆಗೆ ನಿಡಗುಂದಿ ಬಳಿ ಹಾಯ್ದು ಹೋಗಿರುವ ರಾಷ್ಟಿçÃಯ ಹೆದ್ದಾರಿ ಪಕ್ಕದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 

ಸಮಿತಿ ಮುಖಂಡರಾದ ಅರವಿಂದ ಕುಲಕರ್ಣಿ ಹಾಗೂ ಶ್ರೀವಿಜಯ ಪೂಜಾರ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಹಾರಾಷ್ಟ್ರ ಸರ್ಕಾರ ದುರುದ್ದೇಶದಿಂದ ಉತ್ತರಕರ್ನಾಟಕದ ರೈತರನ್ನು ಬಲಿ ತೆಗೆದುಕೊಳ್ಳಲು ಹೊರಟಿದೆ, ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು ೫೨೪,೨೫೬ಕ್ಕೆ ನಿಲ್ಲಿಸಿದರೆ ಮಹಾರಾಷ್ಟ್ರ, ವ್ಯಾಪ್ತಿಯ ಸಾಂಗ್ಲಿ, ಸಾತಾರ, ಮಿರಜ ಸೇರಿದಂತೆ ಕೆಲವು ಜಿಲ್ಲೆಗಳು ಆಲಮಟ್ಟಿಯ ಹಿನ್ನೀರಿನಿಂದ ಪ್ರವಾಹಕ್ಕೆ ತುತ್ತಾಗುತ್ತವೆ' ಎಂದು ತಪ್ಪು ತಿಳುವಳಿಕೆ ಯಿಂದಲೋ ಅಥವಾ ಉದ್ದೇಶ ಪೂರ್ವಕವಾಗಿಯೋ ಹೋರಾಟಕ್ಕಿಳಿದು ಉತ್ತರ ಕರ್ನಾಟಕದ ರೈತರ ವಿರೋಧಿ ಎಂಬುದನ್ನು ಸಾಭೀತುಪಡಿಸಿದ್ದಾರೆ. ಈ ಹಿಂದೆ ಅಂದರೆ ೨೦೧೯ನೇ ಸಾಲಿನಲ್ಲಿ ಮಹಾರಾಷ್ಟ್ರ, ವ್ಯಾಪ್ತಿಯಲ್ಲಿ ಪ್ರವಾಹ ಬಂದಾಗ ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯದ ೫೧೯.೬೦ಕ್ಕೆ ನೀರು ನಿಲ್ಲಿಸಿದಾಗ ಆಲಮಟ್ಟಿ ಹಿನ್ನೀರಿನಿಂದಲೇ ಪ್ರವಾಹ ಉಂಟಾಗಿದೆ ಎಂದು ಬೊಬ್ಬೆಹೊಡೆದಿದ್ದರು. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರವೇ ತಮ್ಮ ಸರ್ಕಾರದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದ ನಂದಕುಮಾರ ವಡ್ಡರೆ' ಎಂಬುವರನ್ನು ನೇಮಿಸಿ ಅದಕ್ಕೆ ಒಂದು ತಂಡ ರಚನೆ ಮಾಡಿ ಆಲಮಟ್ಟಿಗೆ ಕಳುಹಿಸಿ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಮ್ಮವರನ್ನ ಕಳುಹಿಸಿತ್ತು. ಮಹಾರಾಷ್ಟ್ರದ ಅಧ್ಯಯನ ತಂಡ ಆಲಮಟ್ಟಿಗೆ ಆಗಮಿಸಿ, ಅಲ್ಲಿಯ ಪರಿಸ್ಥಿತಿಯನ್ನು ಸಂಪೂರ್ಣ ಅಧ್ಯಯನ ಮಾಡಿದ ನಂತರ ಮಹಾರಾಷ್ಟ್ರದಲ್ಲಿ ಪ್ರವಾಹ ಬಂದಿರುವುದು ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಅಲ್ಲ ಎನ್ನುವುದು ಅಧ್ಯಯನದಿಂದ ತಿಳಿದು ಬಂದಿದೆ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಸ್ಪಷ್ಟ ವರದಿಯನ್ನು ನೀಡಿದ್ದಾರೆ ಆದರೂ ಅದನ್ನು ಗಣನೆಗೆ ತೆಗೆದುಕೊಳ್ಳದೆ ಉದ್ದೇಶ ಪೂರ್ವಕವಾಗಿ ಅಲ್ಲಿಯ ರೈತರನ್ನು ಎತ್ತಿಕಟ್ಟಿ ಬೀದಿಗಿಳಿದು ಹೋರಾಟ ಮಾಡಿ ತಮ್ಮ ಬಂಡತನವನ್ನು ಪ್ರದರ್ಶಿಸುತ್ತಿದೆ. ಇದಕ್ಕೆ ಕರ್ನಾಟಕ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಒತ್ತಡಕ್ಕೆ ಮಣಿಯದೆ ಉತ್ತರ ಕರ್ನಾಟಕದ ರೈತರ ಹಿತ ಕಾಪಾಡಲು ನ್ಯಾಯಾಧೀಕರಣದ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕು. ೨೦೧೦ನೇ ಸಾಲನಲ್ಲಿಯೇ ನ್ಯಾ।। ಬ್ರಿಜೇಶ್ ಕುಮಾರ್ ನೇತೃತ್ವದ ೨ನೇ ನ್ಯಾಯಾಧೀಕರಣವು ತೀರ್ಪು ನೀಡಿತು. ಮತ್ತೆ ೨೦೧೩ರಲ್ಲಿ ಅಂತಿಮ ತೀರ್ಪು ನೀಡಿ ಅಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ, ಜಲಾಶಯದ ನೀರಿನ ಮಟ್ಟವನ್ನು ೫೨೪.೨೫೬ಕ್ಕೆ ನಿಲ್ಲಿಸಲು ಗೇಟ್ ಅಳವಡಿಸಲು ಸ್ಪಷ್ಟವಾದ ತೀರ್ಪು ನೀಡಿದೆ ಆ ತೀರ್ಪಿನನ್ವಯ ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಮಹಾರಾಷ್ಟ್ರ ಸರ್ಕಾರ ತೆಗೆದಿರುವ ಕ್ಯಾತೆಗೆ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಮಹಾರಾಷ್ಟ್ರ ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಮತ್ತು ಕೇಂದ್ರ ಸರ್ಕಾರವು ಕೂಡಾ ಅಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯದ ನೀರಿನ ಮಟ್ಟವನ್ನು ೫೨೪.೨೫೬ಕ್ಕೆ ನಿಲ್ಲಿಸಲು ಕೂಡಲೇ ಅಧಿಸೂಚನೆ ಹೊರಡಿಸಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ ಕೇಂದ್ರ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡು ಜಲಾಶಯದ ನೀರಿನ ಮಟ್ಟವನ್ನು ೫೨೪.೨೫೬ ಕ್ಕೆ ನೀರು ನಿಲ್ಲಿಸಲು ಗೇಟ್ ಅಳವಡಿಸಬೇಕೆಂದು ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟ ಹೆಚ್ಚಿಸುವ ಹೋರಾಟ ಸಮಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಇದೇ ಸಂದರ್ಭದಲ್ಲಿ ಕರಪತ್ರವು ಬಿಡುಗಡೆ ಮಾಡಲಾಯಿತು. ಈ ಹೋರಾಟಕ್ಕೆ ಉತ್ತರ ಕರ್ನಾಟಕದ ಎಲ್ಲ ರೈತಪರ ಸಂಘಟನೆಗಳು ದಲಿತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಹಾಗೂ ನಾಡಿನ ಎಲ್ಲಾ ಮಠಾಧೀಶರು, ಸೇರಿದಂತೆ ರಾಜಕೀಯ ನಾಯಕರು ಕೂಡಾ ಪಕ್ಷಾತೀತವಾಗಿ, ರಾಜಕೀಯ ರಹಿತವಾಗಿ ರೈತ ಕುಲ ಉಳಿವಿಗಾಗಿ ಹೋರಾಟದಲ್ಲಿ ಆಗಮಿಸಬೇಕೆಂದು ಪತ್ರಿಕಾ ಗೋಷ್ಠಿ ಮುಖಾಂತರ ಮನವಿ ಮಾಡಿಕೊಂಡಿದ್ದಾರೆ. 

ಈ ಸಂದರ್ಭದಲ್ಲಿ ರೈತ ಮುಖಂಡರಾದ ಶ್ರೀವಿಜಯ ಪೂಜಾರ, ಶಂಕರ ಹಿರೇಗೌಡರ,  ಶಾರದಾ ಕಾಳಮ್ಮನವರ, ಸುಜಾತ ಬಂಡಿವಡ್ಡರ, ಗುಡುಮಾ ವಾಲೀಕಾರ, ಮಂಜುಳಾ ಹನುಮದ, ನಿಂಗವ್ವ ಸಿಂಗಾನವರ, ಆರ್.ಕೆ. ಕಲಬುರಗಿ, ಬಸವರಾಜ ಗೋನಾಳ ಮುಂತಾದವರು ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು