ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ 'ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ'ದ ನಿಮಿತ್ತ ಹಮ್ಮಿಕೊಂಡ 'ಪ್ಲಾಸ್ಟಿಕ್ ಚೀಲ ಬಿಡಿ-ಬಟ್ಟೆ ಚೀಲ ಹಿಡಿ' ಚರ್ಚಾಗೋಷ್ಠಿ.

 'ಪ್ಲಾಸ್ಟಿಕ್ ಚೀಲ ಬಿಡಿ-ಬಟ್ಟೆ ಚೀಲ ಹಿಡಿ' 

ಬಟ್ಟೆ ಚೀಲ ಬಳಸುವ ರೂಢಿ ದೈನಂದಿನ ಜೀವನದ ಭಾಗವಾಗಲಿ-ಸಂತೋಷ ಬಂಡೆ



ಇಂಡಿ: ಪ್ಲಾಸ್ಟಿಕ್‌ ತ್ಯಾಜ್ಯವು ಜಾಗತಿಕ ಸಮಸ್ಯೆಯಾಗಿದೆ. ಜಗತ್ತಿನ ಅತಿ ಎತ್ತರದ ಗಿರಿ ಶಿಖರಗಳಿಂದ ಹಿಡಿದು ಆಳ ಸಮುದ್ರದ ಒಡಲೊಳಗೆ ಸೇರಿಕೊಳ್ಳುತ್ತಿರುವ ಇದು ಜನ, ಜಾನುವಾರು ಹಾಗೂ ಸಸ್ಯ ಸಂಕುಲಕ್ಕೆ ಮಾರಕವಾಗಿದ್ದು, ಇದರ ನಿಯಂತ್ರಣ ಇಂದಿನ ಅಗತ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

        ಗುರುವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ 'ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ'ದ ನಿಮಿತ್ತ ಹಮ್ಮಿಕೊಂಡ 'ಪ್ಲಾಸ್ಟಿಕ್ ಚೀಲ ಬಿಡಿ-ಬಟ್ಟೆ ಚೀಲ ಹಿಡಿ' ಚರ್ಚಾಗೋಷ್ಠಿಯನ್ನು  ಉದ್ಧೇಶಿಸಿ ಅವರು ಮಾತನಾಡಿದರು.

       ಪ್ಲಾಸ್ಟಿಕ್‌ ವಸ್ತುಗಳು ಮಣ್ಣಿನಲ್ಲಿ ಕೊಳೆಯುವುದಿಲ್ಲ. ಅವನ್ನು ಸುಟ್ಟರೆ ‘ಡಯಾಕ್ಸಿನ್‌’ ಎಂಬ ವಿಷಪೂರಿತ ಅಂಶ ಬಿಡುಗಡೆಯಾಗಿ, ಅದು ಗಾಳಿಯಲ್ಲಿ ಬೆರೆತು ಉಸಿರಾಟಕ್ಕೆ ತೊಂದರೆಯಾಗುತ್ತದೆ. ಪ್ಲಾಸ್ಟಿಕ್ ಚೀಲಗಳ ಬಳಕೆ ಕಡಿಮೆ ಮಾಡಿ, ಬಟ್ಟೆ ಚೀಲ ಬಳಸುವ ರೂಢಿ ದೈನಂದಿನ ಜೀವನದ ಭಾಗವಾಗಬೇಕಿದೆ ಎಂದು ಹೇಳಿದರು.

         ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ತರಕಾರಿ, ದಿನಸಿ ವಸ್ತುಗಳನ್ನು ತರಲು ಪ್ಲಾಸ್ಟಿಕ್ ಚೀಲದ ಬದಲಾಗಿ ಬಟ್ಟೆ ಚೀಲಗಳನ್ನು ಬಳಸುವ ರೂಢಿ ಎಲ್ಲರಲ್ಲಿ ಮೂಡಿದಾಗ ಪ್ಲಾಸ್ಟಿಕ್ ಮಾಲಿನ್ಯದಿಂದ ಮುಕ್ತವಾಗಿ, ಸದೃಢ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.


         ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು