ಚಟುವಟಿಕೆ ಮೂಲಕ ಕಲಿಕೆ ನಿರಂತರವಾಗಿ ಸಾಗಲಿ-ಬಿಇಓ ಮುಜಾವರ

 ಚಟುವಟಿಕೆ ಮೂಲಕ ಕಲಿಕೆ ನಿರಂತರವಾಗಿ ಸಾಗಲಿ-ಬಿಇಓ ಮುಜಾವರ


ಇಂಡಿ: ಪ್ರತಿ ಮಗುವು ಕೂಡ ಸ್ಪಷ್ಟವಾಗಿ ಓದಲು, ಬರೆಯಲು  

ಬರುವಂತೆ ವಿವಿಧ ಬೋಧನಾ ತಂತ್ರಗಳನ್ನು ಶಿಕ್ಷಕರು ರೂಢಿಮಾಡಿಕೊಂಡು ಎಫ್ ಎಲ್ ಎನ್ ಉದ್ದೇಶವನ್ನು ಸಾಕಾರಗೊಳಿಸಬೇಕು ಎಂದು ಇಂಡಿ ಬಿಇಓ ಶ್ರೀಮತಿ ಎಸ್ ಎಸ್ ಮುಜಾವರ ಹೇಳಿದರು.

        ಅವರು ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಎಫ್ ಎಲ್ ಎನ್ ಕಲಿಕಾ ಪ್ರಗತಿ ಪರಿಶೀಲಿಸಿ ಮಾತನಾಡಿದರು.

      ಎಫ್ ಎಲ್ ಎನ್ ಚಟುವಟಿಕೆಗಳು ಮಕ್ಕಳಲ್ಲಿ ಕಲಿಕೆಯ  ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತವೆ. ಈ ಚಟುವಟಿಕೆಗಳು ಮಕ್ಕಳ ಓದುವಿಕೆ ಮತ್ತು ಬರೆಯುವಿಕೆಯನ್ನು ಸುಲಭವಾಗಿಸುತ್ತವೆ. ಹಾಗಾಗಿ ಮಕ್ಕಳಿಗೆ ಚಟುವಟಿಕೆ ಮೂಲಕ ಕಲಿಕೆ ನಿರಂತರವಾಗಿ ಸಾಗಲಿ ಎಂದು ಆಶಿಸಿದರು.

        ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಮಾತನಾಡಿ, ಮಕ್ಕಳು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಕಲಿಕಾ ಅಡಿಪಾಯ ಹಾಕಿಕೊಳ್ಳಲು ಎಫ್ ಎಲ್ ಎನ್ ಚಟುವಟಿಕೆಗಳು ಸಹಕಾರಿಯಾಗಿವೆ. ಎಫ್ ಎಲ್ ಎನ್ ಚಟುವಟಿಕೆಗಳನ್ನು ಶಾಲೆ ಮತ್ತು ಮನೆಯಲ್ಲಿ ರೂಢಿಸಿಕೊಂಡು, ಮಕ್ಕಳು ಉತ್ತಮ ಕಲಿಕಾ ಅನುಭವ ಪಡೆಯಬೇಕು ಎಂದು ತಿಳಿಸಿದರು.

       ಬಿ ಆರ್ ಪಿ ಅಧಿಕಾರಿ ಅಲ್ಲಾಭಕ್ಷ ಚೌಧರಿ ಹಾಗೂ ಮೂರು ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು