ಕನ್ನಡ ಜಾನಪದ ಪರಿಷತ್ತು ತಾಲೂಕು ಘಟಕ ಇಂಡಿ ವತಿಯಿಂದ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಆಚರಿಸಲಾಯಿತು,

 ವಿಶ್ವ ಬುಡಕಟ್ಟು ದಿನ ಆಚರಣೆ 


ಇಂಡಿ : ಇಲ್ಲಿನ ಸ್ಥಳೀಯ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಇಂಡಿಯಲ್ಲಿ ಕನ್ನಡ ಜಾನಪದ ಪರಿಷತ್ತು ತಾಲೂಕು ಘಟಕ ಇಂಡಿ ವತಿಯಿಂದ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಆಚರಿಸಲಾಯಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಜಾಪ ಅಧ್ಯಕ್ಷರಾದ ಶ್ರೀ ಪಿ.ಬಿ.ಅವಜಿಯವರು ವಹಿಸಿಕೊಂಡಿದ್ದರು, ಕಾರ್ಯಕ್ರಮದ ಉದ್ಘಾಟನೆಯನ್ನು ಇಂಡಿಯ ನೌಕರರ ಸಂಘದ ನಿರ್ದೇಶಕರಾದ ಶ್ರೀ ಎಸ್.ಆರ್ ಪಾಟೀಲ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ' ಭಾರತ ಹಲವಾರು ಸಂಸ್ಕೃತಿಗಳ ತವರು, ಆದಿವಾಸಿಗಳ  ಸಂಸ್ಕೃತಿ, ಪರಂಪರೆಗೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ನಾವೆಲ್ಲರೂ ಗೌರವಿಸಬೇಕು ಎಂದರು.



 ಉಪನ್ಯಾಸಕರಾಗಿ ಆಗಮಿಸಿದ್ದ ಪ್ರೊ:ಶ್ರೀ ರವಿ ಅರಳಿಯವರು' ಜಾಗತಿಕವಾಗಿ ಸ್ಥಳೀಯ ಸಮುದಾಯಗಳ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ, ಪರಂಪರೆ ಮತ್ತು ಕೊಡುಗೆಗಳನ್ನು ಗಮನದಲ್ಲಿಟ್ಟುಕೊಳ್ಳಲು ವಿಶ್ವದ ಸ್ಥಳೀಯ ಜನರ ಅಂತರಾಷ್ಟ್ರೀಯ ದಿನವೂ ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ, ಆದಿವಾಸಿ ಜನರು ಜಾಗತಿಕ ಜನಸಂಖ್ಯೆ ಐದು ಪ್ರತಿಶತಕ್ಕಿಂತ ಕಡಿಮೆ ಇದ್ದರೂ ಅವರ ವಿಶ್ವದ ಬಡಜನರಲ್ಲಿ 15 ಪ್ರತಿಶತದ ಪಾಲಿನಲ್ಲಿದ್ದಾರೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿ

 ಶ್ರೀ ಪಿ.ಬಿ.ಅವಜಿಯವರು ಆದಿವಾಸಿ ಜನರ ಯೋಗ ಕ್ಷೇಮ ಘನತೆ ಮತ್ತು ಒಳಗೊಳ್ಳುವಿಕೆಯನ್ನು ಖಚಿತ ಪಡಿಸಿಕೊಳ್ಳಲು ಸರಕಾರಗಳು ಸಂಸ್ಥೆಗಳು ಮತ್ತು ಸಮಾಜಗಳ ನಡುವಿನ ಸಹಯೋಗದ ಅಗತ್ಯವನ್ನು ಈ ದಿನಾಚರಣೆಯು ಎತ್ತಿ ತೋರಿಸುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ಶ್ರೀ ಸಿದ್ದು ಅರಳಗುಂಡಗಿ, ಶ್ರೀ ಮಲ್ಲಿಕಾರ್ಜುನ ನೇದಲಗಿ, ಶ್ರೀ ಜಟ್ಟೆಪ್ಪ ಮಾದರ, ಶ್ರೀ ಅಶೋಕ ಹೊಸಮನಿ, ಶ್ರೀ ಸಾಗರ ಮಾನೆ ಹಾಗೂ ಸಂಗಡಿಗರು ಸಾಂಸ್ಕೃತಿಕ  ಕಾರ್ಯಕ್ರಮ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಭಾಗವಹಿಸಿದ್ದರು,

ಶ್ರೀಮತಿ ಬಿ.ಸಿ.ಭಗವಂತಗೌಡರ ನಿರೂಪಿಸಿದರು,

ಶ್ರೀ ಜಟ್ಟೆಪ್ಪ ಮಾದರ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು