ಜನಪದ ಕಲೆ ಗ್ರಾಮೀಣ ಸಂಸ್ಕೃತಿ, ಪರಂಪರೆಯ ಪ್ರತೀಕ- ಅಭಿನವ ಮುರುಗೇಂದ್ರ ಶ್ರೀಗಳು

 ಜನಪದ ಕಲೆ ಗ್ರಾಮೀಣ ಸಂಸ್ಕೃತಿ, ಪರಂಪರೆಯ ಪ್ರತೀಕ- 

ಅಭಿನವ ಮುರುಗೇಂದ್ರ ಶ್ರೀಗಳು



ಇಂಡಿ: ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು

ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳವಾಗಿವೆ ಎಂದು ಕನ್ನಡ ಜಾನಪದ ಪರಿಷತ್ತಿನ ತಾಲೂಕ ಗೌರವಾಧ್ಯಕ್ಷರಾದ ಶ್ರೀ ಷ ಬ್ರ ಅಭಿನವ ಮುರುಗೇಂದ್ರ ಶಿವಾಚಾರ್ಯರು ಹೇಳಿದರು.

       ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಕನ್ನಡ ಜಾನಪದ ಪರಿಷತ್ತು ಇಂಡಿ ಘಟಕದ ವತಿಯಿಂದ ಹಮ್ಮಿಕೊಂಡ "ವಿಶ್ವ ಜಾನಪದ ದಿನಾಚರಣೆ"ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

        ಜನಪದ ಕಲೆಗಳು ಗ್ರಾಮೀಣ ಜನರ ಜೀವನ ವಿಧಾನ, ನಂಬಿಕೆ, ಮೌಲ್ಯಗಳನ್ನು ಪ್ರತಿಬಿಂಬಿಸುತ್ತವೆ. ಅವು

ಮನರಂಜನೆ ನೀಡುವ ಜತೆಗೆ ಸಾಮಾಜಿಕ ಬಾಂಧವ್ಯವನ್ನು ವೃದ್ಧಿಗೊಳಿಸಿ, ಮುಂದಿನ ಪೀಳಿಗೆಗೆ ಸಾಂಸ್ಕೃತಿಕ ಪರಂಪರೆಯನ್ನು ಕೊಂಡೊಯ್ಯುತ್ತವೆ ಎಂದು ಹೇಳಿದರು.   


 

     ಉಪನ್ಯಾಸ ನೀಡಿ ಮಾತನಾಡಿದ ಶಿಕ್ಷಕ ಸಂತೋಷ ಬಂಡೆ, ನಮ್ಮ ಸನಾತನ ಜನಪದ ಕಲೆಯು ಗ್ರಾಮೀಣ ಸಂಸ್ಕೃತಿ, ಪರಂಪರೆಯ ಪ್ರತೀಕ. ಗ್ರಾಮೀಣ ಜನರ ದೈನಂದಿನ ಬದುಕಿನಲ್ಲಿ ಜನಪದ ಕಲೆ ಹಾಸುಹೊಕ್ಕಾಗಿದೆ. ಸಾಹಿತ್ಯ ಮತ್ತು ಕಲೆಗಳ ಮೂಲ ಬೇರುಗಳು ಜಾನಪದದಲ್ಲಿವೆ. ಆದ್ದರಿಂದ ಇಂದಿನ ಮಕ್ಕಳು ಆಧುನಿಕ ಅಬ್ಬರಗಳಿಗೆ ಮಾರುಹೋಗದೆ ಜನಪದ ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸಬೇಕು ಎಂದು ಹೇಳುತ್ತಾ,

      ದೇಶೀಯ ಕಲೆ,ಸಂಸ್ಕೃತಿ ಮರೆತರೆ ಬದುಕಿನ ಸತ್ವವನ್ನು ಕಳೆದುಕೊಂಡಂತೆ. ಜನಪದ ನಮ್ಮ ಸಂಸ್ಕೃತಿಯ ಮೂಲ. ಜಾಗತೀಕರಣ, ಪಾಶ್ಚಿಮಾತ್ಯ ಸಂಸ್ಕೃತಿಯ ರೂಢಿಯಿಂದ ಜನಪದ ಕಲೆ ಮರೆಯಾಗುತ್ತಿದೆ. ನಮ್ಮ ಜನಪದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅದರ ಮೂಲಕವೇ ನಮ್ಮ ಹಿರಿಯರು ಬದುಕು ಕಟ್ಟಿಕೊಂಡು ಬೆಳೆದವರು. ನಮ್ಮ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಲು ನಾವು ಮುಂದಾಗಬೇಕು ಎಂದು ಹೇಳಿದರು.


        ಕನ್ನಡ ಜಾನಪದ ಪರಿಷತ್ತಿನ ತಾಲೂಕಾಧ್ಯಕ್ಷ ಪಂಡಿತ ಅವಜಿ ಮಾತನಾಡಿ, ಸಮೃದ್ಧ ಬದುಕಿಗೆ ಮನುಷ್ಯ ಸಂಬಂಧ, ಪ್ರೀತಿ, ವಾತ್ಸಲ್ಯ, ಉತ್ಸಾಹ ಬೇಕು. ಇಂತಹ ಉತ್ಸಾಹದ ಬದುಕನ್ನು ಜಾನಪದ ಸಾಹಿತ್ಯ ನಮಗೆ ನೀಡುತ್ತದೆ. ಬದುಕಿನ ಜೀವಸೆಲೆಯಾಗಿರುವ ಜನಪದ ಸಾಹಿತ್ಯ, ಸಂಸ್ಕೃತಿಯ ಮಹತ್ವವನ್ನು ಅರಿತು ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.

     ಶಿಕ್ಷಕ ಎಸ್ ಆರ್ ಚಾಳೇಕರ ಪ್ರಾಸ್ತಾವಿಕವಾಗಿ ಮಾತನಾಡಿ, ಜನಪದ ಕಲೆಗಳು ಸಮಾಜದ ಸಾಂಸ್ಕೃತಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವವಾಗಿದ್ದು, ಅವನ್ನು ಸಂರಕ್ಷಿಸಿ, ಉತ್ತೇಜಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

        ಮುಖ್ಯ ಶಿಕ್ಷಕ ಅನಿಲ ಪತಂಗಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕರಾದ ವ್ಹಿ ವೈ ಪತ್ತಾರ, ಎಸ್ ಎಸ್ ಅರಬ ಹಾಗೂ ಶಾಲಾ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು. ಸಾಗರ ಮಾನೆ ತಂಡದಿಂದ ಜಾನಪದ ಕಾರ್ಯಕ್ರಮಗಳು ಜರುಗಿದವು. ತಾಲೂಕ ಕಜಾಪ ಪ್ರಧಾನ ಕಾರ್ಯದರ್ಶಿ ಜಟ್ಟಪ್ಪ ಮಾದರ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸಾವಿತ್ರಿ ಸಂಗಮದ ಸ್ವಾಗತಿಸಿದರು. ಶಿಕ್ಷಕಿ ಎಸ್ ಡಿ ಬಿರಾದಾರ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು