ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಮುಖ್ಯ: ಸಂತೋಷ ಬಂಡೆ

 ರಾಷ್ಟ್ರೀಯ ಕ್ರೀಡಾ ದಿನ

ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಮುಖ್ಯ: ಸಂತೋಷ ಬಂಡೆ



ಇಂಡಿ: ವ್ಯಕ್ತಿಯ ದೈಹಿಕ, ಮಾನಸಿಕ ಯೋಗಕ್ಷೇಮ ಮತ್ತು ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಯು ಮುಖ್ಯವಾಗಿದ್ದು, 

ಇದು ಎಲ್ಲರಲ್ಲಿ ಏಕತೆಯ ಭಾವನೆಯನ್ನು ಮೂಡಿಸಿ, ರಾಷ್ಟ್ರೀಯತೆ ಮತ್ತು ದೇಶಪ್ರೇಮವನ್ನು ಬೆಳೆಸುತ್ತದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

     ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಮೇಜರ್ ಧ್ಯಾನಚಂದ ಅವರ ಜನ್ಮದಿನದ ನಿಮಿತ್ತ ಹಮ್ಮಿಕೊಂಡ "ರಾಷ್ಟ್ರೀಯ ಕ್ರೀಡಾ ದಿನ"ವನ್ನು ಉದ್ಘಾಟಿಸಿ ಅವರು ಮಾತನಾಡಿದರು.


       ಕ್ರೀಡೆಯು ವ್ಯಕ್ತಿಯ ವ್ಯಕ್ತಿತ್ವವನ್ನು ಸುಧಾರಿಸಿ, ಅವರಲ್ಲಿ  ಶಿಸ್ತು, ಕ್ರೀಡಾ ಮನೋಭಾವ, ತಂಡದ ಕೆಲಸ ಮತ್ತು ಸ್ಪರ್ಧಾತ್ಮಕತೆಯ ಮೌಲ್ಯಗಳನ್ನು ಕಲಿಸುತ್ತದೆ. ಅದು ವಿವಿಧ ಜನರನ್ನು ಒಟ್ಟುಗೂಡಿಸಿ, ಏಕತೆ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ಕ್ರೀಡೆಯಿಂದ ಸಾಮಾಜಿಕ ಕೌಶಲ್ಯ ಅಭಿವೃದ್ಧಿ ಹೊಂದಿ, ಅದು ದೇಶದ ಆರ್ಥಿಕತೆಗೆ ಸಹಾಯ ಮಾಡುತ್ತದೆ.ಕ್ರೀಡೆಯು ತಾಳ್ಮೆ, ಶಿಸ್ತು, ಪ್ರಾಮಾಣಿಕತೆ, ಸಮರ್ಪಣೆ ಮತ್ತು ಜೀವನದ ವೈಫಲ್ಯಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸುತ್ತದೆ ಎಂದು ಹೇಳಿದರು.

      ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಮಕ್ಕಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು