ವಿದ್ಯಾರ್ಥಿ ಬೆಳವಣಿಗೆಯಲ್ಲಿ ಕ್ರೀಡೆಗಳು ಮುಖ್ಯ ಇಂಡಿ ಶಾಸಕರ ಸಹೋದರರಾದ ಬಸವಂತ್ರಾಯಗೌಡ ಪಾಟೀಲರು ಹೇಳಿದರು.

 ವಿದ್ಯಾರ್ಥಿ ಬೆಳವಣಿಗೆಯಲ್ಲಿ ಕ್ರೀಡೆಗಳು ಮುಖ್ಯ 

ಅಗರಖೇಡ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ.



ಇಂಡಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತೇವೆ ಎಂದು ಇಂಡಿ ವಿಧಾನಸಭೆ ಮತಕ್ಷೇತ್ರದ ಶಾಸಕರ ಸಹೋದರರಾದ ಬಸವಂತ್ರಾಯಗೌಡ ಪಾಟೀಲರು ಹೇಳಿದರು.

     ‌.            ಅವರು ಜಿಲ್ಲಾ ಪಂಚಾಯಿತಿ, ವಿಜಯಪುರ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಇಂಡಿ ಹಾಗೂ ಅಗರಖೇಡ ಕ್ಲಸ್ಟರ್ ಇವರ ಅದೀನದಲ್ಲಿ ಪಡನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಗರಖೇಡ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 

                    ಕ್ರೀಡೆಯಲ್ಲಿ ದೈಹಿಕವಾಗಿ ಗಟ್ಟಿಯಾಗಿ ಆರೋಗ್ಯವಂತರಾಗಿದ್ದರೆ ಮಾತ್ರ ಕ್ರೀಡಾ ಚಟುವಟಿಕೆಗಳನ್ನು ಕೊಡಗುತ್ತಾ, ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಅದಕ್ಕಾಗಿ ಮಕ್ಕಳು ಓದಿನ ಜೊತೆಗೆ ಪ್ರತಿದಿನ ಶಾಲೆಯಲ್ಲಿ ನಡೆಯುವ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ತಮ ಆರೋಗ್ಯವಂತರಾಗಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


                     ಶಾಲೆಯ ಎಸ ಡಿ ಎಂ ಸಿ ಅಧ್ಯಕ್ಷ ಭೀಮಶಂಕರ ಭೈರಜಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ.ಅದಕ್ಕಾಗಿ ಎರಡನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಸ್ಪರ್ಧೆಯನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

                    ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಎಂ ಎಸ್ ಚವ್ಹಾಣ ಪ್ರಸ್ತಾವಿಕವಾಗಿ ಮಾತನಾಡಿದರು. ಗ್ರಾಮದ ಪ್ರಮುಖರಾದ ಮಾಜಿ ತಾ ಪಂ ಸದಸ್ಯ ಕಲ್ಲನಗೌಡ ಬಿರಾದಾರ ಸಸಿಗೆ ನೀರೆರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ನಿಕಟ ಪೂರ್ವ ಬಿ ಆರ್ ಪಿ ಆರ್ ವಿ ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಸಾತಪ್ಪ ಲಿಗಾಡೆ,ಮಾಜಿ ಸೈನಿಕ ಚನ್ನಬಸಪ್ಪ ಸಾಲೋಟಗಿ, ಅಗರಖೇಡ ಗ್ರಾಮದ ಶಾಲೆಗಳ ಮುಖ್ಯ ಗುರುಗಳಾದ ಎಂ ಐ ಉಮರಾಣಿ, ಎಸ್ ಬಿ ರಾವಜಿ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಮಹಾಂತೇಶ ಅವರಾದಿ, ಮಾಜಿ ಗ್ರಾಫಂ ಅಧ್ಯಕ್ಷ ಷಡಕ್ಷರಿ ಮೇತ್ರಿ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿಗಳಾದ ಶಂಕರ ಚವ್ಹಾಣ, ಶಾಲೆಯ ಮುಖ್ಯ ಗುರುಗಳಾದ ಕೆ ಆಯ್ ಉಮರಾಣಿ, ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಎಲ್ ಟಿ ವೀರಶೆಟ್ಟಿ,ಎಂ ಸಿ ಸಾವಳಗಿ, ಎಚ್ ಬಿ ಕಾಗವಾಡಕರ, ಅಶೋಕ ಬನಸೋಡೆ ಶಿಕ್ಷಕರು ವೇದಿಕೆಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಇದಕ್ಕೂ ಮುಂಚೆ ದೈಹಿಕ ಶಿಕ್ಷಕರಾದ ಆರ್ ಕೆ ಹಳ್ಳಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.


                     ಶಾಲೆಯ ಸಹ ಶಿಕ್ಷಕರಾದ ಶಹಾಜಿ ಪಾಟೀಲ, ಎನ್‌ ಕೆ ಸಕ್ಕರಶೆಟ್ಟಿ, ಎಸ್ಎಸ್ ಅವರಾದಿ, ಉಪಸ್ಥಿತರಿದ್ದರು. ಅಗರಖೇಡ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು